AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ಬಿಪಿ ಮತ್ತು ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತಾ? ಈ ಬಗ್ಗೆ ವೈದ್ಯರು ಏನ್ ಹೇಳ್ತಾರೆ ನೋಡಿ

ಇತ್ತೀಚಿನ ದಿನಗಳಲ್ಲಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಈ ಎರಡೂ ಕಾಯಿಲೆಗಳು ದೀರ್ಘಕಾಲ ನಿಯಂತ್ರಣದಲ್ಲಿರದಿದ್ದರೆ ದೇಹದ ಪ್ರಮುಖ ಅಂಗಗಳಿಗೆ ಹಾನಿಯಾಗಬಹುದು. ಅದರಲ್ಲಿಯೂ ಕಿಡ್ನಿ ಆರೋಗ್ಯದ ಮೇಲೆ ಇದರ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ಹಾಗಾಗಿ ಹೈ ಬಿಪಿ ಮತ್ತು ಮಧುಮೇಹ ಕಿಡ್ನಿಗೆ ಹೇಗೆ ಹಾನಿ ಮಾಡುತ್ತದೆ, ಕಿಡ್ನಿ ಆರೋಗ್ಯ ಕಾಪಾಡಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಬಿಪಿ ಮತ್ತು ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತಾ? ಈ ಬಗ್ಗೆ ವೈದ್ಯರು ಏನ್ ಹೇಳ್ತಾರೆ ನೋಡಿ
High Blood Pressure And DiabetesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 10, 2026 | 10:39 PM

Share

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (High Blood Pressure) ಮತ್ತು ಮಧುಮೇಹದಂತಹ (Diabetes) ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಎರಡೂ ಕಾಯಿಲೆಗಳು ದೀರ್ಘಕಾಲ ನಿಯಂತ್ರಣದಲ್ಲಿರದಿದ್ದರೆ ದೇಹದ ಪ್ರಮುಖ ಅಂಗಗಳಿಗೆ ಹಾನಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಅದರಲ್ಲಿಯೂ ಕಿಡ್ನಿ ಆರೋಗ್ಯದ ಮೇಲೆ ಇದರ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ವೈದ್ಯರ ಪ್ರಕಾರ, ಕಿಡ್ನಿ ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುವುದು ಮತ್ತು ದೇಹದ ದ್ರವ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದರೆ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರಂತರವಾಗಿ ಹೆಚ್ಚಿದರೆ ಕಿಡ್ನಿಯ ಸೂಕ್ಷ್ಮ ರಕ್ತನಾಳಗಳು ಹಾನಿಗೊಳಗಾಗಬಹುದು. ಇದರಿಂದ ಕಿಡ್ನಿಯ ಶೋಧನಾ ಸಾಮರ್ಥ್ಯ ನಿಧಾನವಾಗಿ ಕುಸಿಯಲು ಆರಂಭವಾಗುತ್ತದೆ. ಹಾಗಾಗಿ ಹೈ ಬಿಪಿ ಮತ್ತು ಮಧುಮೇಹ ಕಿಡ್ನಿಗೆ ಹೇಗೆ ಹಾನಿ ಮಾಡುತ್ತದೆ, ಕಿಡ್ನಿ ಆರೋಗ್ಯ ಕಾಪಾಡಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಬಿಪಿ ಮತ್ತು ಮಧುಮೇಹ ಕಿಡ್ನಿಗೆ ಹೇಗೆ ಹಾನಿ ಮಾಡುತ್ತದೆ?

ತಜ್ಞರ ಪ್ರಕಾರ, ದೀರ್ಘಕಾಲ ಹೈ ಬಿಪಿ ಮತ್ತು ಡಯಾಬಿಟೀಸ್ ನಿಯಂತ್ರಣದಲ್ಲಿರದಿದ್ದರೆ ಕಿಡ್ನಿಯ ಕಾರ್ಯಕ್ಷಮತೆ ಕುಸಿಯಬಹುದು. ಮಧುಮೇಹವು ಕ್ರಾನಿಕ್ ಕಿಡ್ನಿ ರೋಗಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ರಕ್ತದೊತ್ತಡ ಹೆಚ್ಚಾದಾಗ ಕಿಡ್ನಿಯ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ. ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಈ ಸಮಸ್ಯೆ ಗಂಭೀರವಾಗಿ ಡಯಾಲಿಸಿಸ್ ಅಗತ್ಯವಾಗುವ ಮಟ್ಟಕ್ಕೂ ಹೋಗಬಹುದು.

ಕಿಡ್ನಿ ಹಾನಿಯಾದಾಗ ಯಾವ ಲಕ್ಷಣಗಳು ಕಾಣಿಸುತ್ತವೆ?

ಕಿಡ್ನಿ ಸಮಸ್ಯೆ ಆರಂಭವಾದಾಗ ಕಾಲು ಮತ್ತು ಮುಖದಲ್ಲಿ ಊತ, ದೌರ್ಬಲ್ಯ, ಬೇಗ ದಣಿವು, ಹಸಿವು ಕಡಿಮೆಯಾಗುವುದು ಮೊದಲಾದ ಲಕ್ಷಣಗಳು ಕಾಣಿಸಬಹುದು. ಮೂತ್ರದ ಪ್ರಮಾಣ ಅಥವಾ ಬಣ್ಣದಲ್ಲಿ ಬದಲಾವಣೆ ಆಗುವುದು ಕೂಡ ಪ್ರಮುಖ ಸೂಚನೆ ಆಗಿರಬಹುದು. ಕೆಲವರಿಗೆ ರಾತ್ರಿ ಪದೇಪದೇ ಮೂತ್ರ ವಿಸರ್ಜನೆ, ಉಸಿರಾಟದ ತೊಂದರೆ ಅಥವಾ ದೇಹ ಭಾರವಾಗಿರುವ ಅನುಭವ ಕಾಣಿಸಬಹುದು. ಇಂತಹ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಕಿಡ್ನಿ ಆರೋಗ್ಯ ಕಾಪಾಡಲು ಏನು ಮಾಡಬೇಕು?

ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿ ಇಡುವುದು ಅತ್ಯಂತ ಮುಖ್ಯ. ಕಡಿಮೆ ಪ್ರಮಾಣದಲ್ಲಿ ಉಪ್ಪು ಮತ್ತು ಕಡಿಮೆ ಸಕ್ಕರೆ ಇರುವ ಸಮತೋಲನ ಆಹಾರ ಸೇವಿಸಬೇಕು. ನಿಯಮಿತ ವ್ಯಾಯಾಮ, ಸಾಕಷ್ಟು ನೀರು ಕುಡಿಯುವುದು ಹಾಗೂ ಸಮಯಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಿಡ್ನಿ ರಕ್ಷಣೆಗೆ ಸಹಕಾರಿ. ವೈದ್ಯರ ಸಲಹೆಯಂತೆ ಔಷಧಿಗಳನ್ನು ನಿಯಮಿತವಾಗಿ ಸೇವಿಸುವುದು ಮತ್ತು ಆರೋಗ್ಯಕರ ಜೀವನಶೈಲಿ ಪಾಲಿಸುವುದು ಕಿಡ್ನಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು