ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಅಧಿಕ ರಕ್ತದೊತ್ತಡವು ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಈ ರೀತಿಯ ಪರಿಸ್ಥಿತಿಯಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಅನೇಕರು ನಿಂಬೆ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನಿಂಬೆಹಣ್ಣುಗಳು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ, ಇದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಇದು ನಿಜವಾಗಿಯೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದೇ... ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ... ಇಲ್ಲಿದೆ ತಜ್ಞರ ಅಭಿಪ್ರಾಯ
Can Lemon Water Control High Blood Pressure

Updated on: Dec 24, 2025 | 7:35 PM

ಅಧಿಕ ರಕ್ತದೊತ್ತಡ (High Blood Pressure) ಸಾಮಾನ್ಯ ಸಮಸ್ಯೆ ಅಲ್ಲವೇ ಅಲ್ಲ. ದೇಹದಲ್ಲಿ ಸದ್ದಿಲ್ಲದೆ ಹೆಚ್ಚಾಗಿ ಬಳಿಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲ, ಕ್ರಮೇಣ ಹೃದಯ, ಮೂತ್ರಪಿಂಡ ಮತ್ತು ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದಲ್ಲದೆ, ಅಧಿಕ ರಕ್ತದೊತ್ತಡವು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವರು ನಿಂಬೆ ನೀರು (Lemon Water) ಕುಡಿಯುತ್ತಾರೆ. ಅದರಲ್ಲಿಯೂ ನಿಂಬೆಹಣ್ಣು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ, ಇದು ಆರೋಗ್ಯಕ್ಕೂ ಒಳ್ಳೆಯದು. ಆದರೆ ಇದು ನಿಜವಾಗಿಯೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದೇ… ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಂಬೆ ನೀರು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆಯೇ?

ಎನ್ ಸಿ ಬಿ ಐ ಅಧ್ಯಯನಗಳ ಪ್ರಕಾರ, ನಿಂಬೆ ನೀರು ಅದರ ಸಿಟ್ರಿಕ್ ಆಮ್ಲ ಮತ್ತು ವಿಟಮಿನ್ ಸಿ ಅಂಶದಿಂದಾಗಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇವು ರಕ್ತನಾಳಗಳನ್ನು ಸಡಿಲಗೊಳಿಸುತ್ತವೆ ಮತ್ತು ದೇಹದಲ್ಲಿ ಜಲಸಂಚಯನವನ್ನು ಹೆಚ್ಚಿಸುತ್ತವೆ. ಆದರೆ ಇದು ಚಿಕಿತ್ಸೆಯಲ್ಲ, ಕೇವಲ ಪೋಷಕ ಆಹಾರ ಎಂದು ಅಧ್ಯಯನಗಳಿಂದ ಸಾಬೀತಾಗಿದೆ. ಏಷ್ಯನ್ ಜರ್ನಲ್ ಆಫ್ ನರ್ಸಿಂಗ್ ಎಜುಕೇಶನ್ ಅಂಡ್ ರಿಸರ್ಚ್ – ನ್ಯಾರಿಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ನಿಂಬೆಹಣ್ಣಿನಲ್ಲಿರುವ ವಿಟಮಿನ್ ಸಿ ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಲೋ ಬಿಪಿ ಹೈ ಬಿಪಿಯಷ್ಟೇ ಅಪಾಯಕಾರಿ! ಇದನ್ನು ನಿಯಂತ್ರಿಸಲು ಈ ಸುಲಭ ಆಹಾರಗಳನ್ನು ಪ್ರಯತ್ನಿಸಿ ನೋಡಿ

ನಿಂಬೆ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು:

ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ: ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಸಿಟ್ರಸ್ ಫ್ಲೇವನಾಯ್ಡ್‌ಗಳನ್ನು ಹೊಂದಿರುತ್ತವೆ. ಇವು ಉತ್ಕರ್ಷಣ ನಿರೋಧಕ ಮತ್ತು ನಾಳೀಯ ಆರೋಗ್ಯಕ್ಕೆ ಸಂಬಂಧಿಸಿದ ಸಂಯುಕ್ತಗಳಾಗಿವೆ. ಅಷ್ಟೇ ಅಲ್ಲ, ರಕ್ತನಾಳಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಹಾಗಾಗಿ ರಕ್ತ ಪರಿಚಲನೆಗೆ ಅಗತ್ಯವಾಗಿರುತ್ತದೆ.

ಜಲಸಂಚಯನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ: ನಿಂಬೆ ನೀರು ದೇಹದಲ್ಲಿ ಜಲಸಂಚಯನವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡ ಇರುವವರಿಗೆ ಇದು ಬಹಳ ಮುಖ್ಯ. ಅಷ್ಟೇ ಅಲ್ಲ, ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಆದ್ದರಿಂದ, ನಿಮಗೆ ಅಧಿಕ ರಕ್ತದೊತ್ತಡವಿದ್ದರೂ ಸಹ, ನೀವು ಈ ಪಾನೀಯವನ್ನು ನಿಯಮಿತವಾಗಿ ಕುಡಿಯಬಹುದು. ಆದರೆ, ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಬಹಳ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ