AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಧಿಕ ಕೊಲೆಸ್ಟ್ರಾಲ್ ಹೃದಯದ ಆರೋಗ್ಯಕ್ಕೆ ಅಪಾಯಕಾರಿ

ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವು ದೇಹದಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಅಧಿಕ ಕೊಲೆಸ್ಟ್ರಾಲ್ ಹೃದಯ ಸಂಬಂಧಿತ ಕಾಯಿಲೆಗಳು ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಆರೋಗ್ಯಕರ ಆಹಾರ, ವ್ಯಾಯಾಮ ಮತ್ತು ಔಷಧಿಗಳ ಮೂಲಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

Health Tips: ಅಧಿಕ ಕೊಲೆಸ್ಟ್ರಾಲ್ ಹೃದಯದ ಆರೋಗ್ಯಕ್ಕೆ ಅಪಾಯಕಾರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 08, 2025 | 2:18 PM

Share

ಕೊಲೆಸ್ಟ್ರಾಲ್ ಮಟ್ಟದಲ್ಲಿನ ಹೆಚ್ಚಳವು ದೇಹದಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಅಧಿಕ ಕೊಲೆಸ್ಟ್ರಾಲ್ ಹೃದಯ ಸಂಬಂಧಿತ ಕಾಯಿಲೆಗಳು ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ನಲ್ಲಿ ಎರಡು ವಿಧಗಳಿದ್ದು, ಎಲ್ಡಿಎಲ್ (ಕಡಿಮೆ-ಸಾಂದ್ರತೆಯ ಲಿಪೊಪ್ರೋಟೀನ್) ಕೆಟ್ಟ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ಇದು ಅಪಧಮನಿಗಳಲ್ಲಿ ಸಂಗ್ರಹವಾಗುತ್ತದೆ ಮತ್ತು ರಕ್ತ ಪರಿಚಲನೆಯನ್ನು ತಡೆಯುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಎಚ್ಡಿಎಲ್ (ಅಧಿಕ-ಸಾಂದ್ರತೆಯ ಲಿಪೊಪ್ರೋಟೀನ್) ಉತ್ತಮ ಕೊಲೆಸ್ಟ್ರಾಲ್ ಆಗಿದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಎಲ್ಡಿಎಲ್ ಕೆಲವರಿಗೆ ಆನುವಂಶಿಕ ಸಮಸ್ಯೆಯಾಗಬಹುದು. ಹಾಗಾಗಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು. ಪೋಷಕರಲ್ಲಿ ಯಾರಿಗಾದರೂ ಇದ್ದರೆ, ಮಕ್ಕಳಿಗೂ ಕೂಡ ಈ ಅಪಾಯ ಬರುವ ಶೇ. 50 ರಷ್ಟು ಅವಕಾಶವಿರುತ್ತದೆ. ಹಾಗಾದರೆ ಕೊಲೆಸ್ಟ್ರಾಲ್ ಕಡಿಮೆ ಮಾಡುವುದು ಹೇಗೆ? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ತಿಳಿದುಕೊಳ್ಳಿ.

ಕೆಟ್ಟ ಕೊಲೆಸ್ಟ್ರಾಲ್ ನ ರೋಗಲಕ್ಷಣಗಳೇನು?

ಕೈಗಳು, ಕಾಲು, ಮೊಣಕೈ ಮತ್ತು ಮೊಣಕಾಲುಗಳ ಸುತ್ತಲೂ ಕೊಬ್ಬಿನ ಉಬ್ಬುಗಳ ರಚನೆ

ಕಣ್ಣುರೆಪ್ಪೆಗಳ ಮೇಲೆ ಕೊಬ್ಬಿನ ಪದಾರ್ಥಗಳ ಶೇಖರಣೆ

ಕಣ್ಣುಗಳ ಸುತ್ತಲೂ ಬಿಳಿ ಅಥವಾ ಕಪ್ಪಾಗುವುದು

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ತರಕಾರಿ, ಹಣ್ಣು, ಬೀಜಗಳು, ಒಮೆಗಾ -3 ಕೊಬ್ಬಿನಾಮ್ಲಗಳನ್ನು ಒಳಗೊಂಡಿರುವ ಆಹಾರವನ್ನು ಸೇವನೆ ಮಾಡಿ.

ಬಾದಾಮಿ, ಕಡಲೆಕಾಯಿ, ಕೊಬ್ಬಿನ ಮೀನು (ಸಾಲ್ಮನ್, ಟ್ಯೂನಾ) ನಂತಹ ಆರೋಗ್ಯಕರ ಕೊಬ್ಬುಗಳಿರುವ ಆಹಾರ ಸೇವಿಸಿ.

ಟ್ರಾನ್ಸ್ ಕೊಬ್ಬುಗಳನ್ನು (ಬೇಕರಿ ವಸ್ತುಗಳು, ಸಂಸ್ಕರಿಸಿದ ಆಹಾರಗಳು) ತಪ್ಪಿಸಬೇಕು.

ಹೆಚ್ಚಿನ ಕೊಬ್ಬಿನ ಮಾಂಸ, ಪೂರ್ಣ ಕೆನೆ ಹಾಲಿನ ಸೇವನೆಯನ್ನು ಕಡಿಮೆ ಮಾಡಬೇಕು.

ಇದನ್ನೂ ಓದಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಬೆಂಗಳೂರಿನಲ್ಲಿ ಉಚಿತ HPV ಲಸಿಕೆ ಅಭಿಯಾನ ಆರಂಭ

ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ವಾರದಲ್ಲಿ ಕನಿಷ್ಠ 150 ನಿಮಿಷಗಳ ವಾಕಿಂಗ್, ಜಾಗಿಂಗ್ ಮತ್ತು ಸೈಕ್ಲಿಂಗ್ ಮಾಡಬೇಕು. ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ಬಿಡಬೇಕು. ಏಕೆಂದರೆ ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಜೊತೆಗೆ ಅಧಿಕ ತೂಕಕ್ಕೆ ಕಾರಣವಾಗುತ್ತವೆ ಇದರಿಂದ ಕೊಲೆಸ್ಟ್ರಾಲ್ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಮುನ್ನೆಚ್ಚರಿಕೆ ಅಗತ್ಯ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಿ. ಕೊಲೆಸ್ಟ್ರಾಲ್ ಹೆಚ್ಚಳವು ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಆರೋಗ್ಯಕರ ಆಹಾರ, ವ್ಯಾಯಾಮ ಮತ್ತು ಔಷಧಿಗಳ ಮೂಲಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಅನಾರೋಗ್ಯದ ಯಾವುದೇ ಲಕ್ಷಣಗಳನ್ನು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ