Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart disease in women’s: ತೂಕ ಹೆಚ್ಚಳ ಹೃದ್ರೋಗಕ್ಕೆ ಕಾರಣವಾಗಬಹುದು ಎಚ್ಚರ!

ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳು ಹೆಚ್ಚುತ್ತಿವೆ. ಈಗ ಮಹಿಳೆಯರೂ ಹೃದ್ರೋಗಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಪಿಜಿಐನಲ್ಲಿ ನಡೆದ ಸಂಶೋಧನೆಯೊಂದು ಬೊಜ್ಜಿನಿಂದ ಬಳಲುತ್ತಿರುವ 44 ಪ್ರತಿಶತದಷ್ಟು vಮಹಿಳೆಯರು ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ದೇಹದ ತೂಕ ಹೆಚ್ಚಳವು ಹೃದ್ರೋಗಕ್ಕೆ ಪ್ರಮುಖ ಕಾರಣವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಬೊಜ್ಜನ್ನು ನಿಯಂತ್ರಿಸುವುದು ಮುಖ್ಯ. ಜೊತೆಗೆ ತೂಕ ಹೆಚ್ಚಳ ಮತ್ತು ಹೃದ್ರೋಗದ ನಡುವೇ ಇರುವ ಸಂಬಂಧವೇನು ಎಂಬುದನ್ನು ತಿಳಿದುಕೊಳ್ಳಬೇಕು.

Heart disease in women's: ತೂಕ ಹೆಚ್ಚಳ ಹೃದ್ರೋಗಕ್ಕೆ ಕಾರಣವಾಗಬಹುದು ಎಚ್ಚರ!
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 07, 2024 | 4:20 PM

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹೃದ್ರೋಗ ಪ್ರಕರಣಗಳು ಹೆಚ್ಚುತ್ತಿವೆ. ಈಗ ಜನರು ಚಿಕ್ಕ ವಯಸ್ಸಿನಲ್ಲಿಯೇ ಹೃದ್ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳು ಹೆಚ್ಚುತ್ತಿವೆ. ಈಗ ಮಹಿಳೆಯರೂ ಹೃದ್ರೋಗಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಪಿಜಿಐನಲ್ಲಿ ನಡೆದ ಸಂಶೋಧನೆಯೊಂದು ಬೊಜ್ಜಿನಿಂದ ಬಳಲುತ್ತಿರುವ 44 ಪ್ರತಿಶತದಷ್ಟು ಮಹಿಳೆಯರು ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ದೇಹದ ತೂಕ ಹೆಚ್ಚಳವು ಹೃದ್ರೋಗಕ್ಕೆ ಪ್ರಮುಖ ಕಾರಣವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಬೊಜ್ಜನ್ನು ನಿಯಂತ್ರಿಸುವುದು ಮುಖ್ಯ. ಜೊತೆಗೆ ತೂಕ ಹೆಚ್ಚಳ ಮತ್ತು ಹೃದ್ರೋಗದ ನಡುವೇ ಇರುವ ಸಂಬಂಧವೇನು ಎಂಬುದನ್ನು ತಿಳಿದುಕೊಳ್ಳಬೇಕು.

ದೇಹದಲ್ಲಿ ಬೊಜ್ಜು ಹೆಚ್ಚಾದಂತೆ, ರಕ್ತದಲ್ಲಿ ಗ್ಲೂಕೋಸ್ ಮಟ್ಟವೂ ಹೆಚ್ಚಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ. ಈ ಕಾರಣದಿಂದಾಗಿ ಟೈಪ್ -2 ಮಧುಮೇಹ ಉಂಟಾಗಬಹುದು. ಮಧುಮೇಹವು ಹೃದ್ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಅನೇಕ ಸಂದರ್ಭಗಳಲ್ಲಿ, ಟೈಪ್ -2 ಮಧುಮೇಹ ಇರುವ ರೋಗಿಗಳಲ್ಲಿ ಹೃದ್ರೋಗ ಕಂಡುಬಂದಿದೆ.

ಬೊಜ್ಜು ಮತ್ತು ಹೃದಯದ ಆರೋಗ್ಯದ ನಡುವಿನ ಸಂಬಂಧ?

ದೆಹಲಿಯ ಆರ್‌ಎಂಎಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ. ತರುಣ್ ಕುಮಾರ್, ಸ್ಥೂಲಕಾಯತೆಯ ಹೆಚ್ಚಳದಿಂದ ಕೊಲೆಸ್ಟ್ರಾಲ್ ಕೂಡ ಹೆಚ್ಚಾಗುತ್ತದೆ, ಇದರಿಂದಾಗಿ ಹೃದಯಾಘಾತದ ಅಪಾಯವಿದೆ ಎಂದು ಹೇಳುತ್ತಾರೆ. ತೂಕದ ಹೆಚ್ಚಳವು, ದೇಹದಲ್ಲಿ ಬಿಪಿ ಸಮಸ್ಯೆಯನ್ನು ಉಂಟುಮಾಡುತ್ತದೆ. ಸ್ಥೂಲಕಾಯತೆಯ ಹೊರತಾಗಿ, ಹೃದ್ರೋಗಗಳಿಗೆ ಇನ್ನೂ ಅನೇಕ ಕಾರಣಗಳಿವೆ.

ಧೂಮಪಾನವೂ ಒಂದು ಕಾರಣ

ಮಹಿಳೆಯರಲ್ಲಿ ಹೃದಯಾಘಾತಕ್ಕೆ ಧೂಮಪಾನವೂ ಒಂದು ಪ್ರಮುಖ ಕಾರಣವಾಗಿದೆ. ಇದು ಹೃದಯರಕ್ತನಾಳದ ವ್ಯವಸ್ಥೆಗೆ ಹಾನಿಯುಂಟು ಮಾಡುತ್ತದೆ. ಈ ಕಾರಣದಿಂದಾಗಿ ಹೃದಯಾಘಾತ ಅಥವಾ ಅದಕ್ಕೆ ಸಂಬಂಧಿತ ಸಮಸ್ಯೆಗಳು ಸಂಭವಿಸಬಹುದು. ಕಳೆದ ಕೆಲವು ವರ್ಷಗಳಲ್ಲಿ, ಮಹಿಳೆಯರಲ್ಲಿಯೂ ಧೂಮಪಾನದ ಪ್ರವೃತ್ತಿ ಹೆಚ್ಚಾಗಿದೆ ಎಂದು ವೈದ್ಯರು ಹೇಳುತ್ತಾರೆ. ಈ ಕಾರಣದಿಂದಾಗಿ, ಮಹಿಳೆಯರು ಸಹ ಹೃದ್ರೋಗಗಳಿಗೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್; ಸರ್ಕಾರಿ ಆಸ್ಪತ್ರೆಗೂ ಬಂತ್ತು IVF ಚಿಕಿತ್ಸೆ

ಹೇಗೆ ರಕ್ಷಿಸಿಕೊಳ್ಳುವುದು?

ಡಾ. ತರುಣ್ ಕುಮಾರ್ ಅವರು ಹೃದ್ರೋಗವನ್ನು ತಡೆಗಟ್ಟಲು, ನಿಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಹೇಳುತ್ತಾರೆ. ಹಸಿರು ತರಕಾರಿಗಳು. ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ. ಬೀದಿ ಬದಿಗಳಲ್ಲಿ ಸಿಗುವ ಆಹಾರ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಿ. ಅತಿಯಾಗಿ ಉಪ್ಪು ಸೇವನೆ ಮಾಡುವುದನ್ನು ಕಡಿಮೆ ಮಾಡಿ. ಇಲ್ಲವಾದಲ್ಲಿ ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ತೂಕ ಹೆಚ್ಚಾದರೆ, ಹೃದ್ರೋಗ ಸೇರಿದಂತೆ ಅನೇಕ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ನಿಮ್ಮ ಆಹಾರದ ಬಗ್ಗೆ ಕಾಳಜಿ ವಹಿಸಿ ಮತ್ತು ಒತ್ತಡ ತೆಗೆದುಕೊಳ್ಳುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್