ಅಂಗವೈಕಲ್ಯಕ್ಕೆ ನಮ್ಮೆಲ್ಲರ ಪ್ರೀತಿ, ಕಾಳಜಿಯೇ ಮನೆಮದ್ದು

International Day of Persons with Disabilities: ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅವರು ಸಮಾಜದ ಮುಖ್ಯವಾಹಿನಿಗಳಲ್ಲಿ ಗುರುತಿಸಿಕೊಳ್ಳಬಲ್ಲರು. ಅಲ್ಲದೆ ಅವರಿಗೂ ಭಾವನೆಗಳಿವೆ, ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ ಎಂಬುದನ್ನು ನಾವು ಮರೆಯಬಾರದು. ಅದಕ್ಕಾಗಿಯೇ ವಿಶ್ವಸಂಸ್ಥೆ ಸಮಾಜದಲ್ಲಿ ಅವರ ಮಹತ್ವವನ್ನು ತಿಳಿಸುವ ಉದ್ದೇಶದಿಂದಲೇ ವರ್ಷದ ಒಂದು ದಿನವನ್ನು ಅವರಿಗಾಗಿ ಮೀಸಲಿರಿಸಿದೆ. ಹಾಗಾಗಿ ಡಿ. 3 ರಂದು ಜಗತ್ತಿನೆಲ್ಲೆಡೆ ವಿಶ್ವ ಅಂಗವಿಕಲ ದಿನವನ್ನಾಗಿ ಆಚರಿಸಲಾಗುತ್ತದೆ.

ಅಂಗವೈಕಲ್ಯಕ್ಕೆ ನಮ್ಮೆಲ್ಲರ ಪ್ರೀತಿ, ಕಾಳಜಿಯೇ ಮನೆಮದ್ದು
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 03, 2024 | 10:18 AM

ಅಂಗವಿಕಲರು ನಮ್ಮಂತೆಯೇ ಒಬ್ಬರು. ಆದರೆ ಇಂದಿಗೂ ಕೆಲವು ಕಡೆಗಳಲ್ಲಿ ಅವರನ್ನು ರೋಗಿಗಳಂತೆ ಕಾಣಲಾಗುತ್ತದೆ. ಇಲ್ಲವಾದಲ್ಲಿ ಅವರಿಗೆ ಅತೀವ ಅನುಕಂಪ ತೋರಿಸಲಾಗುತ್ತದೆ. ಇದು ತಪ್ಪು. ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅವರು ಸಮಾಜದ ಮುಖ್ಯವಾಹಿನಿಗಳಲ್ಲಿ ಗುರುತಿಸಿಕೊಳ್ಳಬಲ್ಲರು. ಅಲ್ಲದೆ ಅವರಿಗೂ ಭಾವನೆಗಳಿವೆ, ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ ಎಂಬುದನ್ನು ನಾವು ಮರೆಯಬಾರದು. ಅದಕ್ಕಾಗಿಯೇ ವಿಶ್ವಸಂಸ್ಥೆ ಸಮಾಜದಲ್ಲಿ ಅವರ ಮಹತ್ವವನ್ನು ತಿಳಿಸುವ ಉದ್ದೇಶದಿಂದಲೇ ವರ್ಷದ ಒಂದು ದಿನವನ್ನು ಅವರಿಗಾಗಿ ಮೀಸಲಿರಿಸಿದೆ. ಹಾಗಾಗಿ ಡಿ. 3 ರಂದು ಜಗತ್ತಿನೆಲ್ಲೆಡೆ ವಿಶ್ವ ಅಂಗವಿಕಲ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನದ ಉದ್ದೇಶವೇನು?

ಸಾರ್ವಜನಿಕರಲ್ಲಿ ಅಂಗವಿಕಲರ ಬಗ್ಗೆ ಮತ್ತು ಅವರಿಗಾಗುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ, ತಿಳಿವಳಿಕೆ ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅವರ ಕೊಡುಗೆಗಳು, ಸಾಧನೆಗಳು, ಅಂಗವಿಕಲರ ಘನತೆ, ಹಕ್ಕು ಮತ್ತು ಯೋಗಕ್ಷೇಮಕ್ಕೆ ಬೆಂಬಲ ನೀಡುವ ಉದ್ದೇಶವೂ ಈ ದಿನದಲ್ಲಿದೆ. ಅಂಗವಿಕಲರು ನಮ್ಮಂತೆಯೇ ಸಾಮಾನ್ಯರು ಅವರಿಗೆ ಅನುಕಂಪ ತೋರುವ ಬದಲು ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕಾಗಿದೆ. ಇದನ್ನು ಪ್ರತಿಯೊಬ್ಬರೂ ತಿಳಿದು ನಡೆದರೆ, ಸಮಾಜದಲ್ಲಿ ಅಂಗವಿಕಲರು ಕೂಡ ನಮ್ಮಂತೆಯೇ ಬದುಕುತ್ತಾರೆ.

ಈ ದಿನದ ಇತಿಹಾಸ?

ವಿಶ್ವಸಂಸ್ಥೆ 1992 ರಲ್ಲಿ ಈ ದಿನವನ್ನು ಆರಂಭಿಸಿತು. ವಿಕಲಚೇತನರಿಗೆ ಅವಕಾಶಗಳನ್ನು ಒದಗಿಸಲು ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ಈ ದಿನವನ್ನು ಆರಂಭ ಮಾಡಲಾಗಿದೆ. ಅಲ್ಲದೇ ಇದು ಅಂಗವಿಕಲರಿಗೆ ಸರಿಯಾದ ಪುನರ್ವಸತಿ ಕಲ್ಪಿಸುವ ಗುರಿಯನ್ನು ಕೂಡ ಹೊಂದಿದೆ ಮತ್ತು ಭವಿಷ್ಯದಲ್ಲಿ ಅಂಗವೈಕಲ್ಯವನ್ನು ತಡೆಗಟ್ಟಲು ಪ್ರಯತ್ನಿಸುತ್ತಿದೆ.

ಅಂಗವೈಕಲ್ಯಕ್ಕೆ ಕಾರಣವೇನು?

ವೇಗವಾಗಿ ಹಬ್ಬುವ (ಇನ್‌ಫೆಕ್ಷಿಯಸ್‌) ರೋಗಗಳು, ನರ ಸಂಬಂಧದ ಪರಿಣಾಮಗಳಿರುವ ಎನ್‌ಸೆಫೆಲೈಟಿಸ್‌, ಮೆನಿಂಜೈಟಿಸ್‌, ಮೀಸಲ್ಸ್‌, ಮಂಪ್ಸ್‌, ಪೋಲಿಯೋ ಇತ್ಯಾದಿ ರೋಗಗಳಿಂದ ಅಂಗವೈಕಲ್ಯ ಉಂಟಾಗಲು ಸಾಧ್ಯವಿದೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗಲು ಇದೇ ಕಾರಣ

ಅಂಕಿ ಅಂಶಗಳು ಹೇಳುವುದೇನು?

2011ರ ಜನಗಣತಿಯ ಪ್ರಕಾರ ಒಟ್ಟು 121 ಕೋಟಿ ಜನರಲ್ಲಿ 2.68 ಕೋಟಿ ಜನರು ಅಂಗವಿಕಲರಾಗಿದ್ದಾರೆ (ಶೇ. 2.21). ಇವರಲ್ಲಿ 1.5 ಕೋಟಿ ಪುರುಷರು ಮತ್ತು 1.18 ಕೋಟಿ ಸ್ತ್ರೀಯರು. ಅಂಗವಿಕಲರಲ್ಲಿ ಶೇ. 69 ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸವಾಗಿದ್ದಾರೆ. ಹಾಗಾಗಿ ಈ ಬಗ್ಗೆ ಹೆಚ್ಚು ಜಾಗೃತಿ ವಹಿಸುವುದು ಅವಶ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ
ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ