AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಕಾರಣ

ಹೆಚ್ಚಿನ ಮಹಿಳೆಯರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ನಮ್ಮ ಕೆಟ್ಟ ಆಹಾರದ ಆಯ್ಕೆಗಳು, ಜೀವನಶೈಲಿ, ದೈಹಿಕ ಚಟುವಟಿಕೆಯ ಕೊರತೆ ಅಥವಾ ವ್ಯಾಯಾಮದ ಕೊರತೆಯು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರಿದೆ.

ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 07, 2023 | 2:53 PM

Share

ಕಳೆದ 3 ವರ್ಷಗಳಲ್ಲಿ ಹೃದಯಾಘಾತದ ಸಾವುಗಳಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)ದ ಇತ್ತೀಚಿನ ಮಾಹಿತಿಯು 2022ರಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಶೇ. 12.5ರಷ್ಟು ಹೆಚ್ಚಳ ಕಂಡುಬಂದಿದೆ ಎಂದು ಬಹಿರಂಗಪಡಿಸಿದೆ. 2022ರಲ್ಲಿ 32,457 ವ್ಯಕ್ತಿಗಳು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ಎನ್‌ಸಿಆರ್‌ಬಿಯ ಇತ್ತೀಚಿನ ‘ಭಾರತದಲ್ಲಿ ಅಪಘಾತ ಸಾವುಗಳು ಮತ್ತು ಆತ್ಮಹತ್ಯೆಗಳು’ ವರದಿ ಸೂಚಿಸಿದೆ. ಹಿಂದಿನ ವರ್ಷದಲ್ಲಿ ದಾಖಲಾದ 28,413 ಸಾವುಗಳಿಗೆ ಹೋಲಿಸಿದರೆ ಈ ಬಾರಿ ಬಹಳ ಹೆಚ್ಚಾಗಿದೆ.

ಹೃದಯದ ಆರೋಗ್ಯದ ಸಮಸ್ಯೆಗೆ ಕೊವಿಡ್-19 ಅಡ್ಡಪರಿಣಾಮವೂ ಕಾರಣವಿರಬಹುದು ಎಂದು ತಜ್ಞರು ಒಪ್ಪಿಕೊಂಡಿದ್ದಾರೆ. ನೊಯ್ಡಾದ ಫೋರ್ಟಿಸ್ ಆಸ್ಪತ್ರೆಯ ಕಾರ್ಡಿಯಾಲಜಿ ನಿರ್ದೇಶಕ ಮತ್ತು ಎಚ್‌ಒಡಿ ಡಾ. ಸಂಜೀವ್ ಗೇರಾ ಈ ಬಗ್ಗೆ ಇಂಡಿಯಾ ಟುಡೇಗೆ ನೀಡಿರುವ ಸಂದರ್ಶನದಲ್ಲಿ ಮಾಹಿತಿ ನೀಡಿದ್ದು, ಭಾರತದಲ್ಲಿ ಹೆಚ್ಚಿನ ಜನರು ಹೃದಯಾಘಾತದಿಂದ ಬಳಲುತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು 25ರಿಂದ 45 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 30 ವರ್ಷವಾದ ಬಳಿಕ ಹೃದ್ರೋಗದಿಂದ ಪಾರಾಗಲು ಈ 3 ಟೆಸ್ಟ್​ ಮಾಡಿಸಲು ಮರೆಯಬೇಡಿ

ತಜ್ಞರ ಪ್ರಕಾರ, ಹೆಚ್ಚಿನ ಮಹಿಳೆಯರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಡಾ. ಗೇರಾ ಪ್ರಕಾರ, ಕೋವಿಡ್-19 ಸಾಂಕ್ರಾಮಿಕವು ಜನರ ಜೀವನಶೈಲಿಯ ಮೇಲೆ ಪರಿಣಾಮ ಬೀರಿತು. ಇದು ಹೃದಯದ ಕಾಯಿಲೆಗಳನ್ನು ಹೆಚ್ಚಿಸುವ ನಿಷ್ಕ್ರಿಯತೆಯನ್ನು ಹೆಚ್ಚಿಸಿತು. ಉಪ್ಪಿನಂಶವಿರುವ ಆಹಾರ, ಧೂಮಪಾನ, ಹೆಚ್ಚಿದ ಒತ್ತಡ, ನಿಷ್ಕ್ರಿಯ ಜೀವನಶೈಲಿ, ನಿದ್ರಾಹೀನತೆ ಮತ್ತು ಸಂಸ್ಕರಿಸಿದ ತಿಂಡಿಗಳು ಕೊವಿಡ್ ಸಾಂಕ್ರಾಮಿಕ ರೋಗದ ನಂತರ ಜನರು ಹೃದಯಾಘಾತವನ್ನು ಅನುಭವಿಸುವ ಅಪಾಯವನ್ನು ಹೆಚ್ಚಿಸಿವೆ ಎಂದು ಡಾ. ಸಂಜೀವ್ ಗೇರಾ ಹೇಳಿದ್ದಾರೆ.

ಕೊರೊನಾ ಶುರುವಾದ ಬಳಿಕ ಸುಮಾರು 2ರಿಂದ ಎರಡೂವರೆ ವರ್ಷಗಳ ಕಾಲ ನಾವು ಜಡಜೀವನಶೈಲಿಯನ್ನು ರೂಢಿಸಿಕೊಂಡಿದ್ದೇವೆ. ಕುರ್ಚಿಗೆ ಅಂಟಿಕೊಂಡು, ಮನೆಯೊಳಗೇ ಇರುವುದನ್ನು ರೂಢಿಸಿಕೊಂಡಿದ್ದೇವೆ. ಜೊತೆಗೆ ನಮ್ಮ ಕೆಟ್ಟ ಆಹಾರದ ಆಯ್ಕೆಗಳು, ಜೀವನಶೈಲಿ, ದೈಹಿಕ ಚಟುವಟಿಕೆಯ ಕೊರತೆ ಅಥವಾ ವ್ಯಾಯಾಮದ ಕೊರತೆಯು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಡಾ. ಗೇರಾ ಹೇಳಿದ್ದಾರೆ.

ಇದನ್ನೂ ಓದಿ: ಯಾವ ರೀತಿಯ ಎದೆನೋವು ಅಪಾಯಕಾರಿ? ಹೃದಯದ ತೊಂದರೆಯೆಂದು ತಿಳಿಯೋದು ಹೇಗೆ?

ಹೃದಯಾಘಾತ ಹೆಚ್ಚಳಕ್ಕೆ ಇನ್ನೊಂದು ಪ್ರಮುಖ ಕಾರಣವೆಂದರೆ ಜೆನೆಟಿಕ್ಸ್. “ಭಾರತೀಯರಾದ ನಾವು ಕೆಟ್ಟ ಜೆನೆಟಿಕ್ಸ್​ ಅನ್ನು ಹೊಂದಿದ್ದೇವೆ. ಹೆಚ್ಚಿನ ಕೊಲೆಸ್ಟ್ರಾಲ್, ಅಧಿಕ ಸಕ್ಕರೆ, ಅಧಿಕ ರಕ್ತದೊತ್ತಡ, ಬೊಜ್ಜು, ಧೂಮಪಾನ, ನಿಷ್ಕ್ರಿಯ ಜೀವನಶೈಲಿ ಮುಂತಾದ ಅಪಾಯಕಾರಿ ಅಂಶಗಳಿಂದ ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್