ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿರಲು ಕಾರಣವೇನು? ತಡೆಗಟ್ಟುವುದು ಹೇಗೆ ತಿಳಿದುಕೊಳ್ಳಿ

ಚಳಿಗಾಲದಲ್ಲಿ ಮಕ್ಕಳು ಬೇಗ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಕೆಮ್ಮು, ಶೀತ, ಜ್ವರ, ಉಸಿರಾಟದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಈ ಋತುವಿನಲ್ಲಿ ಮಕ್ಕಳಲ್ಲಿ ನ್ಯುಮೋನಿಯಾ ಸೋಂಕಿನ ಅಪಾಯ ಹೆಚ್ಚಾಗಿ ಕಂಡುಬರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಜೊತೆಗೆ ರೋಗ ಲಕ್ಷಣಗಳನ್ನು ಸಮಯೋಚಿತವಾಗಿ ಗುರುತಿಸಿದರೆ ಬೇಗ ರೋಗವನ್ನು ಗುಣಪಡಿಸಬಹುದು. ಹಾಗಾದರೆ ಚಳಿಗಾಲದಲ್ಲಿ ಮಕ್ಕಳಿಗೆ ಉಸಿರಾಟಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಏಕೆ ಬರುತ್ತವೆ? ಅವುಗಳನ್ನು ಹೇಗೆ ತಡೆಗಟ್ಟಬಹುದು ಎಂಬುದನ್ನು ತಿಳಿದುಕೊಳ್ಳಿ.

ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿರಲು ಕಾರಣವೇನು? ತಡೆಗಟ್ಟುವುದು ಹೇಗೆ ತಿಳಿದುಕೊಳ್ಳಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 25, 2025 | 3:45 PM

ಸಾಮಾನ್ಯವಾಗಿ ಚಳಿಗಾಲದಲ್ಲಿ ಮಕ್ಕಳು ಬೇಗ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಕೆಮ್ಮು, ಶೀತ, ಜ್ವರ, ಉಸಿರಾಟದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಈ ಋತುವಿನಲ್ಲಿ ಮಕ್ಕಳಲ್ಲಿ ನ್ಯುಮೋನಿಯಾ ಸೋಂಕಿನ ಅಪಾಯ ಹೆಚ್ಚಾಗಿ ಕಂಡುಬರುತ್ತಿದೆ. ಅದಲ್ಲದೆ ಈ ರೀತಿಯ ಆರೋಗ್ಯ ಸಮಸ್ಯೆ ವಿಶೇಷವಾಗಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಾಣಬಹುದಾಗಿದೆ. ಅದೇ ರೀತಿ ಈ ವರ್ಷದ ಚಳಿಗಾಲದಲ್ಲಿಯೂ ಮಕ್ಕಳು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಜೊತೆಗೆ ರೋಗ ಲಕ್ಷಣಗಳನ್ನು ಸಮಯೋಚಿತವಾಗಿ ಗುರುತಿಸಿದರೆ ಬೇಗ ರೋಗವನ್ನು ಗುಣಪಡಿಸಬಹುದು. ಹಾಗಾದರೆ ಚಳಿಗಾಲದಲ್ಲಿ ಮಕ್ಕಳಿಗೆ ಉಸಿರಾಟಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಏಕೆ ಬರುತ್ತವೆ? ಅವುಗಳನ್ನು ಹೇಗೆ ತಡೆಗಟ್ಟಬಹುದು ತಿಳಿದುಕೊಳ್ಳಿ.

ಚಳಿಗಾಲದಲ್ಲಿಯೇ ಮಕ್ಕಳು ಹೆಚ್ಚಾಗಿ ಅನಾರೋಗ್ಯಕ್ಕೆ ಒಳಗಾಗುವುದೇಕೆ?

ಸಾಮಾನ್ಯವಾಗಿ ಚಳಿಗಾಲದಲ್ಲಿ ಕಡಿಮೆ ತಾಪಮಾನವಿರುವುದರಿಂದ, ಅನೇಕ ರೀತಿಯ ವೈರಸ್ ಗಳು ಮತ್ತು ಬ್ಯಾಕ್ಟೀರಿಯಾಗಳು ಸಕ್ರಿಯವಾಗುತ್ತವೆ. ಇದು ಮಕ್ಕಳಲ್ಲಿ ವೈರಸ್ ಮತ್ತು ಬ್ಯಾಕ್ಟೀರಿಯಾ ಹರಡುವ ಅಪಾಯವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಉಸಿರಾಟದ ಸಮಸ್ಯೆ, ಶೀತ, ಜ್ವರದಂತಹ ರೋಗಗಳು ಹೆಚ್ಚಾಗಲು ಪ್ರಾರಂಭಿಸುತ್ತವೆ. ಅದರಲ್ಲಿಯೂ ಚಳಿಗಾಲದಲ್ಲಿ ಮಕ್ಕಳಲ್ಲಿ ನ್ಯುಮೋನಿಯಾ ಮತ್ತು ಉಸಿರಾಟದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಜೊತೆಗೆ ಶ್ವಾಸಕೋಶದಲ್ಲಿ ಸೋಂಕಿನ ಅಪಾಯವೂ ಹೆಚ್ಚಾಗುತ್ತದೆ. ಇದು ಕೂಡ ಉಸಿರಾಟದ ತೊಂದರೆಗೆ ಕಾರಣವಾಗಬಹುದು. ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ, ದುರ್ಬಲ ರೋಗನಿರೋಧಕ ಶಕ್ತಿ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗಿರುತ್ತದೆ. ಇದೆಲ್ಲದರ ಜೊತೆಗೆ ಈಗ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಉಸಿರಾಟದ ಕಾಯಿಲೆಗಳು ಸಹ ಕಂಡುಬರುತ್ತಿವೆ.

ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೇಗೆ?

*ಮಕ್ಕಳನ್ನು ಹೊರಗೆ ಕಳುಹಿಸುವಾಗ ಅವರಿಗೆ ಚೆನ್ನಾಗಿರುವ, ದೇಹವನ್ನು ಬೆಚ್ಚಗಿಡುವ ಉಡುಪನ್ನು ಧರಿಸಿ ಕಳುಹಿಸಿ.

*ನಿಮ್ಮ ಮಗು ಸೇವನೆ ಮಾಡುವ ಆಹಾರದಲ್ಲಿ ವಿಟಮಿನ್ ಸಿ, ಹಸಿರು ತರಕಾರಿಗಳು ಮತ್ತು ಹಣ್ಣುಗಳು ಇರುವಂತೆ ನೋಡಿಕೊಳ್ಳಿ.

*ಮಕ್ಕಳು ಪೂರ್ಣ ನಿದ್ರೆ ಪಡೆಯಬೇಕು. ಆಗ ಮಾತ್ರ ಅವರು ಆರೋಗ್ಯವಾಗಿರುತ್ತಾರೆ. ಹಾಗಾಗಿ ನಿದ್ರೆ ಸರಿಯಾಗಿ ಮಾಡುವಂತೆ ನೋಡಿಕೊಳ್ಳಿ.

*ನಿಮ್ಮ ಮಕ್ಕಳ ಜೀವನಶೈಲಿ ಉತ್ತಮವಾಗಿರುವಂತೆ ಕಾಳಜಿ ವಹಿಸಿ.

*ಯಾವುದೇ ರೀತಿಯ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬರಲು ಮಕ್ಕಳಿಗೆ ಅವಕಾಶ ನೀಡಬೇಡಿ.

*ಕೈಗಳ ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸಿ.

*ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮಕ್ಕಳಿಗೆ ಸಲಹೆ ನೀಡಿ.

*ಮಗುವಿಗೆ ಯಾವುದೇ ರೀತಿಯ ಸಮಸ್ಯೆ ಕಂಡು ಬಂದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲು ಕ್ಲಿಕ್ ಮಾಡಿ

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್