ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

ಚಳಿಗಾಲದಲ್ಲಿ ಸಾಮಾನ್ಯವಾಗಿ ಕೆಮ್ಮು, ಶೀತ, ಜ್ವರ ಮುಂತಾದ ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಅದರಲ್ಲಿಯೂ ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಸಂಗಾತಿಯಾಗಿ ಪರಿಣಮಿಸುತ್ತದೆ. ಹಾಗಾದರೆ ಪೋಷಕರು ತಮ್ಮ ಮಕ್ಕಳ ಆರೋಗ್ಯವನ್ನು ಯಾವ ರೀತಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು? ಅನಾರೋಗ್ಯ ಕಾಡದಂತೆ ಎಚ್ಚರಿಕೆ ವಹಿಸಿ, ಮಕ್ಕಳ ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸುವುದು ಹೇಗೆ? ಇಲ್ಲಿವೆ ಕೆಲವು ಸರಳ ಸಲಹೆಗಳು.

ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 25, 2024 | 3:59 PM

ಚಳಿಗಾಲ ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಕೆಮ್ಮು, ಶೀತ, ಜ್ವರ ಮುಂತಾದ ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಅದರಲ್ಲಿಯೂ ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಸಂಗಾತಿಯಾಗಿ ಪರಿಣಮಿಸುತ್ತದೆ. ಹಾಗಾದರೆ ಪೋಷಕರು ತಮ್ಮ ಮಕ್ಕಳ ಆರೋಗ್ಯವನ್ನು ಯಾವ ರೀತಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು? ಅನಾರೋಗ್ಯ ಕಾಡದಂತೆ ಎಚ್ಚರಿಕೆ ವಹಿಸಿ, ಮಕ್ಕಳ ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸುವುದು ಹೇಗೆ? ಇಲ್ಲಿವೆ ಕೆಲವು ಸರಳ ಸಲಹೆಗಳು.

ಸಾಮಾನ್ಯವಾಗಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುವುದರಿಂದಲೇ ನಾನಾ ರೀತಿಯ ಕಾಯಿಲೆಗಳು ಹೆಚ್ಚುತ್ತದೆ. ಇಂತಹ ಸಮಯದಲ್ಲಿ ಮಕ್ಕಳನ್ನು ಅನಾರೋಗ್ಯದಿಂದ ರಕ್ಷಿಸುವುದು ಮಾತ್ರವಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಆಹಾರಗಳನ್ನು ನೀಡುವ ಮೂಲಕ ಮಕ್ಕಳ ಆರೋಗ್ಯ ಕಾಪಾಡಬೇಕು. ಹಾಗಾದರೆ ಮಕ್ಕಳು ಯಾವ ರೀತಿಯ ಆಹಾರವನ್ನು ಸೇವಿಸಬೇಕು ತಿಳಿದುಕೊಳ್ಳಿ.

ತೆಂಗಿನ ಎಣ್ಣೆಯನ್ನು ಹೆಚ್ಚಾಗಿ ಬಳಸಿ

ಮಕ್ಕಳಿಗೆ ನೀಡುವ ಆಹಾರಗಳಲ್ಲಿ ತೆಂಗಿನ ಎಣ್ಣೆಯನ್ನು ಹೆಚ್ಚಾಗಿ ಬಳಸಿ. ಬೇರೆ ಬೇರೆ ರೀತಿಯ ಎಣ್ಣೆ ಮಾರುಕಟ್ಟೆಗಳಲ್ಲಿ ಲಭ್ಯವಿದ್ದರೂ ಕೂಡ ನೀವು ತೆಂಗಿನ ಎಣ್ಣೆ ಅಥವಾ ಗಾಣದ ಎಣ್ಣೆಯನ್ನು ಬಳಸಿ. ಇದು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಆರೋಗ್ಯವನ್ನು ಕಾಪಾಡುತ್ತದೆ. ಅದಲ್ಲದೆ ಚಳಿಗಾಲದಲ್ಲಿ ತೆಂಗಿನ ಎಣ್ಣೆಯ ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಚರ್ಮದ ಆರೋಗ್ಯವನ್ನು ಕೂಡ ಹೆಚ್ಚಿಸುತ್ತದೆ.

ಹಣ್ಣು- ತರಕಾರಿಗಳ ಸೇವನೆ ಹೆಚ್ಚಾಗಿರಲಿ

ನಾವು ದಿನನಿತ್ಯ ಸೇವಿಸುವ ತರಕಾರಿ ಮತ್ತು ಹಣ್ಣುಗಳು ಪೋಷಕಾಂಶಗಳ ಆಗರವಾಗಿವೆ. ಚಳಿಗಾಲದ ಸಮಯದಲ್ಲಿ ಇವುಗಳನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯ ಆಹಾರಗಳಲ್ಲಿ ನೀಡುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲು ಇವು ಸಹಕಾರಿಯಾಗಲಿವೆ. ಪೇರಳೆ, ಸೇಬು, ಕಿತ್ತಳೆ ಮತ್ತು ಸ್ಟ್ರಾಬೆರಿಯಂತಹ ಹಣ್ಣುಗಳಲ್ಲಿಯೂ ವಿಟಮಿನ್ ಹೇರಳವಾಗಿರುತ್ತದೆ. ಹಾಗಾಗಿ ಇವು ಮಕ್ಕಳ ಬೆಳವಣಿಗೆಗೂ ಪೂರಕವಾಗಿರಲಿವೆ. ತರಕಾರಿ ಮತ್ತು ಹಣ್ಣುಗಳನ್ನು ಹೊರತುಪಡಿಸಿದರೆ ನಟ್ಸ್ ಮತ್ತು ಸೀಡ್ಸ್​ಗಳು ಕೂಡ ಆರೋಗ್ಯಕರ ಕೊಬ್ಬು, ವಿಟಮಿನ್​ಗಳು ಮತ್ತು ಮಿನರಲ್ಸ್​ಗಳನ್ನ ಹೇರಳವಾಗಿ ಒಳಗೊಂಡಿರುತ್ತದೆ. ಇವನ್ನ ನಿಯಮಿತವಾಗಿ ಮಕ್ಕಳಿಗೆ ನೀಡುವುದರಿಂದ ಸುಲಭವಾಗಿ ಅವರ ಆರೋಗ್ಯ ಕಾಪಾಡಬಹುದಾಗಿದೆ.

ಇದನ್ನೂ ಓದಿ: ವೇಟ್ ಲಿಫ್ಟಿಂಗ್‌ ಸಂಪೂರ್ಣ ದೇಹಕ್ಕೆ ಪರಿಪೂರ್ಣ ವ್ಯಾಯಾಮ;ಡಾ.ಸುಧೀರ್ ಕುಮಾರ್

ಸೂರ್ಯಕಾಂತಿ ಮತ್ತು ಕುಂಬಳ ಬೀಜ

ಸೂರ್ಯಕಾಂತಿ ಬೀಜದಲ್ಲಿ ವಿಟಮಿನ್ ಇ ಹೇರಳವಾಗಿದ್ದು, ಕುಂಬಳಕಾಯಿ ಬೀಜದಲ್ಲಿಒಮೆಗಾ-3 ಫ್ಯಾಟಿ ಆ್ಯಸಿಡ್ ಮತ್ತು ಆ್ಯಮಿನೋ ಆ್ಯಸಿಡ್ ದೇಹದಲ್ಲಿನ ರೋಗ ನಿರೋಧಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ. ಮಕ್ಕಳು ಇಷ್ಟಪಟ್ಟು ತಿನ್ನುವ ಆಹಾರ- ಹಣ್ಣುಗಳ ಜೊತೆ ಇವುಗಳನ್ನು ಸೇರಿಸಿ ಕೊಡುವುದರಿಂದ ಚಳಿಗಾಲದಲ್ಲಿ ನಿಮ್ಮ ಮಕ್ಕಳನ್ನು ಬಾಧಿಸುವ ಆರೋಗ್ಯ ಸಮಸ್ಯೆಗಳಿಂದ ಸುಲಭವಾಗಿ ದೂರ ಇಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು