Heart Health: 50ನೇ ವರ್ಷದಲ್ಲಿ ನಿಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುವ ಆಹಾರಗಳಿವು

| Updated By: ನಯನಾ ರಾಜೀವ್

Updated on: Jul 09, 2022 | 11:25 AM

ನಿಮ್ಮ 50ನೇ ವಯಸ್ಸಿನಲ್ಲೂ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಆಹಾರಗಳು ಸಹಾಯ ಮಾಡುತ್ತವೆ. ಕೆಲವು ಆಹಾರಗಳು ಸೂಪರ್​ಫುಡ್​ಗಳಾಗಿ ಕಾರ್ಯನಿರ್ವಹಿಸುತ್ತವೆ.

Heart Health: 50ನೇ ವರ್ಷದಲ್ಲಿ ನಿಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುವ ಆಹಾರಗಳಿವು
Foods
Follow us on

ನಿಮ್ಮ 50ನೇ ವಯಸ್ಸಿನಲ್ಲೂ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಆಹಾರಗಳು ಸಹಾಯ ಮಾಡುತ್ತವೆ.
ಕೆಲವು ಆಹಾರಗಳು ಸೂಪರ್​ಫುಡ್​ಗಳಾಗಿ ಕಾರ್ಯನಿರ್ವಹಿಸುತ್ತವೆ. ಯಾವ ಆಹಾರಗಳು ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಬಲ್ಲವು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಸೋಡಿಯಂ, ಕೊಬ್ಬು ಮತ್ತು ಕ್ಯಾಲೋರಿ ಫಾಸ್ಟ್ ಫುಡ್ ಗಳಲ್ಲಿ ಅಧಿಕವಾಗಿರುತ್ತದೆ. ಈ ಫಾಸ್ಟ್ ಫುಡ್ ಪದಾರ್ಥ ಸೇವನೆ ನಿಮ್ಮ ಹೃದಯವನ್ನು ದುರ್ಬಲಗೊಳಿಸುತ್ತದೆ.

ಹೋಟೆಲ್​ಗಳಲ್ಲಿ ಹೆಚ್ಚು ತಿನ್ನುವುದು, ಕರಿದ, ಎಣ್ಣೆ ಪದಾರ್ಥ ಸೇವನೆ ಮತ್ತು ಫಾಸ್ಟ್ ಫುಡ್ ಸೇವನೆ ಹೃದಯದ ಆರೋಗ್ಯಕ್ಕೆ ಹಾನಿಕರ.

ಧಾನ್ಯಗಳು: ಸಂಸ್ಕರಿಸಿದ ಆಹಾರಗಳಿಗಿಂತ ಧಾನ್ಯಗಳು ನಿಮ್ಮ ಹೃದಯಕ್ಕೆ ವಿಶೇಷ ಪ್ರಯೋಜನವನ್ನು ನೀಡುತ್ತದೆ. ಸಂಸ್ಕರಿಸಿದ ಆಹಾರಗಳು ಹೃದಯ ಅಪಾಯವನ್ನು ಹೆಚ್ಚಿಸಿದರೆ ಧಾನ್ಯಗಳು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ವಿರುದ್ಧ ಹೋರಾಡುತ್ತದೆ.

ಡಾರ್ಕ್ ಚಾಕೊಲೇಟ್: ಡಾರ್ಕ್ ಚಾಕೊಲೇಟ್​ನಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿದೆ ಮತ್ತು ಹೃದಯದ ಕಾರ್ಯನಿರ್ವಹಣೆಯನ್ನು ಸುಧಾರಿಸುವ ಅಗತ್ಯವಾದ ಖನಿಜಗಳು ಹೆಚ್ಚಿವೆ.

ತರಕಾರಿಗಳು: ಎಲೆಕೋಸು, ಪಾಲಕ್​ ಸೊಪ್ಪು, ಕೋಸುಗಡ್ಡೆ, ಹೂಕೋಸು, ಇತ್ಯಾದಿ. ಈ ತರಕಾರಿಗಳಲ್ಲಿ ಫೈಬರ್ ಮತ್ತು ಇತರ ಹಲವಾರು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಮತ್ತು ಸ್ನಾಯುಗಳ ಉತ್ತಮ ಕಾರ್ಯನಿರ್ವಹಣೆಯನ್ನು ಉತ್ತೇಜಿಸುತ್ತವೆ.

ಮೀನುಗಳ ಸೇವನೆ: ಸಾಲ್ಮನ್​ ಮೀನುಗಳನ್ನು ತಿನ್ನುವುದರಿಂದ ನೀವು ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದು. ಈ ವಯಸ್ಸಿನಲ್ಲಿ ದೇಹದ ಬಹುತೇಕ ಎಲ್ಲಾ ಕಾರ್ಯಗಳಿಗೆ ಪ್ರೋಟೀನ್ ಅಗತ್ಯವಿರುತ್ತದೆ. ಇದರಿಂದ ದೇಹದಲ್ಲಿರುವ ಆರೋಗ್ಯಕರ ಕೊಬ್ಬುಗಳು ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಇತರೆ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯವಾಗುತ್ತದೆ.
ಟೊಮೆಟೊ: ಟೊಮೆಟೋವಲ್ಲಿ ಉರಿಯೂತವನ್ನು ಕಡಿಮೆ ಮಾಡುವ ಶಕ್ತಿ ಇರುತ್ತದೆ. ಪರಿಧಮನಿಗೆ ಸಂಬಂಧಿಸಿದ ಕಾಯಿಲೆಗಳನ್ನು ದೂರ ಮಾಡುತ್ತದೆ.

ಆರೋಗ್ಯದ ಸೂತ್ರಗಳು
ನಿತ್ಯ 40 ನಿಮಿಷ ವ್ಯಾಯಾಮ : ನಿತ್ಯ 40 ನಿಮಿಷಗಳ ಕಾಲ ವ್ಯಾಯಾಮ ಮಾಡಿ, ವಾರದಲ್ಲಿ 5 ದಿನ ಹೀಗೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಶೇಕಡಾ 30 ರಷ್ಟು ಕಡಿಮೆ ಮಾಡಬಹುದು. ಇದು ತೂಕ ನಷ್ಟ, ರಕ್ತದ ಸಕ್ಕರೆ ಮಟ್ಟ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

ಸದಾ ಸಂತೋಷದಿಂದಿರಿ: ನೀವು ಸದಾ ಸಂತೋಷದಿಂದಿದ್ದಾಗ ದೇಹದಲ್ಲಿ ಎಂಡಾರ್ಫಿನ್ ಹಾರ್ಮೋನ್​ಗಳು ಬಿಡುಗಡೆಯಾಗುತ್ತವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದಕ್ಕಾಗಿ ಯೋಗ ಮತ್ತು ಧ್ಯಾನವನ್ನು ಮಾಡಬೇಕು.

ಉತ್ತಮ ನಿದ್ರೆಯೂ ಮುಖ್ಯ: ಉತ್ತಮ ನಿದ್ರೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ. ರಾತ್ರಿ ವೇಳೆ 7-8 ಗಂಟೆಗಳ ಕಾಲ ನಿದ್ದೆ ಮಾಡಲೇಬೇಕು.