Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Pressure: ರಕ್ತದೊತ್ತಡವನ್ನು ಕಡಿಮೆ ಮಾಡುವ ಆಹಾರಗಳ ಬಗ್ಗೆ ನಿಮಗೆಷ್ಟು ಗೊತ್ತು?

Blood Pressure:ರಕ್ತದೊತ್ತಡ( Blood Pressure)ವನ್ನು ನೀವು ತೆಗೆದುಕೊಳ್ಳುವ ಆಹಾರದ ಮೂಲಕವೇ ಕಡಿಮೆ ಮಾಡಬಹುದಾಗಿದೆ. ದೇಹದ ತೂಕ, ಮಾನಸಿಕ ಒತ್ತಡ, ನಮ್ಮ ಚಟುವಟಿಕೆಗಳೂ ರಕ್ತದೊತ್ತಡ ಏರಿಳಿತದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ

Blood Pressure: ರಕ್ತದೊತ್ತಡವನ್ನು ಕಡಿಮೆ ಮಾಡುವ ಆಹಾರಗಳ ಬಗ್ಗೆ ನಿಮಗೆಷ್ಟು ಗೊತ್ತು?
ರಕ್ತದೊತ್ತಡ
Follow us
TV9 Web
| Updated By: ನಯನಾ ರಾಜೀವ್

Updated on: May 16, 2022 | 6:22 PM

ರಕ್ತದೊತ್ತಡ( Blood Pressure)ವನ್ನು ನೀವು ತೆಗೆದುಕೊಳ್ಳುವ ಆಹಾರದ ಮೂಲಕವೇ ಕಡಿಮೆ ಮಾಡಬಹುದಾಗಿದೆ. ದೇಹದ ತೂಕ, ಮಾನಸಿಕ ಒತ್ತಡ, ನಮ್ಮ ಚಟುವಟಿಕೆಗಳೂ ರಕ್ತದೊತ್ತಡ ಏರಿಳಿತದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯಕರವಾದ ಡಯಟ್ ಮೂಲಕ ಬಿಪಿ ಕಂಟ್ರೋಲ್‌ನಲ್ಲಿಟ್ಟುಕೊಳ್ಳಬಹುದು. ದ್ವಿದಳ ಧಾನ್ಯ ಹಾಗೂ ಹಸಿರು ತರಕಾರಿಗಳನ್ನು ಹೆಚ್ಚಾಗಿ ಬಳಸಿ.

ನಮ್ಮ ನಿಸರ್ಗವೇ ನಮ್ಮ ಬಿಪಿ ಕಂಟ್ರೋಲ್ ಮಾಡಲು ಬೇಕಾದ ಅಗತ್ಯ ಆಹಾರ ವಸ್ತುಗಳನ್ನು ಹೊಂದಿದೆ. ನಾವು ಉಪಯೋಗಿಸಿಕೊಳ್ಳಬೇಕಷ್ಟೆ. ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಎನ್ನುವುದು ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಎಲ್ಲಾ ದಿನಗಳನ್ನು ಆಚರಿಸುವಂತೆ ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ.

ಅಧಿಕ ರಕ್ತದೊತ್ತಡ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳವು ಮುಖ್ಯವಾಗಿ ಅತಿಯಾದ ಕೆಲಸದ ಒತ್ತಡ, ದೈಹಿಕ ಚಟುವಟಿಕೆ ಇಲ್ಲದಿರುವುದು, ಅಸಮತೋಲಿತ ಜೀವನಶೈಲಿಯಿಂದಾಗಿ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

ಆರೋಗ್ಯಕರ ಆಹಾರವನ್ನು ಸೇವಿಸಿ ಆರೋಗ್ಯಕರ ಆಹಾರವನ್ನು ಸೇವಿಸುವುದರ ಮೂಲಕ ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಈ ಆಹಾರ ಯೋಜನೆಯಡಿ ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳನ್ನು ಸೇವಿಸಬೇಕು. ಅಲ್ಲದೆ, ಸ್ಯಾಚುರೇಟೆಡ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಭರಿತ ಆಹಾರವನ್ನು ತಪ್ಪಿಸಿ.

​ಪೊಟ್ಯಾಶಿಯಂ ಭರಿತ ಆಹಾರಗಳು ಒಣಗಿದ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ. ಒಣದ್ರಾಕ್ಷಿ, ಆಫ್ರಿಕಾಟ್, ಬೀನ್ಸ್, ಬೇಳೆ, ಆಲೂಗೆಡ್ಡೆ ಮತ್ತು ಅವಕಾಡೊ ಗಳಂತಹ ತಾಜಾ ಹಣ್ಣುಗಳು ಮತ್ತು ತರಕಾರಿಗಳು ಪ್ರಮಾಣವನ್ನು ಹೆಚ್ಚಿಸುವ ಸುಲಭ ಮೂಲವಾಗಿವೆ.ಆದ್ದರಿಂದ ಪೊಟ್ಯಾಶಿಯಂ ಭರಿತ ಆಹಾರಗಳನ್ನು ನೀವು ಸೇವಿಸುವುದರಿಂದ ಇದು ಸೋಡಿಯಂನ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಸೋಡಿಯಂ ಸೇವನೆಯನ್ನು ಕಡಿಮೆ ಮಾಡಿ ತಜ್ಞರ ಪ್ರಕಾರ, ವಯಸ್ಕರಿಗೆ ದಿನಕ್ಕೆ 1500 ಮೀ ಗ್ರಾಂ ಅಥವಾ ಅದಕ್ಕಿಂತ ಕಡಿಮೆ ಸೋಡಿಯಂ ಸೇವನೆಯನ್ನು ಸೂಚಿಸಲಾಗುತ್ತದೆ. ಆದ್ದರಿಂದ ಸೋಡಿಯಂ ಸೇವನೆಯನ್ನು ಆದಷ್ಟು ಕಡಿಮೆ ಸೇವಿಸಲು ಪ್ರಯತ್ನಿಸಿ. ಇಡೀ ನಮ್ಮ ದೇಹವನ್ನು ಅನಾರೋಗ್ಯಕರವಾಗಿ ಮಾಡುವುದು ಅತಿಯಾದ ಉಪ್ಪಿನ ಸೇವನೆ. ಆದ್ದರಿಂದ ಆದಷ್ಟು ನಿಮ್ಮ ಆಹಾರಗಳಲ್ಲಿ ಕಡಿಮೆ ಪ್ರಮಾಣದ ಸೋಡಿಯಂ ಹೊಂದಲು ಪ್ರಯತ್ನಿಸಿ.

​ಸಂಸ್ಕರಿಸಿದ ಆಹಾರವನ್ನು ತಪ್ಪಿಸಿ ಸಂಸ್ಕರಿಸಿದ ಆಹಾರಗಳು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡುತ್ತದೆ. ಈ ರೀತಿ ಸಂಸ್ಕರಿಸಿದ ಆಹಾರಗಳಲ್ಲಿ ಸೋಡಿಯಂನ ಪ್ರಮಾಣ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಆದ್ದರಿಂದ ಇತ್ತೀಚಿಗೆ, ಡಬ್ಲ್ಯೂ ಎಚ್ ಓ ಪ್ಯಾಕ್ ಮಾಡಿದ ಅಥವಾ ಸಂಸ್ಕರಿಸಿದ ಆಹಾರದ ಸೋಡಿಯಂ ಮಟ್ಟವನ್ನು ಕಡಿಮೆ ಮಾಡಿದೆ.

ಏಕೆಂದರೆ ಪ್ಯಾಕೇಜ್ ಮಾಡಲಾದ ಆಹಾರಗಳ ಮೂಲಕ ಅತಿಯಾದ ಸೋಡಿಯಂ ಸೇವನೆಯಿಂದ ಅಧಿಕ ರಕ್ತದೊತ್ತಡದಿಂದ ಅನೇಕ ಸಾವುಗಳು ಸಂಭವಿಸುತ್ತಿವೆ ಎಂದು ಕಂಡುಬಂದಿದೆ. ಆದ್ದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪ್ಯಾಕೇಜ್ ಮಾಡಿದ ಆಹಾರವನ್ನು ಸೇವಿಸದೇ ಇರುವುದು ಬಹಳ ಮುಖ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ