AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ವಯಸ್ಸಿನಲ್ಲಿ ಬಿಪಿ ಬರುವುದಕ್ಕೆ ನಿಮ್ಮ ಈ ಅಭ್ಯಾಸಗಳೇ ಕಾರಣ! ಇಂದೇ ಬದಲಾಯಿಸಿಕೊಳ್ಳಿ

ಮೊದಲೆಲ್ಲಾ ವಯಸ್ಸಾದ ಮೇಲೆ ಗಂಭೀರ ಕಾಯಿಲೆಗಳು ಕಂಡುಬರುತ್ತಿದ್ದವು. ಆದರೆ ಈಗ ಯುವನತೆಯಲ್ಲಿಯೇ ಹೆಚ್ಚಾಗಿ ಕಂಡುಬರುತ್ತಿದೆ. ಅಂತಹ ಆರೋಗ್ಯ ಸಮಸ್ಯೆಗಳಲ್ಲಿ ಅಧಿಕ ರಕ್ತದೊತ್ತಡವು ಒಂದು. ಇವು ಕಂಡುಬರುವ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳನ್ನು ಹಗುರವಾಗಿ ಪರಿಗಣಿಸಬಾರದು. ಏಕೆಂದರೆ ಈ ಸಮಸ್ಯೆ ಭವಿಷ್ಯದಲ್ಲಿ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಅದರ ಜೊತೆಗೆ ಅಧಿಕ ರಕ್ತದೊತ್ತಡದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಾರಣವೇನು, ಇದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಒಳ್ಳೆಯದು.

ಸಣ್ಣ ವಯಸ್ಸಿನಲ್ಲಿ ಬಿಪಿ ಬರುವುದಕ್ಕೆ ನಿಮ್ಮ ಈ ಅಭ್ಯಾಸಗಳೇ ಕಾರಣ! ಇಂದೇ ಬದಲಾಯಿಸಿಕೊಳ್ಳಿ
Rising Hypertension Cases Among Young AdultsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Feb 19, 2026 | 5:59 PM

Share

ಇತ್ತೀಚಿನ ದಿನಗಳಲ್ಲಿ, ಯುವಜನರಲ್ಲಿ ಅಧಿಕ ರಕ್ತದೊತ್ತಡದ (High Blood Pressure) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ರಕ್ತನಾಳಗಳಲ್ಲಿನ ರಕ್ತದೊತ್ತಡ ಸಾಮಾನ್ಯಕ್ಕಿಂತ ಹೆಚ್ಚಾಗುವ ಸ್ಥಿತಿ ಇದಾಗಿದ್ದು. ಇದು ನಿರಂತರವಾಗಿ 140/90 ಅಥವಾ ಅದಕ್ಕಿಂತ ಹೆಚ್ಚಾಗಿದ್ದರೆ, ಅದನ್ನು ಅಧಿಕ ರಕ್ತದೊತ್ತಡ ಎಂದು ಕರೆಯಲಾಗುತ್ತದೆ. ಆರಂಭದಲ್ಲಿ, ಇದರ ಸ್ಪಷ್ಟ ಲಕ್ಷಣಗಳು ಕಂಡುಬರುವುದಿಲ್ಲ. ಕೆಲವರಲ್ಲಿ ತಲೆನೋವು, ತಲೆತಿರುಗುವಿಕೆ, ಆಯಾಸ, ಉಸಿರಾಟದ ತೊಂದರೆ, ಎದೆಯಲ್ಲಿ ಭಾರ ಅಥವಾ ತ್ವರಿತ ಹೃದಯ ಬಡಿತದಂತಹ ಲಕ್ಷಣ ಕಂಡುಬರಬಹುದು. ಮೂಗಿನಿಂದ ರಕ್ತಸ್ರಾವ ಅಥವಾ ದೃಷ್ಟಿ ಮಂದವಾಗುವುದು ಸಹ ಈ ಆರೋಗ್ಯ ಸಮಸ್ಯೆಯ ಮನ್ಸೂಚನೆ ಆಗಿರಬಹುದು. ಇದನ್ನು ಸಮಯಕ್ಕೆ ಸರಿಯಾಗಿ ಗುರುತಿಸದಿದ್ದರೆ, ಅದು ಹೃದಯ, ಮೂತ್ರಪಿಂಡ ಮತ್ತು ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಯುವಜನತೆ ಈ ಬಗ್ಗೆ ಜಾಗೃತರಾಗಿರುವುದು ಬಹಳ ಮುಖ್ಯವಾಗುತ್ತದೆ. ಅದರ ಜೊತೆಗೆ ಅಧಿಕ ರಕ್ತದೊತ್ತಡದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಾರಣವೇನು, ಇದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ.

ಅಧಿಕ ರಕ್ತದೊತ್ತಡದ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಾರಣ:

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಮತ್ತು ಮುಖ್ಯಸ್ಥರಾದ ಡಾ. ಎಲ್.ಎಚ್. ​​ಘೋಟೇಕರ್ ಹೇಳುವ ಪ್ರಕಾರ, ಯುವಜನತೆಯಲ್ಲಿ ಅಧಿಕ ರಕ್ತದೊತ್ತಡ ಹೆಚ್ಚಳಕ್ಕೆ ಹಲವಾರು ಕಾರಣಗಳಿದ್ದು, ಆಧುನಿಕ ಜೀವನಶೈಲಿ ಕೂಡ ಕಾರಣವೆಂದು ಪರಿಗಣಿಸಲಾಗುತ್ತದೆ. ವೇಗದ ಜೀವನದಲ್ಲಿ, ಮಾನಸಿಕ ಒತ್ತಡ ಗಮನಾರ್ಹವಾಗಿ ಹೆಚ್ಚಾಗಿದೆ. ತಡರಾತ್ರಿ ಎಚ್ಚರವಾಗಿರುವುದು, ಮೊಬೈಲ್ ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳ ಅತಿಯಾದ ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಿಯಮಿತ ದಿನಚರಿಯು ದೇಹದ ಸಮತೋಲನವನ್ನು ಅಡ್ಡಿಪಡಿಸುತ್ತದೆ.

ಫಾಸ್ಟ್ ಫುಡ್ ಮತ್ತು ಹೆಚ್ಚಿನ ಉಪ್ಪಿರುವ ಆಹಾರಗಳ ಸೇವನೆ ಕೂಡ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಧೂಮಪಾನ ಮತ್ತು ಮದ್ಯಪಾನದಂತಹ ಅಭ್ಯಾಸಗಳು ಈ ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಅಷ್ಟೇಅಲ್ಲ, ಬೊಜ್ಜು ಮತ್ತು ತೂಕ ಹೆಚ್ಚಳ ಕೂಡ ಒಂದು ಪ್ರಮುಖ ಸಮಸ್ಯೆಯಾಗಿದೆ, ಅಲ್ಲದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡದಿರುವುದು ಸಹ ಒಂದು ಕಾರಣವಾಗಿದೆ.

ಇದನ್ನೂ ಓದಿ: ಹೈಬಿಪಿ ಇರುವವರಿಗೆ ತಲೆಯ ಹಿಂಭಾಗದಲ್ಲಿ ನೋವು ಕಂಡುಬರುತ್ತದೆಯೇ?

ಅಧಿಕ ರಕ್ತದೊತ್ತಡವನ್ನು ತಡೆಯಲು ಸಲಹೆ:

ಸಾಮಾನ್ಯವಾಗಿ ಅಧಿಕ ರಕ್ತದೊತ್ತಡವನ್ನು ತಡೆಗಟ್ಟಲು, ಆರೋಗ್ಯಕರ ದಿನಚರಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡುವುದು, ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಮಿತಗೊಳಿಸುವುದು, ತಾಜಾ ಹಣ್ಣು, ತರಕಾರಿಗಳ ಸೇವನೆ ಮಾಡುವುದು, ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು, ಸರಿಯಾಗಿ ನಿದ್ರೆ ಮಾಡುವುದು, ಒತ್ತಡವನ್ನು ಕಡಿಮೆ ಮಾಡಲು ಯೋಗ ಮತ್ತು ಧ್ಯಾನವನ್ನು ಅಭ್ಯಾಸ ಮಾಡುವುದು ಇವೆಲ್ಲಾ ಅಧಿಕ ರಕ್ತದೊತ್ತಡವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

ಆಗಾಗ ತಲೆನೋವು, ತಲೆತಿರುಗುವಿಕೆ, ಉಸಿರಾಟದ ತೊಂದರೆ, ಎದೆ ನೋವು ಅಥವಾ ದೃಷ್ಟಿ ಮಂದವಾಗುವಂತಹ ಲಕ್ಷಣಗಳನ್ನು ಕಂಡುಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಕುಟುಂಬದಲ್ಲಿ ಅಧಿಕ ರಕ್ತದೊತ್ತಡ ಅಥವಾ ಹೃದ್ರೋಗದ ಇತಿಹಾಸವಿದ್ದರೆ, ನಿಯಮಿತ ತಪಾಸಣೆ ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ