Health Tips: ಈ ತರಕಾರಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು, ಇದರಲ್ಲಿದೆ ಆರೋಗ್ಯ ಪ್ರಯೋಜನ

ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವು ಅದರ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಟೊಮೆಟೊದಲ್ಲಿ ಪೊಟ್ಯಾಸಿಯಮ್ ಅಂಶ ಹೇರಳವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ತರಕಾರಿ ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೃದಯದ ಆರೋಗ್ಯಕ್ಕೂ ಕೂಡ ಉಪಯುಕ್ತವಾಗಿದೆ.

Health Tips: ಈ ತರಕಾರಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು, ಇದರಲ್ಲಿದೆ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 14, 2024 | 12:35 PM

ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದರ ಜೊತೆಗೆ ಇತರ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಜನರನ್ನು ಹೈರಾಣವಾಗಿಸಿದೆ. ಹೃದ್ರೋಗಗಳಿಗೆ ಮುಖ್ಯ ಕಾರಣ ಅಧಿಕ ರಕ್ತದೊತ್ತಡ. ವಾಸ್ತವವಾಗಿ ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವು ಅದರ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಂತಹ ಅಂಶಗಳು ಟೊಮೆಟೊದಲ್ಲಿ ಹೇರಳವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ತರಕಾರಿ ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಸಾಮಾನ್ಯವಾಗಿ ಟೊಮೆಟೊ ಎಲ್ಲರ ಅಡುಗೆ ಮನೆಯಲ್ಲಿಯೂ ಲಭ್ಯವಿರುತ್ತದೆ. ಕೆಲವರು ಇದನ್ನು ತರುವುದಕ್ಕೂ ಇಷ್ಟ ಪಡುವುದಿಲ್ಲ ಆದರೆ ಟೊಮೆಟೊದಲ್ಲಿ ವಿಟಮಿನ್, ಪೋಷಕಾಂಶಗಳು, ಪೊಟ್ಯಾಸಿಯಮ್, ಫೋಲೇಟ್, ವಿಟಮಿನ್ ಸಿ ಮತ್ತು ಕೆ ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಟೊಮೆಟೊ ಸೇವನೆ ಒಂದು ವರದಾನವಾಗಿದೆ ಎಂದು ತಜ್ಞರು ಹೇಳುತ್ತಾರೆ. ಇದೆಲ್ಲದರ ಜೊತೆಗೆ ಈ ತರಕಾರಿ ಮಾರಣಾಂತಿಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವುದಲ್ಲದೆ ಚರ್ಮದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ

ಆಹಾರದಲ್ಲಿ ಟೊಮೆಟೊ ಸೇರಿಸುವುದರಿಂದ, ಆಹಾರದ ರುಚಿ ಹೆಚ್ಚುವುದು ಮಾತ್ರವಲ್ಲ. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಈ ತರಕಾರಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಆಂಟಿ-ಕ್ಯಾಪ್ಸಿನೊಜೆನಿಕ್ ಗುಣಲಕ್ಷಣಗಳು ಹೊಟ್ಟೆ ಮತ್ತು ಪಿತ್ತಜನಕಾಂಗದ ಕ್ಯಾನ್ಸರ್ ಅನ್ನು ತಡೆಯುತ್ತದೆ ಎಂದು ಸಂಶೋಧನೆಗಳಿಂದ ಸಾಬೀತಾಗಿದೆ.

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಟೊಮೆಟೊದಲ್ಲಿ ಆರೋಗ್ಯಕರ ಖನಿಜಗಳಿವೆ. ಫೈಬರ್, ಕೋಲೀನ್, ವಿಟಮಿನ್ ಸಿ, ಪೊಟ್ಯಾಸಿಯಮ್ ಅಂಶಗಳು ಹೃದಯಕ್ಕೆ ಒಳ್ಳೆಯದು. ಇದರಲ್ಲಿರುವ ಲೈಕೋಪೀನ್ ನಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ. ಬಿಪಿಯನ್ನು ಸಹ ನಿಯಂತ್ರಿಸುತ್ತದೆ.

ಇದನ್ನೂ ಓದಿ: ಮಹಿಳೆಯರೇ ನಿಮ್ಮಲ್ಲಿ ಈ ರೋಗಲಕ್ಷಣ ಕಂಡುಬಂದರೆ ಅಂಡಾಶಯದ ಕ್ಯಾನ್ಸರ್ ಆಗಿರಬಹುದು

ಚರ್ಮದ ಆರೋಗ್ಯಕ್ಕೆ ಒಳ್ಳೆಯದು

ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಟೊಮೆಟೊವನ್ನು ಆಹಾರದಲ್ಲಿ ಸೇರಿಸಬೇಕು. ಇದು ಮುಖವನ್ನು ಕಾಂತಿಯುತವಾಗಿಸುತ್ತದೆ. ಇದಲ್ಲದೆ, ಟೊಮೆಟೊ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಅಂದ ಹೆಚ್ಚುವುದರ ಜೊತೆಗೆ ಮೊಡವೆಗಳಿಂದ ಮುಕ್ತಿ ಸಿಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ