Updated on: Jun 22, 2023 | 6:30 AM
ಮಾವಿನ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ. ಹಸಿರು ಮಾವು ಕೆಂಪು ಅಥವಾ ಹಳದಿಗಿಂತ ಹೆಚ್ಚು ವಿಟಮಿನ್ ಸಿ ಅನ್ನು ಹೊಂದಿರುತ್ತವೆ.
ಮೇಗ್ನಿಷಿಯಸ್, ಶಕ್ತಿಯುತ ಖನಿಜ ಮತ್ತು ವಿಟಮಿನ್ ಸಿ ಯನ್ನು ಹೊಂದಿದ ಅನಾನಸ್, ಅನೇಕ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಜೊತೆಗೆ ದೈನಂದಿನ ಆಹಾರದಲ್ಲಿ ಇದನ್ನು ಸೇರಿಸಿಕೊಳ್ಳುವುದು ಒಳ್ಳೆಯದು.
ಈ ಹಣ್ಣುಗಳು ವಿಟಮಿನ್ ಸಿ ಯಿಂದಲೇ ತುಂಬಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಕ್ಯಾನ್ಸರ್ ಅಪಾಯವನ್ನು ನಿವಾರಿಸಲು ಪೇರಲ ಹೆಸರುವಾಸಿಯಾಗಿದೆ.
ಕಿವಿ ಹಣ್ಣು ವಿಟಮಿನ್ ಸಿ, ವಿಟಮಿನ್ ಕೆ ಮತ್ತು ವಿಟಮಿನ್ ಇ ಯ ಪ್ರಬಲ ಮೂಲವಾದ ಕಿವಿ ಹಣ್ಣು, ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.
ಪಪ್ಪಾಯಿಯು ಅದರ ಒರಟು ಮತ್ತು ಫೈಬರ್ ಅಂಶಕ್ಕೆ ಹೆಸರುವಾಸಿಯಾಗಿದೆ. ಪಪ್ಪಾಯಿಯು ವಿಟಮಿನ್ ಸಿ ವಿಟಮಿನ್ ಎ ಮತ್ತು ವಿಟಮಿನ್ ಇ ಯ ಸಮೃದ್ಧ ಮೂಲವಾಗಿದೆ.
ಸ್ಟ್ರಾಬೆರಿಗಳು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಯಿಂದ ತುಂಬಿರುತ್ತವೆ. ದೇಹಕ್ಕೆ ಜೀವಸತ್ವಗಳು ಮತ್ತು ಫೈಬರ್ ಅನ್ನು ಹೆಚ್ಚಿಸಲು ಹೆಸರುವಾಸಿಯಾಗಿದೆ.
Published On - 6:15 am, Thu, 22 June 23