AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಕೊಲೆಸ್ಟ್ರಾಲ್ ನಿಂದ ಹೃದಯವನ್ನು ರಕ್ಷಿಸಿಕೊಳ್ಳಲು ಈ ರೀತಿ ಮಾಡಿ; ಹೃದಯಾಘಾತ, ಪಾರ್ಶ್ವವಾಯುವಿನಿಂದ ದೂರವಿರಿ

ಸಾಮಾನ್ಯವಾಗಿ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದರ ಅರಿವು ನಿಮಗಿರುವುದಿಲ್ಲ. ಏಕೆಂದರೆ ಮೊದಲೇ ಯಾವುದೇ ರೀತಿಯ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವುದಿಲ್ಲ. ಇದರಿಂದಾಗಿ ಅಪಾಯಕಾರಿ ಸಮಸ್ಯೆಗಳು ಉದ್ಭವಿಸುವವರೆಗೆ ನಾವು ಅದನ್ನು ಸರಿಯಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ನಾವೇ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಅದಕ್ಕಿಂತ ಮೊದಲು ನಮ್ಮ ಜೀವನಶೈಲಿ ಸರಿಯಾಗಿರಬೇಕಾಗುತ್ತದೆ. ಹಾಗಾದರೆ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕೆಟ್ಟ ಕೊಲೆಸ್ಟ್ರಾಲ್ ನಿಂದ ಹೃದಯವನ್ನು ರಕ್ಷಿಸಿಕೊಳ್ಳಲು ಈ ರೀತಿ ಮಾಡಿ; ಹೃದಯಾಘಾತ, ಪಾರ್ಶ್ವವಾಯುವಿನಿಂದ ದೂರವಿರಿ
ಕೆಟ್ಟ ಕೊಲೆಸ್ಟ್ರಾಲ್
ಪ್ರೀತಿ ಭಟ್​, ಗುಣವಂತೆ
|

Updated on: Jul 24, 2025 | 4:00 PM

Share

ಡಿಸ್ಲಿಪಿಡೆಮಿಯಾ (Dyslipidemia) ಬಗ್ಗೆ ನಿಮಗೆ ತಿಳಿದಿರಬಹುದು. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟ ಅಸಹಜವಾಗಿ ಬದಲಾದಾಗ, ಅದನ್ನು ಡಿಸ್ಲಿಪಿಡೆಮಿಯಾ ಎಂದು ಕರೆಯಲಾಗುತ್ತದೆ. ಇದು ದೇಹಕ್ಕೆ ಹಾನಿಕಾರಕವಾದ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ನ ಹೆಚ್ಚಳ, ಉತ್ತಮ ಕೊಲೆಸ್ಟ್ರಾಲ್ (Cholesterol) ಎಂದು ಕರೆಯಲ್ಪಡುವ ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನ ಇಳಿಕೆ ಮತ್ತು ಟ್ರೈಗ್ಲಿಸರೈಡ್‌ಗಳ ಹೆಚ್ಚಳವನ್ನು ಒಳಗೊಂಡಿರುತ್ತದೆ. ಇವು ಹೃದಯ ಸಮಸ್ಯೆಗಳು, ಹೃದಯಾಘಾತ (Heart attack) ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಮಾತ್ರವಲ್ಲ ಕೆಲವು ಬಾರಿ ಜೀವಕ್ಕೂ ಅಪಾಯಕಾರಿಯಾಗಬಹುದು. ಆದ್ದರಿಂದ ಈ ರೀತಿಯ ಪರಿಸ್ಥಿತಿಗಳಿಂದ ದೂರವಿರಲು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯವಾಗುತ್ತದೆ. ಅದಕ್ಕೆ ನಮ್ಮ ಜೀವನಶೈಲಿ ಸರಿಯಾಗಿರಬೇಕಾಗುತ್ತದೆ. ಹಾಗಾದರೆ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಸಾಮಾನ್ಯವಾಗಿ, ಡಿಸ್ಲಿಪಿಡೆಮಿಯಾದಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಸಂಗ್ರಹವಾಗಿ, ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ, ಇದರ ಪರಿಣಾಮವಾಗಿ ಹೃದಯ ಸಮಸ್ಯೆಗಳು ಮತ್ತು ಪಾರ್ಶ್ವವಾಯು ಉಂಟಾಗುತ್ತದೆ. ಮೆದುಳಿಗೆ ಸರಿಯಾದ ಆಮ್ಲಜನಕ ಪೂರೈಕೆ ಸಿಗದಿದ್ದಾಗ ದೈಹಿಕ ಅಂಗವೈಕಲ್ಯದಿಂದ ಹಿಡಿದು ಸಾವಿನವರೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇದನ್ನು ತಡೆಗಟ್ಟಲು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.

ಸಮಸ್ಯೆ ಹೆಚ್ಚಾದಾಗ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ;

  • ಎದೆ ನೋವು
  • ಉಸಿರಾಟದ ತೊಂದರೆ
  • ಆಯಾಸ, ಸುಸ್ತು
  • ಅಧಿಕ ರಕ್ತದೊತ್ತಡ
  • ಹೃದಯ ಬಡಿತದಲ್ಲಿ ಏರಿಳಿತ

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಏನು ಮಾಡಬೇಕು?

ದೇಹವು ಅಗತ್ಯವಿರುವ ಪ್ರಮಾಣದ ಕೊಲೆಸ್ಟ್ರಾಲ್ ಅನ್ನು ಸ್ವತಃ ಉತ್ಪಾದಿಸುತ್ತದೆ. ಆದ್ದರಿಂದ, ಇದಕ್ಕಾಗಿ ಬೇರೆ ಆಹಾರವನ್ನು ಸೇವಿಸುವ ಅಗತ್ಯವಿಲ್ಲ. ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಟ್ರಾನ್ಸ್ ಕೊಬ್ಬುಗಳು ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೆಚ್ಚಿನ ಕೊಲೆಸ್ಟ್ರಾಲ್ ಮತ್ತು ಹೃದಯ ಸಮಸ್ಯೆಗಳು ಉಂಟಾಗಬಹುದು. ಇದನ್ನು ತಪ್ಪಿಸಲು, ಸ್ಯಾಚುರೇಟೆಡ್ ಕೊಬ್ಬಿನ ಆಹಾರಗಳನ್ನು ಕಡಿಮೆ ಮಾಡಬೇಕು. ಚೀಸ್, ಮತ್ತು ಹಾಲಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಕಡಿಮೆ ಮಾಡಿ.

ಇದನ್ನೂ ಓದಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!
Image
ಮೆದುಳು ಚುರುಕಾಗಿ ಕೆಲಸ ಮಾಡಲು ತಪ್ಪದೆ ಈ ಆಹಾರಗಳನ್ನು ಸೇವನೆ ಮಾಡಿ

ಯಾವ ರೀತಿಯ ಆಹಾರವನ್ನು ಸೇವಿಸಬೇಕು?

ಕಡಿಮೆ ಕೊಬ್ಬಿನ ಮಾಂಸ, ಸಮುದ್ರಾಹಾರ, ಹಾಲು, ಚೀಸ್, ಮೊಸರು, ಧಾನ್ಯಗಳು, ಹಣ್ಣು, ತರಕಾರಿಗಳು, ಓಟ್ಸ್, ಬೀನ್ಸ್, ಆವಕಾಡೊ, ಆಲಿವ್ ಎಣ್ಣೆ, ಬೀಜಗಳು ಮತ್ತು ಹೆಚ್ಚಿನ ಫೈಬರ್ ಅಂಶವಿರುವ ಆಹಾರವನ್ನು ಸೇವಿಸಬೇಕು.

ಇದನ್ನೂ ಓದಿ: ನಟಿ ಆಲಿಯಾ ಭಟ್‌ ಫಿಟ್‌ನೆಸ್ ತಜ್ಞ ಹೇಳಿರುವ ಈ ಸಲಹೆ ಪಾಲಿಸಿದ್ರೆ ಶುಗರ್‌ ಲೆವೆಲ್‌ ಕಂಟ್ರೋಲ್‌ ಮಾಡ್ಬೋದು

ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ

ಅಧಿಕ ತೂಕ ಮತ್ತು ಬೊಜ್ಜು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಆದ್ದರಿಂದ, ತೂಕ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಇದು ಹೃದಯ ಸಮಸ್ಯೆಗಳು ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿಮ್ಮ ವಯಸ್ಸು ಮತ್ತು ಎತ್ತರಕ್ಕೆ ಸೂಕ್ತವಾದ ತೂಕವನ್ನು ಕಾಪಾಡಿಕೊಳ್ಳಬೇಕು. ಮಾತ್ರವಲ್ಲ ನಿಯಮಿತವಾಗಿ ವ್ಯಾಯಾಮ ಮಾಡಿ. ಇದು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ. ಸೈಕ್ಲಿಂಗ್ ಮತ್ತು ವಾಕಿಂಗ್ ನಂತಹ ಚಟುವಟಿಕೆಗಳನ್ನು ಮಾಡಿ. ದಿನಕ್ಕೆ ಅರ್ಧ ಗಂಟೆಯಿಂದ ಒಂದು ಗಂಟೆಯವರೆಗೆ ವ್ಯಾಯಾಮ ಮಾಡಿ.

ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಧೂಮಪಾನವು ನಿಮ್ಮ ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದಲ್ಲದೆ, ಅಪಧಮನಿಗಳು ಗಟ್ಟಿಯಾಗುತ್ತವೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಉಂಟಾಗುತ್ತವೆ. ಆದ್ದರಿಂದ, ತಂಬಾಕಿನಿಂದ ದೂರವಿರಿ. ಧೂಮಪಾನ ಮಾಡಬೇಡಿ. ಅತಿಯಾದ ಮದ್ಯ ಸೇವನೆಯು ಟ್ರೈಗ್ಲಿಸರೈಡ್‌ಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ, ಮದ್ಯಪಾನದಿಂದ ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ