AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ದಿ ಅಂತ ಸೇವಿಸುವ ಆಹಾರ ನಿಜವಾಗಿಯೂ ಆರೋಗ್ಯ ಕಾಪಾಡುತ್ತಾ? ಯಾವ ಉತ್ಪನ್ನ ಹೆಚ್ಚು ಅಪಾಯಕಾರಿ?

ಇತ್ತೀಚಿನ ದಿನಗಳಲ್ಲಿ, ಆರೋಗ್ಯಕರ ಎಂಬ ಹೆಸರಿನಲ್ಲಿ ಅನೇಕ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ, ಆದರೆ ಅವು ನಿಜವಾಗಿಯೂ ಆರೋಗ್ಯಕರವಾಗಿವೆಯೇ ಎಂದು ತಿಳಿದುಕೊಳ್ಳುವುದು ಮುಖ್ಯ. ಈ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಖರೀದಿಸಿ ತರುವಾಗ ಸರಿಯಾದ ಮಾಹಿತಿ ಇರುವುದು ಮತ್ತು ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಹಾಗಾದರೆ ಯಾವ ಉತ್ಪನ್ನ ಹೆಚ್ಚು ಅಪಾಯಕಾರಿ, ಖರೀದಿಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೆಲ್ದಿ ಅಂತ ಸೇವಿಸುವ ಆಹಾರ ನಿಜವಾಗಿಯೂ ಆರೋಗ್ಯ ಕಾಪಾಡುತ್ತಾ? ಯಾವ ಉತ್ಪನ್ನ ಹೆಚ್ಚು ಅಪಾಯಕಾರಿ?
are healthy packaged foods really healthyImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 07, 2026 | 6:36 PM

Share

ಇತ್ತೀಚಿನ ದಿನಗಳಲ್ಲಿ ಹೆಲ್ದಿ (Healthy), ಲೋ ಫ್ಯಾಟ್, ಶುಗರ ಫ್ರೀ (Sugar free) ಎಂಬ ಹೆಸರಿನಲ್ಲಿ ಹಲವಾರು ಆಹಾರ ಉತ್ಪನ್ನಗಳು ಮಾರುಕಟ್ಟೆಯಲ್ಲಿ ದೊರೆಯುತ್ತಿವೆ. ಆರೋಗ್ಯದ ಮೇಲೆ ಹೆಚ್ಚು ಗಮನ ಹರಿಸುತ್ತಿರುವ ಜನರು ಇವುಗಳನ್ನು ನಂಬಿಕೊಂಡು ತಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುತ್ತಿದ್ದಾರೆ. ಆದರೆ ಅವುಗಳ ಸೇವನೆ ನಿಜವಾಗಿಯೂ ನಮ್ಮ ಆರೋಗ್ಯಕ್ಕೆ ಒಳ್ಳೆಯದೇ, ಇವು ಎಷ್ಟು ಆರೋಗ್ಯಕರ ಎಂಬುದನ್ನು ಗಮನಿಸುವುದಿಲ್ಲ. ಆರೋಗ್ಯ ತಜ್ಞರ ಪ್ರಕಾರ, ಈ ಎಲ್ಲಾ ಉತ್ಪನ್ನಗಳು ನಿಜವಾಗಿಯೂ ಆರೋಗ್ಯಕರವಾಗಿರುವುದಿಲ್ಲ. ಹಾಗಾದರೆ ಇದನ್ನು ಕಂಡುಹಿಡಿಯುವುದು ಹೇಗೆ, ಯಾವ ಉತ್ಪನ್ನ ಹೆಚ್ಚು ಅಪಾಯಕಾರಿ, ಖರೀದಿಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಲೇಬಲ್‌ ನಿಮ್ಮನ್ನು ಮೋಸಗೊಳಿಸಬಹುದು!

ಪ್ಯಾಕೇಜಿಂಗ್‌ನಲ್ಲಿ ಬಳಸುವ ಆಕರ್ಷಕ ಪದಗಳು ಮತ್ತು ಜಾಹೀರಾತುಗಳು ಹಲವಾರು ಬಾರಿ ಗ್ರಾಹಕರನ್ನು ತಪ್ಪು ದಾರಿಗೆಳೆಯುತ್ತವೆ. ಕೆಲವು ಉತ್ಪನ್ನಗಳಲ್ಲಿ “ಹೆಲ್ದಿ” ಎಂದು ಬರೆದಿದ್ದರೂ, ಅವುಗಳಲ್ಲಿ ಅಡಗಿರುವ ಸಕ್ಕರೆ, ಉಪ್ಪು, ಅನಾರೋಗ್ಯಕರ ಕೊಬ್ಬುಗಳು ಮತ್ತು ಪ್ರಿಸರ್ವೇಟಿವ್‌ಗಳು ದೀರ್ಘಾವಧಿಯಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಬಹುದು.

ಇದನ್ನೂ ಓದಿ: ಕೋಲ್ಡ್ ಡ್ರಿಂಕ್ ಜೊತೆ ಚಿಪ್ಸ್ ತಿನ್ನುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ

ಯಾವ ಉತ್ಪನ್ನಗಳು ಹೆಚ್ಚು ಅಪಾಯಕಾರಿ?

ತಜ್ಞರ ಪ್ರಕಾರ, ಫ್ಲೇವರ್ಡ್ ಯೋಗರ್ಟ್, ಪ್ಯಾಕೇಜ್ಡ್ ಜ್ಯೂಸ್, ಎನರ್ಜಿ ಬಾರ್, ಡಯಟ್ ಸ್ನ್ಯಾಕ್ಸ್ ಮುಂತಾದವುಗಳಲ್ಲಿ ಸಕ್ಕರೆ ಮತ್ತು ಕಾರ್ಬೊಹೈಡ್ರೇಟ್ ಪ್ರಮಾಣ ಹೆಚ್ಚಿರಬಹುದು. ಇನ್‌ಸ್ಟಂಟ್ ಓಟ್ಸ್ ಕೂಡ ಕೆಲವೊಮ್ಮೆ ಹೆಚ್ಚು ಸಕ್ಕರೆ ಮತ್ತು ರಿಫೈನ್ಡ್ ಕಾರ್ಬ್ಸ್ ಹೊಂದಿರುತ್ತವೆ. ಇವುಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಬೊಜ್ಜು ಹಾಗೂ ಮಧುಮೇಹದ ಅಪಾಯ ಹೆಚ್ಚಬಹುದು.

ಖರೀದಿಸುವಾಗ ಈ ಅಂಶಗಳನ್ನು ಗಮನಿಸಿ;

ಯಾವುದೇ ಉತ್ಪನ್ನವನ್ನು ಖರೀದಿಸುವ ಮೊದಲು ಅದರ ನ್ಯೂಟ್ರಿಷನ್ ಲೇಬಲ್ ಪರಿಶೀಲಿಸುವುದು ಅಗತ್ಯ. ಅದರಲ್ಲಿ ಇರುವ ಸಕ್ಕರೆ, ಉಪ್ಪು, ಕೊಬ್ಬು ಮತ್ತು ಕ್ಯಾಲೊರಿಗಳ ಪ್ರಮಾಣ ಗಮನಿಸಬೇಕು. ಜೊತೆಗೆ, ಇಂಗ್ರಿಡಿಯಂಟ್ಸ್ ಪಟ್ಟಿಯನ್ನು ಓದಿ, ಹೆಚ್ಚು ಪ್ರೊಸೆಸ್ಡ್ ಆಹಾರಗಳಿಂದ ದೂರವಿರುವುದು ಉತ್ತಮ. ಮನೆಯಲ್ಲೇ ತಯಾರಿಸಿದ ಆಹಾರವು ಸಾಮಾನ್ಯವಾಗಿ ಹೆಚ್ಚು ಸುರಕ್ಷಿತ ಮತ್ತು ಆರೋಗ್ಯಕರವಾಗಿರುತ್ತದೆ. ಇದರಲ್ಲಿ ಪ್ರಿಸರ್ವೇಟಿವ್‌ಗಳು ಕಡಿಮೆ ಇರುತ್ತವೆ ಹಾಗೂ ಸಕ್ಕರೆ, ಉಪ್ಪು ಮತ್ತು ಎಣ್ಣೆಯ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಮನೆ ಆಹಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್