Heart Health: ಕೊಲೆಸ್ಟ್ರಾಲ್ ಮಟ್ಟ ಕಾಪಾಡಿಕೊಳ್ಳಲು ಮಾಡಬೇಕಾದ ಐದು ಜೀವನಶೈಲಿ ಬದಲಾವಣೆಗಳು

ಹೃದಯದ ಆರೋಗ್ಯ: ಔಷಧಿಗಳು ಕೊಲೆಸ್ಟ್ರಾಲ್ ಅನ್ನು ಸುಧಾರಿಸಲು ಸಹಾಯ ಮಾಡುತ್ತವೆಯಾದರೂ, ಪೌಷ್ಟಿಕತಜ್ಞ ಲೊವ್ನೀತ್ ಬಾತ್ರಾ ಕೆಲವು ಜೀವನಶೈಲಿಯ ಬದಲಾವಣೆಗಳು ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

TV9 Web
| Updated By: Rakesh Nayak Manchi

Updated on: Jan 20, 2023 | 7:00 AM

Heart Health Five lifestyle changes to be made to maintain cholesterol levels health tips in kannada

ಕೊಲೆಸ್ಟ್ರಾಲ್ ರಕ್ತದಲ್ಲಿ ಕಂಡುಬರುವ ಮೇಣದಂಥ ವಸ್ತುವಾಗಿದೆ. ಸಾಮಾನ್ಯ ಮಟ್ಟವನ್ನು ಮೀರಿ ಕೊಲೆಸ್ಟ್ರಾಲ್ ಮಟ್ಟಗಳ ನಿರ್ಮಾಣವು ಆರೋಗ್ಯಕ್ಕೆ ಗಂಭೀರ ಅಪಾಯಗಳನ್ನು ಉಂಟುಮಾಡಬಹುದು, ಇದು ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಕಾರಣವಾಗುತ್ತದೆ. ಔಷಧಿಗಳು ಕೊಲೆಸ್ಟ್ರಾಲ್ ಅನ್ನು ಸುಧಾರಿಸಲು ಸಹಾಯ ಮಾಡಬಹುದಾದರೂ ಪೌಷ್ಟಿಕತಜ್ಞ ಲೊವ್ನೀತ್ ಬಾತ್ರಾ ಅವರು Instagramನಲ್ಲಿ, ಕೆಲವು ಜೀವನಶೈಲಿಯ ಬದಲಾವಣೆಗಳು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡಬಹುದು ಎಂದು ಹೇಳಿದ್ದಾರೆ.

1 / 6
Heart Health Five lifestyle changes to be made to maintain cholesterol levels health tips in kannada

ಹೃದಯದ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣಕ್ಕೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಪ್ರಾಥಮಿಕವಾಗಿ ಕೆಂಪು ಮಾಂಸ ಮತ್ತು ಪೂರ್ಣ ಕೊಬ್ಬಿನ ಡೈರಿ ಉತ್ಪನ್ನಗಳಲ್ಲಿ ಕಂಡುಬರುವ ಸ್ಯಾಚುರೇಟೆಡ್ ಕೊಬ್ಬನ್ನು ಕಡಿಮೆ ಸೇವಿಸಿ. ಒಮೆಗಾ -3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿರುವ ಹಸುವಿನ ತುಪ್ಪ, ಸಾಲ್ಮನ್, ವಾಲ್ನಟ್ ಮತ್ತು ಅಗಸೆ ಬೀಜಗಳನ್ನು ಸೇವಿಸುವಂತೆ ಸಲಹೆ ನೀಡಿದ್ದಾರೆ.

2 / 6
Heart Health Five lifestyle changes to be made to maintain cholesterol levels health tips in kannada

ನಿಯಮಿತವಾಗಿ ವ್ಯಾಯಾಮ ಮಾಡಿ: ವಾರದ ಹೆಚ್ಚಿನ ದಿನಗಳಲ್ಲಿ ವ್ಯಾಯಾಮ ಮಾಡಿ ಮತ್ತು ನಿಮ್ಮ ದೈಹಿಕ ಚಟುವಟಿಕೆಯನ್ನು ಹೆಚ್ಚಿಸಿ. ಏಕೆಂದರೆ ಇದು ನಿಮ್ಮ ಕೊಲೆಸ್ಟ್ರಾಲ್ ಅನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಲೊವ್ನೀತ್ ಬಾತ್ರಾ ಸಲಹೆ ನೀಡಿದ್ದಾರೆ.

3 / 6
Heart Health Five lifestyle changes to be made to maintain cholesterol levels health tips in kannada

ಧೂಮಪಾನವನ್ನು ತ್ಯಜಿಸಿ: ಧೂಮಪಾನವನ್ನು ತ್ಯಜಿಸುವ ಮೂಲಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಇದು ಅವರ ಅಪಧಮನಿಗಳನ್ನು ರಕ್ಷಿಸಲು ಸಹ ಸಹಾಯ ಮಾಡುತ್ತದೆ ಎಂದು ಬಾತ್ರಾ ಅವರು ಹೇಳಿದ್ದಾರೆ.

4 / 6
Heart Health Five lifestyle changes to be made to maintain cholesterol levels health tips in kannada

ಆರೋಗ್ಯಕರ ದೇಹದ ತೂಕ ಕಾಪಾಡುವುದು: ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವುದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ಮತ್ತು ಉತ್ತಮ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಆದರೆ ಶೇ 5 ರಿಂದ ಶೇ 10ರಷ್ಟು ತೂಕ ನಷ್ಟವು ಕೊಲೆಸ್ಟ್ರಾಲ್ ಸಂಖ್ಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

5 / 6
Heart Health Five lifestyle changes to be made to maintain cholesterol levels health tips in kannada

ಮಿತವಾದ ಆಲ್ಕೋಹಾಲ್ ಸೇವನೆ: ನೀವು ಆಲ್ಕೋಹಾಲ್ ಸೇವಿಸುವವರಾದರೆ ಅದನ್ನು ಮಿತವಾಗಿ ಕುಡಿಯಿರಿ. ಆರೋಗ್ಯವಂತ ವಯಸ್ಕರಿಗೆ, ಎಲ್ಲಾ ವಯಸ್ಸಿನ ಮಹಿಳೆಯರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಿಗೆ ದಿನಕ್ಕೆ ಒಂದು ಡ್ರಿಂಕ್ (ಬಿಯರ್: 330 ಎಂಎಲ್) ಮದ್ಯ ಮತ್ತು 65 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಪುರುಷರಿಗೆ ದಿನಕ್ಕೆ ಎರಡು ಡ್ರಿಂಕ್ (ಬಿಯರ್: 660 ಎಂಎಲ್). ಅತಿಯಾದ ಆಲ್ಕೋಹಾಲ್ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

6 / 6
Follow us
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ