AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಬೂದಾನದಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು! ಎಷ್ಟು ಸಮಸ್ಯೆಗಳು ದೂರವಾಗುತ್ತವೆ ತಿಳಿದಿದೆಯೇ?

ಸಾಬಕ್ಕಿ, ಸಾಬೂದಾನ ಹೀಗೆ ನಾನಾ ಹೆಸರುಗಳಿಂದ ಪ್ರಸಿದ್ದಿ ಪಡೆದುಕೊಂಡಿರುವ ಆಹಾರ ಪದಾರ್ಥವನ್ನು ಉಪವಾಸದ ಸಂದರ್ಭಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಏಕೆಂದರೆ ಇದರಲ್ಲಿ ಅತೀ ಹೆಚ್ಚು ಶಕ್ತಿಯುತ ಗುಣಗಳಿವೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ನೀಡಬಹುದಾದ ಏಕೈಕ ಆಹಾರವಾಗಿದೆ. ಹಾಗಾದರೆ ಇದರ ಪ್ರಯೋಜನಗಳೇನು? ಯಾಕಾಗಿ ಸೇವನೆ ಮಾಡಬೇಕು ತಿಳಿದುಕೊಳ್ಳಿ.

ಸಾಬೂದಾನದಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು! ಎಷ್ಟು ಸಮಸ್ಯೆಗಳು ದೂರವಾಗುತ್ತವೆ ತಿಳಿದಿದೆಯೇ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 13, 2025 | 11:14 AM

Share

ಸಬ್ಬಕ್ಕಿ(Sago), ಸಾಬಕ್ಕಿ, ಸಾಬೂದಾನ ಹೀಗೆ ನಾನಾ ಹೆಸರುಗಳಿಂದ ಪ್ರಸಿದ್ದಿ ಪಡೆದುಕೊಂಡಿರುವ ಆಹಾರ ಪದಾರ್ಥ. ಸಾಮಾನ್ಯವಾಗಿ ಇದು ಮರಗೆಣಸಿನಿಂದ ತಯಾರಿಸಲಾಗುವ ಪಿಷ್ಠವಾಗಿದೆ. ಇದನ್ನು ಉಪವಾಸದ ಸಂದರ್ಭಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಏಕೆಂದರೆ ಇದರಲ್ಲಿ ಅತೀ ಹೆಚ್ಚು ಶಕ್ತಿಯುತ ಗುಣಗಳಿವೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ನೀಡಬಹುದಾದ ಏಕೈಕ ಆಹಾರವಾಗಿದೆ. ಹಾಗಾದರೆ ಇದರ ಪ್ರಯೋಜನಗಳೇನು? ಯಾಕಾಗಿ ಸೇವನೆ ಮಾಡಬೇಕು ತಿಳಿದುಕೊಳ್ಳಿ.

  • ಸಾಮಾನ್ಯವಾಗಿ ಸಾಬೂದಾನದಲ್ಲಿ ಫೋಲಿಕ್ ಆಮ್ಲ ಮತ್ತು ವಿಟಮಿನ್ ಬಿ ಸಮೃದ್ಧವಾಗಿದೆ. ಇವು ಗರ್ಭಿಣಿಯರ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಗರ್ಭಾವಸ್ಥೆಯಲ್ಲಿ, ತಾಯಿಯ ದೇಹವನ್ನು ಆರೋಗ್ಯವಾಗಿಡಲು ಮತ್ತು ಮಗುವಿನ ಬೆಳವಣಿಗೆಗೆ ಸಹಾಯವಾಗಲು ಇದರಿಂದ ಮಾಡಿದ ಆಹಾರ ಪದಾರ್ಥಗಳ ಸೇವನೆ ಮಾಡಲಾಗುತ್ತದೆ.
  • ಇದರ ಸೇವನೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇಲ್ಲದ ಕಾರಣ ಮಧುಮೇಹಿಗಳಿಗೂ ಒಳ್ಳೆಯದು. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡಬಹುದು.
  • ಸಾಬಕ್ಕಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಕೆ ನಂತಹ ಪೋಷಕಾಂಶಗಳಿವೆ. ಅವು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತವೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
  • ಸಾಬೂದಾನ ದೈಹಿಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸ್ನಾಯು ಸಮಸ್ಯೆಗಳೂ ಕಡಿಮೆಯಾಗುತ್ತವೆ. ಇದನ್ನು ಪ್ರೋಟೀನ್ ಜೊತೆಗೆ ತೆಗೆದುಕೊಳ್ಳುವುದು ವಿಶೇಷವಾಗಿ ಒಳ್ಳೆಯದು.
  • ಕಡಿಮೆ ತೂಕ ಇರುವವರಿಗೆ ಸಾಬಕ್ಕಿ ಬಹಳ ಸಹಾಯ ಮಾಡುತ್ತದೆ. ಇದು ಆರೋಗ್ಯಕರವಾಗಿ ತೂಕ ಹೆಚ್ಚಿಸಲು ಸಹಕಾರಿ. ಅಂದರೆ ದೇಹದಲ್ಲಿ ಅಗತ್ಯವಾದ ಕೊಬ್ಬನ್ನು ಹೆಚ್ಚಿಸದೆ ತೂಕವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ಹೆಚ್ಚಿನ ಕ್ಯಾಲೊರಿ ಪದಾರ್ಥಗಳ ಜೊತೆಯಲ್ಲಿ ಎಂದಿಗೂ ಬಳಕೆ ಮಾಡಬಾರದು.
  • ಸಾಬೂದಾನ ನಾರಿನಂಶದಿಂದ ಸಮೃದ್ಧವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ. ಗ್ಲುಟೆನ್ ಮುಕ್ತ ಆಹಾರವಾಗಿರುವುದರಿಂದ ಅಲರ್ಜಿ ಇರುವವರು ಕೂಡ ಸುರಕ್ಷಿತವಾಗಿ ಸೇವಿಸಬಹುದು.
  • ಉಪವಾಸದ ಸಮಯದಲ್ಲಿ ಸಾಬೂದಾನ ಸೇವನೆ ತುಂಬಾ ಪ್ರಯೋಜನಕಾರಿ. ಇದು ತಕ್ಷಣದ ಶಕ್ತಿಯನ್ನು ಒದಗಿಸುವ ಶಕ್ತಿಯುತ ಆಹಾರವಾಗಿದೆ. ಖಿಚಡಿ ಅಥವಾ ಪಾಯಸದಂತಹ ಭಕ್ಷ್ಯಗಳ ರೂಪದಲ್ಲಿ ಸೇವಿಸುವುದರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ಆರೋಗ್ಯವನ್ನು ಕೂಡ ಕಾಪಾಡುತ್ತದೆ

(ಸೂಚನೆ: ಇಲ್ಲಿರುವ ವಿಷಯಗಳು ಜಾಗೃತಿಗಾಗಿ ಮಾತ್ರ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 am, Thu, 13 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ