ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವುಗಳು ಬೇಸಿಗೆ ಕಾಲದಲ್ಲಿ ಹೇರಳವಾಗಿ ಲಭ್ಯವಿರುತ್ತದೆ. ಈ ರಸಭರಿತ ಹಣ್ಣುಗಳನ್ನು ಅದರ ರುಚಿ ಮಾತ್ರವಲ್ಲದೆ ಆರೋಗ್ಯ ಪ್ರಯೋಜನಗಳಿಂದಾಗಿ ವಿಶ್ವದ ವಿವಿಧ ಭಾಗಗಳಲ್ಲಿ ಸೇವಿಸಲಾಗುತ್ತದೆ. ತಾಜಾ ಹಣ್ಣನ್ನು ತಿನ್ನುವುದರಿಂದ ಅದರ ಎಲ್ಲಾ ಪೋಷಕಾಂಶಗಳನ್ನು ಪಡೆಯಬಹುದಾಗಿದ್ದರೂ ಕೂಡ, ಅದನ್ನು ರಸದ ರೂಪದಲ್ಲಿಯೂ ಕುಡಿಯಬಹುದಾಗಿದೆ. ಈ ಬೇಸಿಗೆಯ ಶಾಖಕ್ಕೆ ದೇಹಕ್ಕೆ ದ್ರವ ರೂಪದ ಆಹಾರಗಳು ಉತ್ತಮ ಎಂದು ತಜ್ಞರು ಹೇಳುತ್ತಾರೆ. ಅದೇ ರೀತಿ ಹಣ್ಣಿನ ತಾಜಾ ರಸವನ್ನು ಕುಡಿಯುವುದರಿಂದ ದೇಹದ ನಿರ್ಜಲೀಕರಣವನ್ನು ತಪ್ಪಿಸಬಹುದು. ಹೈಡ್ರೇಟ್ ಆಗಿ ಇರಬಹುದು. ಆದ್ದರಿಂದ, ವಿಟಮಿನ್ ಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿಂದ ತುಂಬಿರುವ ಮಾವಿನ ರಸವನ್ನು ಕುಡಿಯುತ್ತಿದ್ದರೆ ಒಳ್ಳೆಯದು ಇಲ್ಲವಾದಲ್ಲಿ ಇಂದಿನಿಂದಲೇ ಈ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಅಡ್ಡಪರಿಣಾಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
ಮಾವಿನ ರಸವು ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಸೇರಿದಂತೆ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ, ಒಟ್ಟಾರೆ ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕ ತಜ್ಞ ತಾನ್ಯಾ ಮೆಹ್ರಾ ಹೇಳುತ್ತಾರೆ.
ಮಾವಿನ ರಸದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ವಿಟಮಿನ್ ಸಿ ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ.
ಮಾವಿನ ರಸವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಜೊತೆಗೆ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಮಾವಿನ ರಸದಲ್ಲಿ ವಿಟಮಿನ್ ಸಿ ಇದೆ, ಇದು ಚರ್ಮಕ್ಕೆ ಅಗತ್ಯವಾಗಿದೆ ಮತ್ತು ಸುಕ್ಕುಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇದು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುವುದರ ಹೊರತಾಗಿ, ಉರಿಯೂತವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ಅಡುಗೆಗೆ ಬಳಸುವ ಈ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕ, ಆರೋಗ್ಯಕ್ಕೆ ಅಪಾಯ ಖಂಡಿತ
ಮಾವಿನ ರಸದಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ, ಇದು ದೃಷ್ಟಿಯನ್ನು ಸುಧಾರಿಸುತ್ತದೆ. ಕಣ್ಣಿನ ಆರೋಗ್ಯಕ್ಕೂ ಉತ್ತಮವಾಗಿದೆ.
ಮಾವಿನ ರಸದಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿನ ಕೋಶಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ