Heart Attack: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

Heart Attack Causes: ಇಂದಿನ ಹದಿಹರೆಯದವರ ಜೀವನಶೈಲಿಯು ಅವರ ಪೋಷಕರ ಅಂದರೆ ಹಿಂದಿನ ತಲೆಮಾರಿನವರ ಜೀವನಶೈಲಿಗಿಂತ ಬಹಳ ಭಿನ್ನವಾಗಿದೆ. ತಂತ್ರಜ್ಞಾನದ ಬೆಳವಣಿಗೆಯೊಂದಿಗೆ, ಹದಿಹರೆಯದವರು ಲ್ಯಾಪ್‌ಟಾಪ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಮುಂದೆ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಈ ಜಡ ಜೀವನಶೈಲಿಯು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಕಾರಣವಾಗಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ದೇಹಕ್ಕೆ ದೈಹಿಕ ಚಟುವಟಿಕೆಯ ಕೊರತೆಯಾದಾಗ ದೇಹವು ಅಪಾರ ಒತ್ತಡವನ್ನು ಅನುಭವಿಸುತ್ತದೆ. ಇದು ಹೃದಯರಕ್ತನಾಳದ ಕಾಯಿಲೆಗಳು ಮತ್ತು ಹೃದಯಾಘಾತಗಳಿಗೆ ಕಾರಣವಾಗಬಹುದು.

Heart Attack: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 06, 2024 | 5:30 PM

ಇತ್ತೀಚಿನ ವರ್ಷಗಳಲ್ಲಿ ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಮೊದಲೆಲ್ಲ ಹೃದಯಾಘಾತವು ವಯಸ್ಸಾದವರಿಗೆ ಸಂಭವಿಸುವ ಕಾಯಿಲೆ ಎಂಬ ನಂಬಿಕೆಯಿತ್ತು. ಆದರೀಗ 30ರಿಂದ 45 ವರ್ಷದೊಳಗಿನವರಿಗೇ ಹೃದಯಾಘಾತ ಕಾಣಿಸಿಕೊಳ್ಳುವುದು ಹೆಚ್ಚಾಗಿದೆ. ಹೀಗಾಗಿ, ಹದಿಹರೆಯದವರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣವೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಯುವಪೀಳಿಗೆಯಲ್ಲಿ ಹೃದಯಾಘಾತ ಹೆಚ್ಚಾಗುತ್ತಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ಗುರುಗ್ರಾಮದ ಪಾರಸ್ ಹೆಲ್ತ್ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಅಮಿತ್ ಭೂಷಣ್ ಶರ್ಮಾ ಮಾಹಿತಿ ನೀಡಿದ್ದಾರೆ. ಡಾ. ಅಮಿತ್ ಅವರ ಪ್ರಕಾರ, ಜೀವನಶೈಲಿಯ ಬದಲಾವಣೆಗಳು ಮತ್ತು ದೈಹಿಕ ಚಟುವಟಿಕೆಯ ಕೊರತೆ ಹೃದಯಾಘಾತಕ್ಕೆ ಮುಖ್ಯ ಕಾರಣವಾಗುತ್ತದೆ.

ಇದನ್ನೂ ಓದಿ: ನಿಮ್ಮ ಅತಿಯಾದ ಫೋನ್​​ ಬಳಕೆ ಹೃದಯಾಘಾತಕ್ಕೆ ಕಾರಣವಾಗಬಹುದು

ಜೀವನಶೈಲಿಯಲ್ಲಿ ಬದಲಾವಣೆ:

ಇಂದಿನ ಹದಿಹರೆಯದವರ ಜೀವನಶೈಲಿಯು ಅವರ ಪೋಷಕರ ಅಂದರೆ ಹಿಂದಿನ ತಲೆಮಾರಿನವರ ಜೀವನಶೈಲಿಗಿಂತ ಬಹಳ ಭಿನ್ನವಾಗಿದೆ. ತಂತ್ರಜ್ಞಾನದ ಬೆಳವಣಿಗೆಯೊಂದಿಗೆ, ಹದಿಹರೆಯದವರು ಲ್ಯಾಪ್‌ಟಾಪ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಮುಂದೆ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಈ ಜಡ ಜೀವನಶೈಲಿಯು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಕಾರಣವಾಗಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ದೇಹಕ್ಕೆ ದೈಹಿಕ ಚಟುವಟಿಕೆಯ ಕೊರತೆಯಾದಾಗ ದೇಹವು ಅಪಾರ ಒತ್ತಡವನ್ನು ಅನುಭವಿಸುತ್ತದೆ. ಇದು ಹೃದಯರಕ್ತನಾಳದ ಕಾಯಿಲೆಗಳು ಮತ್ತು ಹೃದಯಾಘಾತಗಳಿಗೆ ಕಾರಣವಾಗಬಹುದು.

ಅನಾರೋಗ್ಯಕರ ಆಹಾರ ಪದ್ಧತಿ:

ಫಾಸ್ಟ್​ ಫುಡ್ ಮತ್ತು ಜಂಕ್ ಫುಡ್‌ಗಳ ಸೇವನೆಯ ಹೆಚ್ಚಳವು ಹದಿಹರೆಯದವರಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಗೆ ಕಾರಣವಾಗಿದೆ. ಇಂದು ಯುವಕರು ಪೌಷ್ಟಿಕ ಆಹಾರದ ಬದಲಿಗೆ ಹಾನಿಕಾರಕ ಆಹಾರಗಳನ್ನು ಆಯ್ಕೆ ಮಾಡುತ್ತಾರೆ. ಈ ಫಾಸ್ಟ್ ಫುಡ್​ಗಳು ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಅಗತ್ಯವಾದ ಪೋಷಕಾಂಶಗಳು ಮತ್ತು ಪ್ರೋಟೀನ್‌ಗಳನ್ನು ಹೊಂದಿರುವುದಿಲ್ಲ. ಅಗತ್ಯ ಪೋಷಕಾಂಶಗಳ ಕೊರತೆಯಿಂದ ದೇಹ ದುರ್ಬಲಗೊಳ್ಳುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಇದರಿಂದ ರೋಗಗಳು ಮತ್ತು ಸೋಂಕುಗಳು ಹೆಚ್ಚಾಗುತ್ತದೆ. ಹದಿಹರೆಯದವರ ಅನಾರೋಗ್ಯಕರ ಆಹಾರ ಪದ್ಧತಿಯು ಹೃದಯರಕ್ತನಾಳದ ಕಾಯಿಲೆಗಳು ಮತ್ತು ಹೃದಯಾಘಾತಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಹೃದಯದ ಆರೋಗ್ಯಕ್ಕೆ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ

ಮಾದಕವ್ಯಸನ:

ಯುವಜನರಲ್ಲಿ ಧೂಮಪಾನ ಮತ್ತು ತಂಬಾಕು ಉತ್ಪನ್ನಗಳ ಬಳಕೆ ಹೆಚ್ಚಾಗುತ್ತಿದೆ. ಇಲೆಕ್ಟ್ರಾನಿಕ್ ಸಿಗರೇಟ್‌ಗಳ ಬಳಕೆಯೂ ಈಗೀಗ ಸಾಮಾನ್ಯವಾಗಿಬಿಟ್ಟಿದೆ. ಈ ಉತ್ಪನ್ನಗಳು ನಿಕೋಟಿನ್ ಅನ್ನು ಹೊಂದಿರುತ್ತವೆ. ಇದು ದೇಹ ಮತ್ತು ಶ್ವಾಸಕೋಶಗಳಿಗೆ ಹಾನಿ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಕಾರಣವಾಗುವ ಇತರ ವಿಷಗಳನ್ನು ಹೊಂದಿರುತ್ತದೆ. ತಂಬಾಕು ಮತ್ತು ಎಲೆಕ್ಟ್ರಾನಿಕ್ ಸಿಗರೇಟುಗಳು ಹದಿಹರೆಯದವರಲ್ಲಿ ಹೃದಯರಕ್ತನಾಳದ ಕಾಯಿಲೆಗಳು ಮತ್ತು ಹೃದಯಾಘಾತಗಳ ಹೆಚ್ಚಳಕ್ಕೆ ಕಾರಣವಾಗುತ್ತಿವೆ.

ಹಳೆಯ ಆರೋಗ್ಯ ತೊಂದರೆಗಳು:

ಹದಿಹರೆಯದವರು ಸಾಮಾನ್ಯವಾಗಿ ಈಗಾಗಲೇ ಇರುವ ಆರೋಗ್ಯದ ತೊಂದರೆಗಳನ್ನು ನಿರ್ಲಕ್ಷಿಸುತ್ತಾರೆ. ಅದಕ್ಕೆ ವೈದ್ಯರಿಂದ ಚಿಕಿತ್ಸೆ ಪಡೆಯುವ ಬದಲು ಸ್ವಯಂ ಔಷಧಿ ಮಾಡುತ್ತಾರೆ. ಇದು ದೇಹಕ್ಕೆ ಗಮನಾರ್ಹ ಹಾನಿಯನ್ನುಂಟುಮಾಡುವ ಹೆಚ್ಚು ತೀವ್ರವಾದ ಕಾಯಿಲೆಗಳಿಗೆ ಕಾರಣವಾಗಬಹುದು. ತಪ್ಪಾದ ಔಷಧಿಯು ದೇಹವನ್ನು ಮತ್ತಷ್ಟು ಹಾನಿಗೊಳಿಸುತ್ತದೆ.

ಹದಿಹರೆಯದವರಲ್ಲಿ ಹೃದಯಾಘಾತದ ಹೆಚ್ಚಳವು ಕಳವಳಕಾರಿಯಾಗಿದೆ. ಹದಿಹರೆಯದವರು ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಮತ್ತು ಹಾನಿಕಾರಕ ಪದಾರ್ಥಗಳನ್ನು ಬಳಸದಿರುವುದು ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾದರೆ ಸರಿಯಾದ ವೈದ್ಯಕೀಯ ಆರೈಕೆ ಮತ್ತು ಸಮಾಲೋಚನೆ ಸಹ ಅತ್ಯಗತ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ