Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಕಿಡ್ನಿಯ ಆರೋಗ್ಯವನ್ನು ಕಾಪಾಡಲು ತಜ್ಞರು ನೀಡಿರುವ ಸಲಹೆ ಇಲ್ಲಿದೆ

ಈಗಿನ ಬದಲಾದ ಜೀವನಶೈಲಿ ಅಂದರೆ ಒತ್ತಡ ಹಾಗೂ ಕಳಪೆ ಆಹಾರ ಕ್ರಮದಿಂದಾಗಿ ದೇಹದಲ್ಲಿನ ರೋಗ ನಿರೋಧಕ ಶಕ್ತಿಯೂ ಕಡಿಮೆಯಾಗುತ್ತದೆ. ಪರಿಣಾಮ ಜನರು ವೇಗವಾಗಿ ಕಾಯಿಲೆಗೆ ತುತ್ತಾಗುತ್ತದೆ.

ಬೇಸಿಗೆಯಲ್ಲಿ ಕಿಡ್ನಿಯ ಆರೋಗ್ಯವನ್ನು ಕಾಪಾಡಲು ತಜ್ಞರು ನೀಡಿರುವ ಸಲಹೆ ಇಲ್ಲಿದೆ
ಬೇಸಿಗೆಯಲ್ಲಿ ಕಿಡ್ನಿಯ ಆರೋಗ್ಯ
Follow us
ಅಕ್ಷತಾ ವರ್ಕಾಡಿ
|

Updated on:Mar 09, 2023 | 4:14 PM

ದೇಹದ ಪ್ರತಿಯೊಂದು ಅಂಗವು ಸರಾಗವಾಗಿ ಕಾರ್ಯನಿರ್ವಹಿಸಲು ಮೂತ್ರಪಿಂಡಗಳ ಅತ್ಯಂತ ಅಗತ್ಯ.ಮೂತ್ರಕೋಶ ಅಥವಾ ಮೂತ್ರಪಿಂಡಗಳು ದೇಹದ ಅವಿಭಾಜ್ಯ ಅಂಗವಾಗಿದೆ. ಇದು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನೀವು ಆರೋಗ್ಯವಾಗಿರಲು ಸಾಧ್ಯ. ಇದು ರಕ್ತದಿಂದ ತ್ಯಾಜ್ಯ ಮತ್ತು ಹೆಚ್ಚುವರಿ ದ್ರವವನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ. ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಉತ್ತೇಜಿಸುವ ಹಾರ್ಮೋನ್ಗಳನ್ನು ಉತ್ಪಾದಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಆದರೆ ಈಗಿನ ಬದಲಾದ ಜೀವನಶೈಲಿ ಅಂದರೆ ಒತ್ತಡ ಹಾಗೂ ಕಳಪೆ ಆಹಾರ ಕ್ರಮದಿಂದಾಗಿ ದೇಹದಲ್ಲಿನ ರೋಗ ನಿರೋಧಕ ಶಕ್ತಿಯೂ ಕಡಿಮೆಯಾಗುತ್ತದೆ. ಪರಿಣಾಮ ಜನರು ವೇಗವಾಗಿ ಕಾಯಿಲೆಗೆ ತುತ್ತಾಗುತ್ತದೆ.  ಹರಿಯಾಣದ ಸಿಕೆ ಬಿರ್ಲಾ ಆಸ್ಪತ್ರೆಯ ಡಾ ಮೋಹಿತ್ ಖಿರ್ಬತ್​​ ರವರು ಇಂಡಿಯಾ ಡಾಟ್​​ ಕಾಮ್​​​ನೊಂದಿಗೆ ಹಂಚಿಕೊಂಡಿರುವ ಮಾಹಿತಿ ಇಲ್ಲಿದೆ

ಮೂತ್ರಪಿಂಡದ ಸಮಸ್ಯೆಗಳು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚುವುದು ಅಷ್ಟೊಂದು ಸುಲಭವಲ್ಲ. ಪ್ರಪಂಚದಾದ್ಯಂತದ ಪ್ರತಿಯೊಬ್ಬರೂ ಮೂತ್ರಪಿಂಡದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಬೇಸಿಗೆಯಲ್ಲಿ ಆರೋಗ್ಯಕರ ಮೂತ್ರಪಿಂಡಗಳಿಗೆ ಕೆಲವು ತಜ್ಞರು ಶಿಫಾರಸು ಮಾಡಿದ ಸಲಹೆಗಳು ಇಲ್ಲಿವೆ. ಮೂತ್ರಪಿಂಡಗಳನ್ನು ಆರೋಗ್ಯವಾಗಿಡಲು ನೀವು ಮಾಡಬಹುದಾದ ಪ್ರಮುಖ ವಿಷಯವೆಂದರೆ ಸಾಕಷ್ಟು ನೀರು ಕುಡಿಯುವುದು.

ಇದನ್ನೂ ಓದಿ: ಈ ಸಮಸ್ಯೆಗಳು ನಿಮ್ಮಲ್ಲಿ ಕಂಡುಬಂದರೆ, ಇದು ಕಿಡ್ನಿ ಸ್ಟೋನ್​​ನ ಆರಂಭಿಕ ಲಕ್ಷಣಗಳಾಗಿರಬಹುದು

ಸಾಮಾನ್ಯವಾಗಿ, ಒಬ್ಬರು ದಿನಕ್ಕೆ 2 ರಿಂದ 3 ಲೀಟರ್ ನೀರನ್ನು ತೆಗೆದುಕೊಳ್ಳಬೇಕು. ಕಡಿಮೆ ನೀರು ಕುಡಿಯುವುದರಿಂದ, ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಮೂತ್ರಪಿಂಡಗಳಿಗೆ ತೊಂದರೆಯಾಗುತ್ತದೆ. ವಾಸ್ತವವಾಗಿ, ಕಡಿಮೆ ನೀರು ಕುಡಿಯುವುದರಿಂದ ನಿರ್ಜಲೀಕರಣದ ಅಪಾಯವಿದೆ.

ಬೇಸಿಗೆಯಲ್ಲಿ, ತೀವ್ರವಾದ ಅತಿಸಾರ ರೋಗಗಳ ಅಪಾಯವೂ ಹೆಚ್ಚು, ಆದ್ದರಿಂದ ಸೇವಿಸುವ ಆಹಾರ ಮತ್ತು ನೀರು ಶುದ್ಧ ಮತ್ತು ಆರೋಗ್ಯಕರ ಮೂಲದಿಂದ ಬಂದಿರುವುದು ಬಹಳ ಮುಖ್ಯ. ಆದ್ದರಿಂದ ಉತ್ತಮ ಮೂತ್ರಪಿಂಡದ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಸಾಕಷ್ಟು ನೀರಿನ ಸೇವನೆಯು ಅತ್ಯಗತ್ಯ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:04 pm, Thu, 9 March 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !