Heart Attack: ಹಠಾತ್ ಹೃದಯಾಘಾತಕ್ಕೆ ಈ ಆಹಾರಗಳೇ ಮುಖ್ಯ ಕಾರಣ: ತಜ್ಞರು ಅಭಿಪ್ರಾಯವೇನು?

ಜೀವನಶೈಲಿಯಲ್ಲಿನ ವಿಪರೀತ ಬದಲಾವಣೆ, ಆಹಾರ ಸೇವನೆಯಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ, ವಿಪರೀತ ಮಾನಸಿಕ ಒತ್ತಡ ಹೃದಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

Heart Attack: ಹಠಾತ್ ಹೃದಯಾಘಾತಕ್ಕೆ ಈ ಆಹಾರಗಳೇ ಮುಖ್ಯ ಕಾರಣ: ತಜ್ಞರು ಅಭಿಪ್ರಾಯವೇನು?
ಪ್ರಾತಿನಿಧಿಕ ಚಿತ್ರImage Credit source: bestlifeonline.com
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 03, 2023 | 7:00 AM

ಹೃದಯಾಘಾತದಿಂದ (sudden heart attack) ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಯಸ್ಸನ್ನು ಲೆಕ್ಕಿಸದೆ ಜನರು ಹೃದ್ರೋಗದಿಂದ ಸಾಯುತ್ತಿದ್ದಾರೆ. ಲವಲವಿಕೆಯಿಂದ ಇಂದು ಇದ್ದ ಜನ ನಾಳೆ ಇರುವುದಿಲ್ಲ. ಅನಿಯಮಿತ ಹೃದಯ ಬಡಿತಕ್ಕೆ ಹಲವು ಕಾರಣಗಳಿವೆ. ಇದು ಮಾನವ ದೇಹದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಕ್ಕೆ ನಾವು ಸೇವಿಸುವ ಆಹಾರವು ಮೊದಲು ಕಾರಣ ಎಂದು ಹೇಳಲಾಗುತ್ತಿದೆ. ಜೀವನಶೈಲಿಯಲ್ಲಿನ ವಿಪರೀತ ಬದಲಾವಣೆ, ಆಹಾರ ಸೇವನೆಯಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ, ವಿಪರೀತ ಮಾನಸಿಕ ಒತ್ತಡ ಹೃದಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕರಿದ ಪದಾರ್ಥಗಳ ಸೇವನೆಯೇ ಹೃದ್ರೋಗಕ್ಕೆ ಮುಖ್ಯ ಕಾರಣ ಎನ್ನುತ್ತಾರೆ ತಜ್ಞರು. ಈ ಕಾರಣದಿಂದಾಗಿ, ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗುತ್ತದೆ ಮತ್ತು ರಕ್ತದ ಹರಿವನ್ನು ತಡೆಯುತ್ತದೆ. ಹೃದ್ರೋಗಕ್ಕೆ ಮತ್ತೊಂದು ಕಾರಣವೆಂದರೆ ಅತಿಯಾದ ಉಪ್ಪು ಸೇವನೆ. ಉಪ್ಪಿನೊಂದಿಗೆ ಬಿಪಿ ಬರಬಹುದು. ಇದರಿಂದ ಹೃದಯ ಸ್ನಾಯುಗಳು ಗಟ್ಟಿಯಾಗುತ್ತವೆ.

ಈ ಪದಾರ್ಥಗಳಿಂದ ದೂರವಿರಿ

ಸಕ್ಕರೆ ಮತ್ತು ಪಾಲಿಶ್ ಇರುವ ಆಹಾರಗಳನ್ನು ಸೇವಿಸುವುದು ಕೂಡ ಹೃದಯಾಘಾತಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಮೈದಾ, ರವೆ, ಉಪಾದ ರವೆ ಮುಂತಾದವುಗಳಿಂದ ಮಾಡಿದ ಆಹಾರಗಳನ್ನು ಆದಷ್ಟು ತ್ಯಜಿಸಬೇಕು. ಇವು ರಕ್ತವನ್ನು ದಪ್ಪವಾಗಿಸುತ್ತದೆ. ಫಾಸ್ಟ್ ಫುಡ್ ಮತ್ತು ಜಂಕ್ ಫುಡ್ ಕೂಡ ದೇಹದಲ್ಲಿ ಕೊಬ್ಬು ಹೆಚ್ಚಾಗಲು ಕಾರಣವಾಗುತ್ತದೆ. ಇದಲ್ಲದೆ, ಅಂತಹ ವಸ್ತುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ. ಇದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗದೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು.

ಇದನ್ನೂ ಓದಿ: ಹೃದಯ ವೈಫಲ್ಯ ಮತ್ತು ಸ್ಲೀಪ್ ಅಪೆನಿಯಾಗೆ ಚಿಕಿತ್ಸೆ ನೀಡಲು ಹೊಸ ಔಷಧವನ್ನು ಕಂಡುಹಿಡಿಯಲಾಗಿದೆ: ಅಧ್ಯಯನ

ಹೃದಯಾಘಾತದಿಂದ ದೂರವಿರಲು ಒಮೆಗಾ 3 ಕೊಬ್ಬಿನಾಮ್ಲವಿರುವ ಆಹಾರವನ್ನು ಸೇವಿಸಿ ಎಂದು ತಜ್ಞರು ಹೇಳುತ್ತಾರೆ. ಅಗಸೆ ಬೀಜಗಳು, ವಾಲ್ನಟ್ಸ್, ಬಾದಾಮಿಗಳಂತಹ ಹೆಚ್ಚಿನ ವಸ್ತುಗಳನ್ನು ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ತೈಲ ಆಧಾರಿತ ಆಹಾರಗಳನ್ನು ಕಡಿಮೆ ಮಾಡುವುದು, ಮದ್ಯಪಾನ ಮತ್ತು ಧೂಮಪಾನವನ್ನು ತ್ಯಜಿಸುವುದರಿಂದ ಹತ್ತು ವರ್ಷಗಳವರೆಗೆ ಹೃದಯವನ್ನು ನೋಡಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಒತ್ತಡವನ್ನು ಕಡಿಮೆ ಮಾಡಲು ಧ್ಯಾನ ಕೂಡ ಉತ್ತಮ. ಯೋಗ ಮುಂತಾದವುಗಳನ್ನು ಅಭ್ಯಾಸ ಮಾಡಲು ತಜ್ಞರು ಸೂಚಿಸುತ್ತಾರೆ.

ಆರೋಗ್ಯ ಲೇಖನಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ