AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಿವೆ. ಇದಕ್ಕೆ ಪ್ರಮುಖ ಕಾರಣಗಳಲ್ಲಿ ದೇಹಕ್ಕೆ ಒಳ್ಳೆಯದಲ್ಲದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಕೂಡ ಒಂದು ಎಂದು ತಜ್ಞರು ಹೇಳುತ್ತಿದ್ದಾರೆ. ಹೀಗಾಗಿ ಹೃದಯದ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಆಹಾರಗಳು ಯಾವುವು ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಈ ಬಗ್ಗೆ ಡಾ. ಅಜಿತ್ ಜೈನ್ ಕೆಲವು ಮಾಹಿತಿ ಹಂಚಿಕೊಂಡಿದ್ದು, ಹೃದಯದ ಆರೋಗ್ಯಕ್ಕೆ ಹಾನಿಕಾರಕವಾಗುವ ಆಹಾರಗಳು ಯಾವುದು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ!
Dangerous Foods For HeartImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Mar 02, 2026 | 7:52 PM

Share

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆಗಳಿಂದ ಹೃದಯ (Heart) ಸಂಬಂಧಿ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ನಿಧಾನವಾಗಿ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೌದು, ಉತ್ತಮವಲ್ಲದ ಆಹಾರ ಸೇವನೆಯಿಂದ ಹೃದಯದ ರಕ್ತನಾಳಗಳಲ್ಲಿ ಕೊಬ್ಬು ಮತ್ತು ಮಲಿನಾಂಶಗಳು ಜಮೆಯಾಗಬಹುದು, ಇದರಿಂದ ರಕ್ತದ ಹರಿವಿಗೆ ಅಡ್ಡಿಯಾಗಬಹುದು. ಪರಿಣಾಮವಾಗಿ ಹೆಚ್ಚಿನ ಕೊಲೆಸ್ಟ್ರಾಲ್, ರಕ್ತದೊತ್ತಡ (ಹೈ ಬಿಪಿ) ಮತ್ತು ಹೃದಯಾಘಾತದ ಅಪಾಯ ಹೆಚ್ಚುತ್ತದೆ. ದೇಹಕ್ಕೆ ಒಳ್ಳೆಯದಲ್ಲದ ಆಹಾರ ದೇಹದಲ್ಲಿ ಉರಿಯೂತ ಹೆಚ್ಚಿಸಿ, ಹೃದಯಕ್ಕೆ ಹೆಚ್ಚು ಒತ್ತಡ ಉಂಟುಮಾಡಬಹುದು. ಹಾಗಾಗಿ ದೇಹ ನೀಡುವ ಕೆಲವು ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು. ಹಾಗಾದರೆ ನಮ್ಮ ಆಹಾರ ಪದ್ಧತಿ ಸರಿಯಾಗಿ ಇಲ್ಲ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ಆಹಾರ ಪದ್ಧತಿ ಸರಿಯಾಗಿಲ್ಲ ಎಂದಾಗ ದೇಹ ಕೆಲವು ಸೂಚನೆಯನ್ನು ನೀಡುತ್ತವೆ. ಉದಾಹರಣೆಗೆ, ಬೇಗನೇ ದಣಿವು ಕಾಣಿಸಿಕೊಳ್ಳುವುದು, ಎದೆ ಭಾರವಾಗುವುದು, ಉಸಿರಾಟದಲ್ಲಿ ತೊಂದರೆ, ತೂಕ ವೇಗವಾಗಿ ಹೆಚ್ಚಾಗುವುದು ಹಾಗೂ ಪದೇ ಪದೇ ಅಜೀರ್ಣ ಸಮಸ್ಯೆ ಕಾಣಿಸಿಕೊಳ್ಳುವುದು. ಈ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಗಮನಿಸದಿದ್ದರೆ ಗಂಭೀರ ಹೃದಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಹೃದಯವನ್ನು ಆರೋಗ್ಯಕರವಾಗಿಡಲು ಆಹಾರ ಪದ್ಧತಿ ಸರಿಯಾಗಿರುವುದು ಅತ್ಯಗತ್ಯವಾಗಿದೆ.

ಹೃದಯದ ಆರೋಗ್ಯಕ್ಕೆ ಹಾನಿಕಾರಕವಾಗುವ ಆಹಾರಗಳು:

ಡಾ. ಅಜಿತ್ ಜೈನ್ ಹೇಳುವ ಪ್ರಕಾರ, ಕೆಲವು ಆಹಾರ ಪದಾರ್ಥಗಳು ಹೃದಯದ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿವೆ. ಹೆಚ್ಚು ಎಣ್ಣೆಯಲ್ಲಿ ಕರಿದ ಆಹಾರಗಳು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ. ಪ್ರೊಸೆಸ್ಡ್ ಮತ್ತು ಪ್ಯಾಕೆಟ್ ಆಹಾರಗಳಲ್ಲಿ ಉಪ್ಪು ಹಾಗೂ ಕೊಬ್ಬಿನ ಪ್ರಮಾಣ ಹೆಚ್ಚಿರುವುದರಿಂದ ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಹೆಚ್ಚಿನ ಸಕ್ಕರೆ ಹೊಂದಿರುವ ಆಹಾರಗಳು ಮತ್ತು ಮಿಠಾಯಿ ಪದಾರ್ಥಗಳು ತೂಕ ಹೆಚ್ಚಳಕ್ಕೆ ಹಾಗೂ ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತವೆ, ಹಾಗಾಗಿ ಇದು ಹೃದಯದ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಜೊತೆಗೆ ರೆಡ್ ಮೀಟ್ ಹಾಗೂ ಹೆಚ್ಚಿನ ಕೊಬ್ಬುಳ್ಳ ಆಹಾರಗಳು ರಕ್ತನಾಳಗಳನ್ನು ಸಂಕೋಚಗೊಳಿಸಬಹುದು. ಅಷ್ಟೇಅಲ್ಲ ಪದೇ ಪದೇ ಸೇವನೆ ಮಾಡುವ ಜಂಕ್ ಫುಡ್ ಕೂಡ ಹೃದಯ ದುರ್ಬಲವಾಗುವುದಕ್ಕೆ ಕಾರಣವಾಗಬಹುದು. ಈ ಅಭ್ಯಾಸಗಳನ್ನು ದೀರ್ಘಕಾಲ ಮುಂದುವರಿಸಿದರೆ ಹೃದಯ ರೋಗಗಳ ಅಪಾಯ ಹೆಚ್ಚುತ್ತದೆ.

ಇದನ್ನೂ ಓದಿ: ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು

ಹೃದಯದ ಆರೋಗ್ಯಕ್ಕೆ ಯಾವ ರೀತಿಯ ಆಹಾರ ಸೇವಿಸಬೇಕು?

ಸಾಮಾನ್ಯವಾಗಿ ಹೃದಯವನ್ನು ಆರೋಗ್ಯವಾಗಿಡಲು ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಅವಶ್ಯಕವಾಗಿದೆ. ಸೊಪ್ಪು, ತರಕಾರಿಗಳು, ತಾಜಾ ಹಣ್ಣು ಮತ್ತು ಧಾನ್ಯಗಳು ಹೃದಯಕ್ಕೆ ಒಳ್ಳೆಯವು. ಒಮೇಗಾ- 3 ಫ್ಯಾಟಿ ಆಸಿಡ್‌ಗಳಿಂದ ಸಮೃದ್ಧವಾದ ಆಹಾರಗಳು ಹೃದಯವನ್ನು ಬಲಪಡಿಸುತ್ತವೆ. ಬೇಳೆ, ಕಾಯಿ ಹಾಗೂ ಬೀಜಗಳು ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತವೆ. ಕಡಿಮೆ ಕೊಬ್ಬಿನ ಹಾಲು ಮತ್ತು ಮೊಸರು ಆಹಾರದಲ್ಲಿ ಸೇರಿಸಬಹುದು. ಉಪ್ಪು ಮತ್ತು ಸಕ್ಕರೆಯ ಪ್ರಮಾಣವನ್ನು ನಿಯಂತ್ರಿತವಾಗಿಡಬೇಕು ಹಾಗೂ ಮನೆಯಲ್ಲೇ ತಯಾರಿಸಿದ ತಾಜಾ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಹೃದಯ ದೀರ್ಘಕಾಲ ಆರೋಗ್ಯಕರವಾಗಿರಲು ಸಹಾಯವಾಗುತ್ತದೆ.

ಆಹಾರ ಮಾತ್ರವಲ್ಲ, ಜೀವನಶೈಲಿಯೂ ಹೃದಯದ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿದಿನ ಲಘು ವ್ಯಾಯಾಮ ಅಥವಾ ನಡಿಗೆ ಮಾಡುವುದರಿಂದ ಹೃದಯ ಬಲವಾಗುತ್ತದೆ. ಜೊತೆಗೆ ಮಾನಸಿಕ ಒತ್ತಡ ಮತ್ತು ಆತಂಕದಿಂದ ದೂರವಿರುವುದು ಕೂಡ ಅಗತ್ಯ, ಏಕೆಂದರೆ ಮನೋಭಾರ ಹೃದಯದ ಮೇಲೆ ಪರಿಣಾಮ ಬೀರುತ್ತದೆ. ಅದರ ಜೊತೆಗೆ ಸರಿಯಾಗಿ ನಿದ್ರೆ ಮಾಡುವುದು ಮತ್ತು ದೀರ್ಘಕಾಲ ಕುಳಿತೇ ಇರುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ