ದೇಹದಲ್ಲಿ ಕೊಬ್ಬು ಹೇಗೆ ಸಂಗ್ರಹವಾಗುತ್ತದೆ? ಅಧಿಕ ಕೊಲೆಸ್ಟ್ರಾಲ್ ನಿಯಂತ್ರಿಸುವುದು ಹೇಗೆ?

ನಿಮ್ಮ ಲಿವರ್, ನಿಮ್ಮ ದೇಹದಲ್ಲಿನ ಇತರ ಜೀವಕೋಶಗಳು ನಿಮ್ಮ ರಕ್ತದಲ್ಲಿ ಸುಮಾರು ಶೇ. 80ರಷ್ಟು ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತವೆ. ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್​ನ ಉಳಿದ ಶೇ. 20ರಷ್ಟು ಭಾಗ ನೀವು ತಿನ್ನುವ ಆಹಾರದಿಂದ ಬರುತ್ತದೆ.

ದೇಹದಲ್ಲಿ ಕೊಬ್ಬು ಹೇಗೆ ಸಂಗ್ರಹವಾಗುತ್ತದೆ? ಅಧಿಕ ಕೊಲೆಸ್ಟ್ರಾಲ್ ನಿಯಂತ್ರಿಸುವುದು ಹೇಗೆ?
ಕೊಲೆಸ್ಟ್ರಾಲ್Image Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 29, 2023 | 5:38 PM

ನಮ್ಮ ಆಹಾರಶೈಲಿಯಿಂದಾಗಿ ಅಧಿಕ ಕೊಲೆಸ್ಟ್ರಾಲ್​ ಇತ್ತೀಚೆಗೆ ಮಕ್ಕಳಿಂದ ವೃದ್ಧರವರೆಗೆ ಎಲ್ಲ ವಯೋಮಾನದವರನ್ನೂ ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಈ ಅಧಿಕ ಕೊಬ್ಬಿನಂಶದಿಂದ ಹೃದ್ರೋಗ, ಹೃದಯಾಘಾತ, ಬಿಪಿ, ಡಯಾಬಿಟಿಸ್ ಮುಂತಾದ ಸಮಸ್ಯೆಗಳು ಉಂಟಾಗುತ್ತವೆ. ಅಧಿಕ ಕೊಲೆಸ್ಟ್ರಾಲ್​ಗೆ ಯಾವುದೇ ಲಕ್ಷಣಗಳಿರುವುದಿಲ್ಲ. ನಿಮ್ಮ ದೇಹದಲ್ಲಿ ಕೊಬ್ಬಿನಂಶ ಹೆಚ್ಚಾಗಿದೆಯಾ ಎಂಬುದನ್ನು ರಕ್ತದ ಪರೀಕ್ಷೆಯಿಂದ ತಿಳಿದುಕೊಳ್ಳಬಹುದು. ಅಧಿಕ ಕೊಲೆಸ್ಟ್ರಾಲ್ ಹೃದಯನಾಳಕ್ಕೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

ಅಧಿಕ ಕೊಬ್ಬಿನಾಂಶವಿರುವುದರ ಲಕ್ಷಣಗಳು ಹೀಗಿವೆ:

– ಎದೆ ನೋವು

– ಹೃದಯಾಘಾತ

– ಸ್ಟ್ರೋಕ್

– ದೀರ್ಘಕಾಲದ ಮೂತ್ರಪಿಂಡ ಕಾಯಿಲೆ

ಅಧಿಕ ಕೊಲೆಸ್ಟ್ರಾಲ್ ಹೃದಯಾಘಾತ ಅಥವಾ ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಅಧಿಕ ಕೊಲೆಸ್ಟ್ರಾಲ್‌ನಿಂದಾಗಿ ಸ್ಯಾಚುರೇಟೆಡ್ ಕೊಬ್ಬು ಹೃದ್ರೋಗವನ್ನು ಉಂಟುಮಾಡುತ್ತದೆ ಎನ್ನಲಾಗಿದೆ. ಆದರೂ ಇತ್ತೀಚಿನ ಸಂಶೋಧನೆಗಳು ಸ್ಯಾಚುರೇಟೆಡ್ ಕೊಬ್ಬು ಹೃದಯರಕ್ತನಾಳದ ಆರೋಗ್ಯದ ಮೇಲೆ ಹೆಚ್ಚೇನೂ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ. ಹೃದ್ರೋಗಕ್ಕೆ ಕೊಲೆಸ್ಟ್ರಾಲ್ ಸಹ ಒಂದು ಸಣ್ಣ ಕಾರಣವಾಗಿರಬಹುದು ಎಂದು ಹೇಳಿದೆ.

ಇದನ್ನೂ ಓದಿ: ಕ್ಯಾನ್ಸರ್​ನಿಂದಾಗುವ ಭಾರತದ ಶೇ. 63ರಷ್ಟು ಮಹಿಳೆಯರ ಸಾವನ್ನು ತಡೆಗಟ್ಟಬಹುದು; ಅಧ್ಯಯನದಲ್ಲಿ ಏನಿದೆ?

ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಎರಡು ಮುಖ್ಯ ಮೂಲಗಳಿಂದ ಬರುತ್ತದೆ. ನಿಮ್ಮ ಲಿವರ್ ಮತ್ತು ನಿಮ್ಮ ಆಹಾರಗಳಿಂದ ಕೊಬ್ಬು ಸಂಗ್ರಹವಾಗುತ್ತದೆ. ನಿಮ್ಮ ಲಿವರ್, ನಿಮ್ಮ ದೇಹದಲ್ಲಿನ ಇತರ ಜೀವಕೋಶಗಳು ನಿಮ್ಮ ರಕ್ತದಲ್ಲಿ ಸುಮಾರು ಶೇ. 80ರಷ್ಟು ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತವೆ.

ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್​ನ ಉಳಿದ ಶೇ. 20ರಷ್ಟು ಭಾಗ ನೀವು ತಿನ್ನುವ ಆಹಾರದಿಂದ ಬರುತ್ತದೆ. ಟ್ರಾನ್ಸ್ ಮತ್ತು ಸ್ಯಾಚುರೇಟೆಡ್ ಕೊಬ್ಬುಗಳಲ್ಲಿ ಹೆಚ್ಚಿನ ಆಹಾರಗಳು ಅನಾರೋಗ್ಯಕರ ಕೊಲೆಸ್ಟ್ರಾಲ್ ಮಟ್ಟಗಳಿಗೆ ಕಾರಣವಾಗಬಹುದು.

ಅಧಿಕ ಕೊಲೆಸ್ಟ್ರಾಲ್ ತಡೆಯುವುದು ಹೇಗೆ?:

ಕೆಲವು ಸಂದರ್ಭಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಆನುವಂಶಿಕವಾಗಿರುತ್ತದೆ. ಆದರೆ, ಕೆಲವು ಜೀವನಶೈಲಿಯ ಬದಲಾವಣೆಗಳು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಮತ್ತು ಕಡಿಮೆ ಮಾಡಲು ನಿಮಗೆ ಸಹಾಯ ಮಾಡುತ್ತವೆ. ಕೊಬ್ಬಿನಾಂಶವನ್ನು ನಿಯಂತ್ರಣದಲ್ಲಿಡಲು ಕೆಲವು ಸಲಹೆಗಳು ಇಲ್ಲಿವೆ:

– ಆರೋಗ್ಯಕರ ಕೊಬ್ಬುಗಳು, ಧಾನ್ಯಗಳು ಮತ್ತು ಕಡಿಮೆ ಕೊಬ್ಬಿನಂಶವಿರುವ ಡೈರಿ ಉತ್ಪನ್ನಗಳನ್ನು ಸೇವಿಸಿ. ಹೃದಯಕ್ಕೆ ಆರೋಗ್ಯಕರವಾದ ಆಹಾರವನ್ನು ಸೇವಿಸಿ.

ಇದನ್ನೂ ಓದಿ: ಕ್ಯಾರೆಟ್ ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ಅತ್ಯುತ್ತಮ ಆಯ್ಕೆ!

– ಕರಿದ ಆಹಾರಗಳು, ಟ್ರಾನ್ಸ್ ಕೊಬ್ಬಿನ ಆಹಾರಗಳು ಮತ್ತು ಭಾಗಶಃ ಹೈಡ್ರೋಜನೀಕರಿಸಿದ ತೈಲಗಳನ್ನು ಹೊಂದಿರುವ ಆಹಾರಗಳನ್ನು ತ್ಯಜಿಸಿ.

– ಸಾಲ್ಮನ್ ಮೀನು ಮತ್ತು ಅಗಸೆಬೀಜಗಳಂತಹ ಒಮೆಗಾ-3 ಕೊಬ್ಬಿನಾಮ್ಲಗಳು ಹೆಚ್ಚಿರುವ ಆಹಾರವನ್ನು ಸೇವಿಸಿ.

– ಹೆಚ್ಚು ಓಟ್ಸ್, ಮಸೂರ, ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವ ಮೂಲಕ ನಿಮ್ಮ ಕರಗುವ ಫೈಬರ್ ಸೇವನೆಯನ್ನು ಹೆಚ್ಚಿಸಿ.

– ನಿಯಮಿತವಾಗಿ ವ್ಯಾಯಾಮ ಮಾಡಿ, ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ, ವಾಕಿಂಗ್ ಮಾಡಿ.

– ನೀವು ಧೂಮಪಾನ ಮಾಡುತ್ತಿದ್ದರೆ ಅದರಿಂದ ಆದಷ್ಟೂ ದೂರವಿರಲು ಪ್ರಯತ್ನಿಸಿ.

– ನೀವು ಅಧಿಕ ತೂಕ ಹೊಂದಿದ್ದರೆ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ