
ಡಿಸ್ಲಿಪಿಡೆಮಿಯಾ (Dyslipidemia) ಬಗ್ಗೆ ನಿಮಗೆ ತಿಳಿದಿರಬಹುದು. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟ ಅಸಹಜವಾಗಿ ಬದಲಾದಾಗ, ಅದನ್ನು ಡಿಸ್ಲಿಪಿಡೆಮಿಯಾ ಎಂದು ಕರೆಯಲಾಗುತ್ತದೆ. ಇದು ದೇಹಕ್ಕೆ ಹಾನಿಕಾರಕವಾದ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ನ ಹೆಚ್ಚಳ, ಉತ್ತಮ ಕೊಲೆಸ್ಟ್ರಾಲ್ (Cholesterol) ಎಂದು ಕರೆಯಲ್ಪಡುವ ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನ ಇಳಿಕೆ ಮತ್ತು ಟ್ರೈಗ್ಲಿಸರೈಡ್‌ಗಳ ಹೆಚ್ಚಳವನ್ನು ಒಳಗೊಂಡಿರುತ್ತದೆ. ಇವು ಹೃದಯ ಸಮಸ್ಯೆಗಳು, ಹೃದಯಾಘಾತ (Heart attack) ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಮಾತ್ರವಲ್ಲ ಕೆಲವು ಬಾರಿ ಜೀವಕ್ಕೂ ಅಪಾಯಕಾರಿಯಾಗಬಹುದು. ಆದ್ದರಿಂದ ಈ ರೀತಿಯ ಪರಿಸ್ಥಿತಿಗಳಿಂದ ದೂರವಿರಲು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯವಾಗುತ್ತದೆ. ಅದಕ್ಕೆ ನಮ್ಮ ಜೀವನಶೈಲಿ ಸರಿಯಾಗಿರಬೇಕಾಗುತ್ತದೆ. ಹಾಗಾದರೆ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.
ಸಾಮಾನ್ಯವಾಗಿ, ಡಿಸ್ಲಿಪಿಡೆಮಿಯಾದಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಸಂಗ್ರಹವಾಗಿ, ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ, ಇದರ ಪರಿಣಾಮವಾಗಿ ಹೃದಯ ಸಮಸ್ಯೆಗಳು ಮತ್ತು ಪಾರ್ಶ್ವವಾಯು ಉಂಟಾಗುತ್ತದೆ. ಮೆದುಳಿಗೆ ಸರಿಯಾದ ಆಮ್ಲಜನಕ ಪೂರೈಕೆ ಸಿಗದಿದ್ದಾಗ ದೈಹಿಕ ಅಂಗವೈಕಲ್ಯದಿಂದ ಹಿಡಿದು ಸಾವಿನವರೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇದನ್ನು ತಡೆಗಟ್ಟಲು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.
ದೇಹವು ಅಗತ್ಯವಿರುವ ಪ್ರಮಾಣದ ಕೊಲೆಸ್ಟ್ರಾಲ್ ಅನ್ನು ಸ್ವತಃ ಉತ್ಪಾದಿಸುತ್ತದೆ. ಆದ್ದರಿಂದ, ಇದಕ್ಕಾಗಿ ಬೇರೆ ಆಹಾರವನ್ನು ಸೇವಿಸುವ ಅಗತ್ಯವಿಲ್ಲ. ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಟ್ರಾನ್ಸ್ ಕೊಬ್ಬುಗಳು ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೆಚ್ಚಿನ ಕೊಲೆಸ್ಟ್ರಾಲ್ ಮತ್ತು ಹೃದಯ ಸಮಸ್ಯೆಗಳು ಉಂಟಾಗಬಹುದು. ಇದನ್ನು ತಪ್ಪಿಸಲು, ಸ್ಯಾಚುರೇಟೆಡ್ ಕೊಬ್ಬಿನ ಆಹಾರಗಳನ್ನು ಕಡಿಮೆ ಮಾಡಬೇಕು. ಚೀಸ್, ಮತ್ತು ಹಾಲಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಕಡಿಮೆ ಮಾಡಿ.
ಕಡಿಮೆ ಕೊಬ್ಬಿನ ಮಾಂಸ, ಸಮುದ್ರಾಹಾರ, ಹಾಲು, ಚೀಸ್, ಮೊಸರು, ಧಾನ್ಯಗಳು, ಹಣ್ಣು, ತರಕಾರಿಗಳು, ಓಟ್ಸ್, ಬೀನ್ಸ್, ಆವಕಾಡೊ, ಆಲಿವ್ ಎಣ್ಣೆ, ಬೀಜಗಳು ಮತ್ತು ಹೆಚ್ಚಿನ ಫೈಬರ್ ಅಂಶವಿರುವ ಆಹಾರವನ್ನು ಸೇವಿಸಬೇಕು.
ಇದನ್ನೂ ಓದಿ: ನಟಿ ಆಲಿಯಾ ಭಟ್ ಫಿಟ್‌ನೆಸ್ ತಜ್ಞ ಹೇಳಿರುವ ಈ ಸಲಹೆ ಪಾಲಿಸಿದ್ರೆ ಶುಗರ್ ಲೆವೆಲ್ ಕಂಟ್ರೋಲ್ ಮಾಡ್ಬೋದು
ಅಧಿಕ ತೂಕ ಮತ್ತು ಬೊಜ್ಜು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಆದ್ದರಿಂದ, ತೂಕ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಇದು ಹೃದಯ ಸಮಸ್ಯೆಗಳು ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿಮ್ಮ ವಯಸ್ಸು ಮತ್ತು ಎತ್ತರಕ್ಕೆ ಸೂಕ್ತವಾದ ತೂಕವನ್ನು ಕಾಪಾಡಿಕೊಳ್ಳಬೇಕು. ಮಾತ್ರವಲ್ಲ ನಿಯಮಿತವಾಗಿ ವ್ಯಾಯಾಮ ಮಾಡಿ. ಇದು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ. ಸೈಕ್ಲಿಂಗ್ ಮತ್ತು ವಾಕಿಂಗ್ ನಂತಹ ಚಟುವಟಿಕೆಗಳನ್ನು ಮಾಡಿ. ದಿನಕ್ಕೆ ಅರ್ಧ ಗಂಟೆಯಿಂದ ಒಂದು ಗಂಟೆಯವರೆಗೆ ವ್ಯಾಯಾಮ ಮಾಡಿ.
ಧೂಮಪಾನವು ನಿಮ್ಮ ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದಲ್ಲದೆ, ಅಪಧಮನಿಗಳು ಗಟ್ಟಿಯಾಗುತ್ತವೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಉಂಟಾಗುತ್ತವೆ. ಆದ್ದರಿಂದ, ತಂಬಾಕಿನಿಂದ ದೂರವಿರಿ. ಧೂಮಪಾನ ಮಾಡಬೇಡಿ. ಅತಿಯಾದ ಮದ್ಯ ಸೇವನೆಯು ಟ್ರೈಗ್ಲಿಸರೈಡ್‌ಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ, ಮದ್ಯಪಾನದಿಂದ ದೂರವಿರಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ