AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Potato juice: ಆಲೂಗಡ್ಡೆ ಜ್ಯೂಸ್ ಈ ಗಂಭೀರ ಸಮಸ್ಯೆಗಳಿಗೆ ಪರಿಹಾರ

ಆಲೂಗಡ್ಡೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರ ರಸದ ಸೇವನೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.

Potato juice: ಆಲೂಗಡ್ಡೆ ಜ್ಯೂಸ್ ಈ ಗಂಭೀರ ಸಮಸ್ಯೆಗಳಿಗೆ ಪರಿಹಾರ
ಆಲೂಗೆಡ್ಡೆ ಜ್ಯೂಸ್
TV9 Web
| Edited By: |

Updated on: Jan 04, 2023 | 6:04 AM

Share

ಆಲೂಗಡ್ಡೆ (Potato) ಎಲ್ಲಾ ಋತುವಿನ ತರಕಾರಿಯಾಗಿದೆ. ಆಲೂಗಡ್ಡೆ ನಮ್ಮಲ್ಲಿ ಹೆಚ್ಚಿನವರ ನೆಚ್ಚಿನ ತರಕಾರಿಯಾಗಿದೆ. ಮಕ್ಕಳು ವಿಶೇಷವಾಗಿ ಆಲೂಗಡ್ಡೆ ಚಿಪ್ಸ್, ಫ್ರೆಂಚ್ ಫ್ರೈಗಳನ್ನು ಇಷ್ಟಪಡುತ್ತಾರೆ. ಇಂತಹ ಆಲೂಗಡ್ಡೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ ಎಂಬುದು ನಿಮಗೆ ತಿಳಿದಿದೆಯೇ? ಆಲೂಗಡ್ಡೆ ರಸವು (Porato Juice) ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಆಲೂಗಡ್ಡೆ ರಸವನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳು ಇಲ್ಲಿವೆ.

ರೋಗನಿರೋಧಕ ಶಕ್ತಿ ವೃದ್ಧಿ: ಆಲೂಗಡ್ಡೆಯಲ್ಲಿರುವ ವಿಟಮಿನ್ ಸಿ ಸಾಂಕ್ರಾಮಿಕ ರೋಗಗಳನ್ನು ಗುಣಪಡಿಸುತ್ತದೆ. ಆಲೂಗೆಡ್ಡೆ ರಸವು ಶೀತ ಮತ್ತು ಜ್ವರದಂತಹ ರೋಗಗಳನ್ನು ಗುಣಪಡಿಸುತ್ತದೆ. ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿ ಹೆಚ್ಚುತ್ತದೆ.

ಹುಣ್ಣುಗಳ ಶಮನಕ್ಕೆ ಪರಿಣಾಮಕಾರಿ: ಆಲೂಗಡ್ಡೆಯ ರಸವನ್ನು ಸೇವಿಸುವುದರಿಂದ ಹುಣ್ಣುಗಳನ್ನು ಗುಣಪಡಿಸಲು ತುಂಬಾ ಉಪಯುಕ್ತವಾಗಿದೆ. ಆಲೂಗಡ್ಡೆಗಳು ಹುಣ್ಣುಗಳನ್ನು ಗುಣಪಡಿಸಲು ಸಹಾಯ ಮಾಡುವ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತವೆ. ಇದನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಬ್ಯಾಕ್ಟೀರಿಯಾ ನಾಶವಾಗುತ್ತದೆ. ಇದು ಹುಣ್ಣುಗಳ ಬೆಳವಣಿಗೆಯನ್ನು ತಡೆಯುತ್ತದೆ.

ಆರೋಗ್ಯಕರ ಯಕೃತ್ತಿಗೆ ಒಳ್ಳೆಯದು: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಯಕೃತ್ತು ಶುದ್ಧವಾಗುತ್ತದೆ. ಇದು ಹೆಪಟೈಟಿಸ್‌ನಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಆಲೂಗಡ್ಡೆ ರಸವು ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದು ಯಕೃತ್ತು ಆರೋಗ್ಯಕರವಾಗಿರಲು ಸಹ ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣ: ಆಲೂಗಡ್ಡೆ ರಸವು ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹ ಉಪಯುಕ್ತವಾಗಿದೆ. ವಿಟಮಿನ್ ಎ ಮತ್ತು ವಿಟಮಿನ್ ಬಿ ಕಾಂಪ್ಲೆಕ್ಸ್​​ನಂತಹ ಪೋಷಕಾಂಶಗಳು ಆಲೂಗಡ್ಡೆ ರಸದಲ್ಲಿ ಇರುತ್ತವೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮೈಗ್ರೇನ್‌ ಸಮಸ್ಯೆಗೆ ಪ್ರಯೋಜನಕಾರಿ: ಆಲೂಗೆಡ್ಡೆ ರಸವು ಮೈಗ್ರೇನ್ ಸಮಸ್ಯೆ ತಡೆಗಟ್ಟಲು ಪ್ರಯೋಜನಕಾರಿಯಾಗಿದೆ. ಆಲೂಗೆಡ್ಡೆ ರಸವನ್ನು ಕುಡಿಯುವುದರಿಂದ ಒತ್ತಡ, ಆಯಾಸ ಮತ್ತು ಖಿನ್ನತೆಯನ್ನು ನಿವಾರಿಸಬಹುದು. ಆಲೂಗೆಡ್ಡೆಯ ಜ್ಯೂಸ್ ಕುಡಿದು ತಲೆಗೆ ಹಚ್ಚಿಕೊಳ್ಳುವುದರಿಂದ ಪದೇ ಪದೇ ತಲೆನೋವು ನಿವಾರಣೆಯಾಗುತ್ತದೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ಆರೋಗ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?