AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಮಾತ್ರವಲ್ಲ ರಾತ್ರಿ ಸಮಯದಲ್ಲೂ ಹೀಟ್ ಸ್ಟ್ರೋಕ್ ಅಪಾಯ ತಪ್ಪಿದ್ದಲ್ಲ: ತಜ್ಞರಿಂದ ಎಚ್ಚರಿಕೆ

ಹೀಟ್ ಸ್ಟ್ರೋಕ್ ಹಗಲಿನಲ್ಲಿ ಮಾತ್ರ ಕಂಡು ಬರುತ್ತದೆ ಎಂದು ನಾವು ಅಂದುಕೊಂಡಿದ್ದೇವೆ. ಆದರೆ ಇದು ಹಗಲಿಗೆ ಮಾತ್ರ ಸೀಮಿತವಾಗಿಲ್ಲ, ಅದು ರಾತ್ರಿಯೂ ಸಹ ಕಂಡುಬರಬಹುದು. ಹೌದು, ಹೆಚ್ಚಿದ ಶಾಖದ ವಾತಾವರಣದಿಂದ ಬೆವರು ಸರಿಯಾಗಿ ಒಣಗದೆ ದೇಹ ತಂಪಾಗುವುದಿಲ್ಲ. ಇದರಿಂದ ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಾಗಬಹುದು. ಹಾಗಾದರೆ ಯಾರು ಹೆಚ್ಚು ಅಪಾಯದಲ್ಲಿದ್ದಾರೆ, ಈ ರೀತಿ ಆಗುವುದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೆಳಿಗ್ಗೆ ಮಾತ್ರವಲ್ಲ ರಾತ್ರಿ ಸಮಯದಲ್ಲೂ ಹೀಟ್ ಸ್ಟ್ರೋಕ್ ಅಪಾಯ ತಪ್ಪಿದ್ದಲ್ಲ: ತಜ್ಞರಿಂದ ಎಚ್ಚರಿಕೆ
Heat Stroke At NightImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 30, 2026 | 9:07 PM

Share

ಬೇಸಿಗೆಯ ತೀವ್ರತೆ ದಿನದ ಬಿಸಿಲಿಗಷ್ಟೇ ಸೀಮಿತವಲ್ಲ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲೂ ಉಷ್ಣತೆ ಮತ್ತು ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಆರೋಗ್ಯದ ಮೇಲೆ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ರಾತ್ರಿ ಸುರಕ್ಷಿತ ಎಂದು ಭಾವಿಸುವವರು, ಈ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ತಜ್ಞರು ಸೂಚಿಸುತ್ತಿದ್ದಾರೆ. ಹೌದು, ತಜ್ಞರ ಪ್ರಕಾರ, ದಿನದ ಬಿಸಿಲಿನ ನಂತರವೂ ರಾತ್ರಿ ತಾಪಮಾನ ಕಡಿಮೆಯಾಗದಿದ್ದರೆ ದೇಹಕ್ಕೆ ತಣ್ಣಗಾಗಲು ಅವಕಾಶ ಸಿಗುವುದಿಲ್ಲ. ಇದರಿಂದ ದೇಹದ ಉಷ್ಣಾಂಶ ನಿಯಂತ್ರಣ ಕಷ್ಟವಾಗುತ್ತದೆ. ಹೆಚ್ಚಿದ ಶಾಖದ ವಾತಾವರಣದಿಂದ ಬೆವರು ಸರಿಯಾಗಿ ಒಣಗದೆ ದೇಹ ತಂಪಾಗುವುದಿಲ್ಲ. ಇದರಿಂದ ಹೀಟ್ ಸ್ಟ್ರೋಕ್ (Heat Stroke) ಅಪಾಯ ಹೆಚ್ಚಾಗಬಹುದು. ಹಾಗಾದರೆ ಯಾರು ಹೆಚ್ಚು ಅಪಾಯದಲ್ಲಿದ್ದಾರೆ, ಈ ರೀತಿ ಆಗುವುದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾರು ಹೆಚ್ಚು ಅಪಾಯದಲ್ಲಿದ್ದಾರೆ?

ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರು ಹೆಚ್ಚು ಸಂವೇದನಾಶೀಲರಾಗಿದ್ದು, ಅವರ ದೇಹ ತಾಪಮಾನವನ್ನು ಸಮರ್ಪಕವಾಗಿ ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದಲ್ಲದೆ, ಈಗಾಗಲೇ ಆರೋಗ್ಯ ಸಮಸ್ಯೆ ಹೊಂದಿರುವವರು ಅಥವಾ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಈ ರೀತಿಯ ಅಪಾಯ ಹೆಚ್ಚಾಗಿ ಕಾಡುತ್ತದೆ. ಮುಚ್ಚಿದ ಅಥವಾ ಗಾಳಿ ಬರದಂತ ಕೊಠಡಿಗಳಲ್ಲಿ ಇರುವವರು ಕೂಡ ಹೆಚ್ಚು ಅಪಾಯಕ್ಕೆ ಒಳಗಾಗಬಹುದು.

ಇದನ್ನೂ ಓದಿ: ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು

ತಡೆಯುವ ವಿಧಾನಗಳು ಯಾವುವು?

ರಾತ್ರಿ ಸಮಯದಲ್ಲಿ ಕೊಠಡಿಯನ್ನು ಹವಾನಿಯಂತ್ರಿತ ಮತ್ತು ಗಾಳಿಯಾಡುವಂತೆ ಇಡುವುದು ಮುಖ್ಯ. ಮಲಗುವ ಮುನ್ನ ಮತ್ತು ಮಧ್ಯಂತರದಲ್ಲಿ ನೀರು ಕುಡಿಯುವುದರಿಂದ ದೇಹ ಹೈಡ್ರೇಟ್ ಆಗಿರುತ್ತದೆ. ಹಗುರ ಮತ್ತು ಸಡಿಲ ಬಟ್ಟೆಗಳನ್ನು ಧರಿಸುವುದು ದೇಹಕ್ಕೆ ತಂಪನ್ನು ನೀಡುತ್ತದೆ. ಅಗತ್ಯವಿದ್ದರೆ ಫ್ಯಾನ್ ಅಥವಾ ಕೂಲರ್ ಬಳಸುವುದು ಸಹಾಯಕ. ಹೀಟ್ ಸ್ಟ್ರೋಕ್ ಅಪಾಯ ದಿನದಲ್ಲೇ ಅಲ್ಲ, ರಾತ್ರಿ ಸಮಯದಲ್ಲೂ ಇರುತ್ತದೆ. ಆದ್ದರಿಂದ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡರೆ ಈ ಅಪಾಯದಿಂದ ದೂರವಿರಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us