Heart Attack: ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ, ಕಾರಣವೇನು?

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೃದಯಾಘಾತವು ಗಂಭೀರ ಸಮಸ್ಯೆಯಾಗಿದ್ದು, ವಯಸ್ಕರಲ್ಲಿ ಮತ್ತು ಮಕ್ಕಳಲ್ಲಿ ಇದರ ಅಪಾಯವು ಹೆಚ್ಚುತ್ತಿದೆ.

Heart Attack: ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ, ಕಾರಣವೇನು?
Heart AttackImage Credit source: NDTV
Follow us
TV9 Web
| Updated By: ನಯನಾ ರಾಜೀವ್

Updated on:Oct 28, 2022 | 2:36 PM

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೃದಯಾಘಾತವು ಗಂಭೀರ ಸಮಸ್ಯೆಯಾಗಿದ್ದು, ವಯಸ್ಕರಲ್ಲಿ ಮತ್ತು ಮಕ್ಕಳಲ್ಲಿ ಇದರ ಅಪಾಯವು ಹೆಚ್ಚುತ್ತಿದೆ. ವಾಸ್ತವವಾಗಿ, ದೇಹದಲ್ಲಿ ರಕ್ತದ ಅಡಚಣೆ ಉಂಟಾದಾಗ, ಹೃದಯ ಸ್ನಾಯುಗಳು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಮತ್ತು ಜನರು ಹೃದಯಾಘಾತದಂತಹ ಗಂಭೀರ ಸಮಸ್ಯೆಗಳನ್ನು ಎದುರಿಸಲು ಇದು ಕಾರಣವಾಗಿದೆ.

ಸಮಸ್ಯೆಯು ಮಕ್ಕಳಲ್ಲಿ ಕಂಡುಬರುತ್ತಿದೆ, ಏಕೆಂದರೆ ಅವರು ಏನನ್ನೂ ತಿನ್ನದೆ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಾರೆ, ಇದರಿಂದಾಗಿ ಅವರ ದೇಹದಲ್ಲಿ ಚಯಾಪಚಯ ದರವು ಹದಗೆಡುತ್ತಿದೆ ಮತ್ತು ಹೈಪೊಗ್ಲಿಸಿಮಿಯಾದಿಂದ ಅವರಿಗೆ ಹೃದಯದ ತೊಂದರೆಗಳು ಹೆಚ್ಚಾಗುತ್ತಿವೆ.

ವ್ಯಾಯಾಮ ಇಲ್ಲದೇ ಇರುವುದು

ಕೊರೊನಾ ಸಮಯದಲ್ಲಿ ಪ್ರಪಂಚಾದ್ಯಂತ ಶಾಲೆಗಳನ್ನು ಮುಚ್ಚಲಾಗಿತ್ತು, ಮಕ್ಕಳು ಆಟವಾಡುವುದನ್ನೂ ನಿಲ್ಲಿಸಿದ್ದರು, ಮನೆಯಲ್ಲಿ ಟಿವಿ, ಮೊಬೈಲ್, ಲ್ಯಾಪ್​ಟಾಪ್ ಮುಂದೆ ಕೂತು ಏನಾದರೂ ತಿನ್ನುತ್ತಿದ್ದರು. ಒಂದೇ ಜಾಗದಲ್ಲಿ ದಿನಪೂರ್ತಿ ಕುಳಿತಿದ್ದರೆ ಹೃದ್ರೋಗದ ಅಪಾಯ ಹೆಚ್ಚು. ಈಗಿನ ಮಕ್ಕಳು ಮೊಬೈಲ್ ಫೋನಿನ ಚಟಕ್ಕೆ ಬಿದ್ದಿದ್ದಾರೆ ಅಂದರೆ ಅದಕ್ಕೆ ಅಡಿಕ್ಟ್ ಆಗಿದ್ದು ಅವರ ಮನಸ್ಸನ್ನು ದುರ್ಬಲಗೊಳಿಸುತ್ತಿದೆ.

ಮಕ್ಕಳ ದಿನಚರಿ

ಇದರಿಂದಾಗಿ ಮಕ್ಕಳಲ್ಲಿ ಒತ್ತಡದ ಸಮಸ್ಯೆ ಉಂಟಾಗಬಹುದು ಮತ್ತು ಒತ್ತಡದಿಂದಾಗಿ ಅವರಿಗೆ ಹೃದಯಾಘಾತದ ಸಮಸ್ಯೆಯೂ ಬರಬಹುದು. ರಾತ್ರಿ ತಡವಾಗಿ ಮಲಗುವುದು, ಮೊಬೈಲ್ ಬಳಕೆ, ಅದರಲ್ಲಿ ಗೇಮ್ ಆಡುವುದು ಮತ್ತು ಬೆಳಗ್ಗೆ ತಡವಾಗಿ ಏಳುವುದು ಇವೆಲ್ಲವೂ ಕಾಯಿಲೆಗಳನ್ನು ಹುಟ್ಟು ಹಾಕುತ್ತವೆ.

ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆಮಕ್ಕಳ ಈ ದಿನಚರಿ ಅವರಲ್ಲಿ ಹೃದಯಾಘಾತಕ್ಕೂ ಕಾರಣವಾಗಬಹುದು. ಹಾಗಾಗಿ ಪೋಷಕರು ಮಕ್ಕಳ ಈ ಎಲ್ಲಾ ಅಭ್ಯಾಸಗಳತ್ತ ಗಮನ ಹರಿಸಿ ಅವರೊಂದಿಗೆ ಸಮಯ ಕಳೆಯಬೇಕು.

ಮಕ್ಕಳು ತಿನ್ನುವ ಆಹಾರ

ಮಕ್ಕಳ ದೈಹಿಕ ಕ್ಷಮತೆಯ ಬಗ್ಗೆಯೂ ಪೋಷಕರು ಗಮನ ಹರಿಸಬೇಕು, ಇದರಿಂದ ಒತ್ತಡ ದೂರವಾಗಿ ಹೃದಯಾಘಾತದಂತಹ ಕಾಯಿಲೆಗಳಿಗೆ ಬಲಿಯಾಗುವುದಿಲ್ಲ. ಹಾಗೆಯೇ ಮಕ್ಕಳಿಗೆ ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರವನ್ನು ನೀಡಬೇಕು, ಹೊರಗಡೆ ಹೋದಾಗ ಅಪರೂಪಕ್ಕೊಮ್ಮೆ ಹೊರ ತಿನಿಸು ತಿನ್ನಬಹುದು ಆದರೆ ನಿತ್ಯವೂ ಅದನ್ನು ತಿನ್ನುವುದು ದೇಹದಲ್ಲಿ ಬೊಜ್ಜನ್ನು ಉಂಟು ಮಾಡುತ್ತದೆ.

ಓದುತ್ತಿರುವಾಗ ಕುಸಿದುಬಿದ್ದು 13 ವರ್ಷದ ಬಾಲಕಿ ಸಾವು ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ಕೇವಲ 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 8ನೇ ತರಗತಿಯಲ್ಲಿ ಓದುತ್ತಿದ್ದ ಅನುಶ್ರೀ, ಮನೆಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಳು, ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಇಹಲೋಕ ತ್ಯಜಿಸಿದ್ದಳು.

ಹೃದಯಾಘಾತ ಅಥವಾ ಹೃದಯ ಸಂಬಂಧಿ ಕಾಯಿಲೆಯು ಕೇವಲ ದೊಡ್ಡವರನ್ನು ಮಾತ್ರವಲ್ಲದೆ ಮಕ್ಕಳನ್ನೂ ಕಾಡುತ್ತದೆ ಎಂಬುದಕ್ಕೆ ಇದು ಉದಾಹರಣೆಯಾದಂತಾಗಿದೆ. ಹೀಗಾಗಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕನಿಷ್ಠ 6 ತಿಂಗಳಿಗೊಮ್ಮೆಯಾದರೂ ಪರೀಕ್ಷೆ ಮಾಡಿಸುತ್ತಿರುವುದು ಉತ್ತಮ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Fri, 28 October 22

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ