AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ತರಕಾರಿ ಸೇವನೆ ಮಾಡುವುದನ್ನು ಕಡೆಗಣಿಸಬೇಡಿ, ಆರೋಗ್ಯ ಪ್ರಯೋಜನ ತಿಳಿದರೆ ಆಶ್ಚರ್ಯವಾಗುತ್ತೆ

ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವು ಅದರ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಟೊಮೆಟೊದಲ್ಲಿ ಪೊಟ್ಯಾಸಿಯಮ್ ಅಂಶ ಹೇರಳವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ತರಕಾರಿ ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೃದಯದ ಆರೋಗ್ಯಕ್ಕೂ ಕೂಡ ಉಪಯುಕ್ತವಾಗಿದೆ.

Health Tips:  ಈ ತರಕಾರಿ ಸೇವನೆ ಮಾಡುವುದನ್ನು ಕಡೆಗಣಿಸಬೇಡಿ, ಆರೋಗ್ಯ ಪ್ರಯೋಜನ ತಿಳಿದರೆ ಆಶ್ಚರ್ಯವಾಗುತ್ತೆ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Jun 15, 2024 | 6:30 PM

Share

ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ ಅದರ ಜೊತೆಗೆ ಇತರ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಜನರನ್ನು ಹೈರಾಣವಾಗಿಸಿದೆ. ಹೃದ್ರೋಗಗಳಿಗೆ ಮುಖ್ಯ ಕಾರಣ ಅಧಿಕ ರಕ್ತದೊತ್ತಡ. ವಾಸ್ತವವಾಗಿ ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವು ಅದರ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಂತಹ ಅಂಶಗಳು ಟೊಮೆಟೊದಲ್ಲಿ ಹೇರಳವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ತರಕಾರಿ ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಸಾಮಾನ್ಯವಾಗಿ ಟೊಮೆಟೊ ಎಲ್ಲರ ಅಡುಗೆ ಮನೆಯಲ್ಲಿಯೂ ಲಭ್ಯವಿರುತ್ತದೆ. ಕೆಲವರು ಇದನ್ನು ತರುವುದಕ್ಕೂ ಇಷ್ಟ ಪಡುವುದಿಲ್ಲ ಆದರೆ ಟೊಮೆಟೊದಲ್ಲಿ ವಿಟಮಿನ್, ಪೋಷಕಾಂಶಗಳು, ಪೊಟ್ಯಾಸಿಯಮ್, ಫೋಲೇಟ್, ವಿಟಮಿನ್ ಸಿ ಮತ್ತು ಕೆ ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಟೊಮೆಟೊ ಸೇವನೆ ಒಂದು ವರದಾನವಾಗಿದೆ ಎಂದು ತಜ್ಞರು ಹೇಳುತ್ತಾರೆ. ಇದೆಲ್ಲದರ ಜೊತೆಗೆ ಈ ತರಕಾರಿ ಮಾರಣಾಂತಿಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವುದಲ್ಲದೆ ಚರ್ಮದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ:

ಆಹಾರದಲ್ಲಿ ಟೊಮೆಟೊ ಸೇರಿಸುವುದರಿಂದ, ಆಹಾರದ ರುಚಿ ಹೆಚ್ಚುವುದು ಮಾತ್ರವಲ್ಲ. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಈ ತರಕಾರಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಆಂಟಿ-ಕ್ಯಾಪ್ಸಿನೊಜೆನಿಕ್ ಗುಣಲಕ್ಷಣಗಳು ಹೊಟ್ಟೆ ಮತ್ತು ಪಿತ್ತಜನಕಾಂಗದ ಕ್ಯಾನ್ಸರ್ ಅನ್ನು ತಡೆಯುತ್ತದೆ ಎಂದು ಸಂಶೋಧನೆಗಳಿಂದ ಸಾಬೀತಾಗಿದೆ.

ಇದನ್ನೂ ಓದಿ: 21-29 ವರ್ಷದ ಪ್ರತೀ ಮಹಿಳೆ ಈ ಪರೀಕ್ಷೆ ಮಾಡಿಸುವುದು ಅಗತ್ಯ

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ:

ಟೊಮೆಟೊದಲ್ಲಿ ಆರೋಗ್ಯಕರ ಖನಿಜಗಳಿವೆ. ಫೈಬರ್, ಕೋಲೀನ್, ವಿಟಮಿನ್ ಸಿ, ಪೊಟ್ಯಾಸಿಯಮ್ ಅಂಶಗಳು ಹೃದಯಕ್ಕೆ ಒಳ್ಳೆಯದು. ಇದರಲ್ಲಿರುವ ಲೈಕೋಪೀನ್ ನಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ. ಬಿಪಿಯನ್ನು ಸಹ ನಿಯಂತ್ರಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು:

ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಟೊಮೆಟೊವನ್ನು ಆಹಾರದಲ್ಲಿ ಸೇರಿಸಬೇಕು. ಇದು ಮುಖವನ್ನು ಕಾಂತಿಯುತವಾಗಿಸುತ್ತದೆ. ಇದಲ್ಲದೆ, ಟೊಮೆಟೊ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಅಂದ ಹೆಚ್ಚುವುದರ ಜೊತೆಗೆ ಮೊಡವೆಗಳಿಂದ ಮುಕ್ತಿ ಸಿಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ