AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Eating: ಬೇಸಿಗೆಯಲ್ಲಿ ಮಾವಿನ ಹಣ್ಣಿನ ಜ್ಯೂಸ್ ಕುಡಿಯುವವರಿಗೆ ಈ ವಿಷಯ ಗೊತ್ತಿರಲಿ!

ಈ ಬೇಸಿಗೆಯ ಶಾಖಕ್ಕೆ ದೇಹಕ್ಕೆ ದ್ರವ ರೂಪದ ಆಹಾರಗಳು ಉತ್ತಮ ಎಂದು ತಜ್ಞರು ಹೇಳುತ್ತಾರೆ. ಅದೇ ರೀತಿ ಮಾವಿನ ಹಣ್ಣಿನ ತಾಜಾ ರಸವನ್ನು ಕುಡಿಯುವುದರಿಂದ ದೇಹದ ನಿರ್ಜಲೀಕರಣವನ್ನು ತಪ್ಪಿಸಬಹುದು. ಹೈಡ್ರೇಟ್ ಆಗಿ ಇರಬಹುದು. ಆದ್ದರಿಂದ, ವಿಟಮಿನ್ ಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿಂದ ತುಂಬಿರುವ ಮಾವಿನ ರಸವನ್ನು ಕುಡಿಯುತ್ತಿದ್ದರೆ ಒಳ್ಳೆಯದು ಇಲ್ಲವಾದಲ್ಲಿ ಇಂದಿನಿಂದಲೇ ಈ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಅಡ್ಡಪರಿಣಾಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Healthy Eating: ಬೇಸಿಗೆಯಲ್ಲಿ ಮಾವಿನ ಹಣ್ಣಿನ ಜ್ಯೂಸ್ ಕುಡಿಯುವವರಿಗೆ ಈ ವಿಷಯ ಗೊತ್ತಿರಲಿ!
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 18, 2024 | 6:10 PM

Share

ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವುಗಳು ಬೇಸಿಗೆ ಕಾಲದಲ್ಲಿ ಹೇರಳವಾಗಿ ಲಭ್ಯವಿರುತ್ತದೆ. ಈ ರಸಭರಿತ ಹಣ್ಣುಗಳನ್ನು ಅದರ ರುಚಿ ಮಾತ್ರವಲ್ಲದೆ ಆರೋಗ್ಯ ಪ್ರಯೋಜನಗಳಿಂದಾಗಿ ವಿಶ್ವದ ವಿವಿಧ ಭಾಗಗಳಲ್ಲಿ ಸೇವಿಸಲಾಗುತ್ತದೆ. ತಾಜಾ ಹಣ್ಣನ್ನು ತಿನ್ನುವುದರಿಂದ ಅದರ ಎಲ್ಲಾ ಪೋಷಕಾಂಶಗಳನ್ನು ಪಡೆಯಬಹುದಾಗಿದ್ದರೂ ಕೂಡ, ಅದನ್ನು ರಸದ ರೂಪದಲ್ಲಿಯೂ ಕುಡಿಯಬಹುದಾಗಿದೆ. ಈ ಬೇಸಿಗೆಯ ಶಾಖಕ್ಕೆ ದೇಹಕ್ಕೆ ದ್ರವ ರೂಪದ ಆಹಾರಗಳು ಉತ್ತಮ ಎಂದು ತಜ್ಞರು ಹೇಳುತ್ತಾರೆ. ಅದೇ ರೀತಿ ಹಣ್ಣಿನ ತಾಜಾ ರಸವನ್ನು ಕುಡಿಯುವುದರಿಂದ ದೇಹದ ನಿರ್ಜಲೀಕರಣವನ್ನು ತಪ್ಪಿಸಬಹುದು. ಹೈಡ್ರೇಟ್ ಆಗಿ ಇರಬಹುದು. ಆದ್ದರಿಂದ, ವಿಟಮಿನ್ ಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿಂದ ತುಂಬಿರುವ ಮಾವಿನ ರಸವನ್ನು ಕುಡಿಯುತ್ತಿದ್ದರೆ ಒಳ್ಳೆಯದು ಇಲ್ಲವಾದಲ್ಲಿ ಇಂದಿನಿಂದಲೇ ಈ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಅಡ್ಡಪರಿಣಾಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

1. ಪೋಷಕಾಂಶಗಳಿಂದ ಸಮೃದ್ಧವಾಗಿದೆ

ಮಾವಿನ ರಸವು ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಸೇರಿದಂತೆ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ, ಒಟ್ಟಾರೆ ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕ ತಜ್ಞ ತಾನ್ಯಾ ಮೆಹ್ರಾ ಹೇಳುತ್ತಾರೆ.

2. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಮಾವಿನ ರಸದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ವಿಟಮಿನ್ ಸಿ ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

3. ಆಹಾರವನ್ನು ಜೀರ್ಣ ಮಾಡಲು ಸಹಾಯ ಮಾಡುತ್ತದೆ:

ಮಾವಿನ ರಸವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಜೊತೆಗೆ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

4. ಚರ್ಮದ ಆರೋಗ್ಯವನ್ನು ಹೆಚ್ಚಿಸಬಹುದು:

ಮಾವಿನ ರಸದಲ್ಲಿ ವಿಟಮಿನ್ ಸಿ ಇದೆ, ಇದು ಚರ್ಮಕ್ಕೆ ಅಗತ್ಯವಾಗಿದೆ ಮತ್ತು ಸುಕ್ಕುಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇದು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುವುದರ ಹೊರತಾಗಿ, ಉರಿಯೂತವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಅಡುಗೆಗೆ ಬಳಸುವ ಈ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕ, ಆರೋಗ್ಯಕ್ಕೆ ಅಪಾಯ ಖಂಡಿತ

5. ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ:

ಮಾವಿನ ರಸದಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ, ಇದು ದೃಷ್ಟಿಯನ್ನು ಸುಧಾರಿಸುತ್ತದೆ. ಕಣ್ಣಿನ ಆರೋಗ್ಯಕ್ಕೂ ಉತ್ತಮವಾಗಿದೆ.

6. ಮೆದುಳಿನ ಆರೋಗ್ಯವನ್ನು ಹೆಚ್ಚಿಸಬಹುದು:

ಮಾವಿನ ರಸದಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿನ ಕೋಶಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಮಾವಿನ ಹಣ್ಣಿನ ರಸದ ಸೇವನೆಯಿಂದ ಆಗುವ ಅಡ್ಡಪರಿಣಾಮಗಳು ಯಾವುವು?

  • ಅತಿಯಾದ ಸೇವನೆಯು ಕೆಲವು ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು.
  • ಜೀರ್ಣಕಾರಿ ಅಸ್ವಸ್ಥತೆ.
  • ಕೆಲವರಿಗೆ ಅಲರ್ಜಿಯಾಗಬಹುದು.
  • ನೈಸರ್ಗಿಕ ಸಕ್ಕರೆ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ, ಆದ್ದರಿಂದ ಮಧುಮೇಹಿಗಳು ಮಾವಿನ ರಸವನ್ನು ಸೇವಿಸುವಾಗ ಸ್ವಲ್ಪ ಎಚ್ಚರ ವಹಿಸಬೇಕು.
  • ಕೆಲವರಲ್ಲಿ ತೂಕ ಹೆಚ್ಚಳವಾಗಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?