AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack Risk: ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗಿ ಸಂಭವಿಸಲು ಕಾರಣವೇನು?

ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುವುದಕ್ಕೆ ಹಲವು ಕಾರಣಗಳಿವೆ. ತಂಪಾದ ಹವಾಮಾನದಿಂದ ಅಪಧಮನಿಗಳು ಕುಗ್ಗುತ್ತವೆ, ರಕ್ತದೊತ್ತಡ ಹೆಚ್ಚಾಗುತ್ತದೆ. ಇದಲ್ಲದೇ ವಾಯುಮಾಲಿನ್ಯ, ದೈಹಿಕ ಚಟುವಟಿಕೆಯ ಕೊರತೆ, ಅಪೌಷ್ಟಿಕ ಆಹಾರ ಮತ್ತು ವಿಟಮಿನ್ ಡಿ ಕೊರತೆಯೂ ಕಾರಣ ಎನ್ನುತ್ತಾರೆ ಆರೋಗ್ಯ ತಜ್ಞರು.

Heart Attack Risk: ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗಿ ಸಂಭವಿಸಲು ಕಾರಣವೇನು?
Heart Attack
ಅಕ್ಷತಾ ವರ್ಕಾಡಿ
|

Updated on: Nov 30, 2024 | 2:49 PM

Share

ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚು ಸಂಭವಿಸುತ್ತವೆ ಎಂದು ನಿಮಗೆ ತಿಳಿದಿದೆಯೇ? ಈ ಸೀಸನ್ ನಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರೇ ಹೆಚ್ಚು. ಆದ್ದರಿಂದ ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗಿ ಸಂಭವಿಸಲು ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಏಕೆ ಹೆಚ್ಚಾಗುತ್ತದೆ?

ವಾಸ್ತವವಾಗಿ, ಚಳಿಗೆ ಅಪಧಮನಿಗಳು ಕುಗ್ಗುತ್ತವೆ, ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದಲ್ಲದೇ ಚಳಿಗಾಲದಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುತ್ತದೆ, ಇದರಿಂದ ಮಾಲಿನ್ಯದ ಕಣಗಳು ಉಸಿರಾಟದ ಮೂಲಕ ಶ್ವಾಸಕೋಶವನ್ನು ಪ್ರವೇಶಿಸುತ್ತವೆ ಮತ್ತು ರಕ್ತದಲ್ಲಿ ಸಂಗ್ರಹವಾಗುತ್ತವೆ ಮತ್ತು ರಕ್ತನಾಳಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತವೆ. ಈ ಕಾರಣಗಳಿಂದ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.

ದೈಹಿಕ ಚಟುವಟಿಕೆಗಳ ಕೊರತೆ:

ಚಳಿಗಾಲದಲ್ಲಿ ಸಾಕಷ್ಟು ಚಳಿ ಇರುವುದರಿಂದ ಬೆಳಗ್ಗೆ ಬೇಗ ಎದ್ದು ಯೋಗ ವ್ಯಾಯಾಮ, ವಾಕಿಂಗ್​ ಮಾಡುವವರು ಸಂಖ್ಯೆ ತೀರಾ ಕಡಿಮೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ಚಳಿಗಾಲದಲ್ಲಿ ಜನರು ಹೆಚ್ಚು ಕರಿದ ಆಹಾರ ಮತ್ತು ಹೆಚ್ಚಿನ ಕ್ಯಾಲೋರಿ ಆಹಾರವನ್ನು ತಿನ್ನುತ್ತಾರೆ. ಇದಲ್ಲದೆ, ಸೂರ್ಯನ ಬೆಳಕಿನ ಕೊರತೆಯಿಂದಾಗಿ, ದೇಹದಲ್ಲಿ ವಿಟಮಿನ್ ಡಿ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಚಳಿಗಾಲದಲ್ಲಿ ಜ್ವರದಂತಹ ಉಸಿರಾಟದ ಸೋಂಕುಗಳು ಹೆಚ್ಚಾಗುತ್ತವೆ, ಇದು ರಕ್ತನಾಳಗಳಲ್ಲಿ ಊತವನ್ನು ಉಂಟುಮಾಡುತ್ತದೆ. ಇದರಿಂದ ಹೃದಯಾಘಾತದ ಅಪಾಯ ಹೆಚ್ಚು.

ಇದನ್ನೂ ಓದಿ: ಶೀತ ವಾತಾವರಣದಲ್ಲಿ ಆಲ್ಕೋಹಾಲ್ ಸೇವನೆ ಎಷ್ಟು ಅಪಾಯಕಾರಿ ತಿಳಿಯಿರಿ

ಈ ಋತುವಿನಲ್ಲಿ ಹೃದಯಾಘಾತವನ್ನು ತಪ್ಪಿಸಲು ಏನು ಮಾಡಬೇಕು?

ಅಗಸೆಬೀಜ, ಬೆಳ್ಳುಳ್ಳಿ, ದಾಲ್ಚಿನ್ನಿ ಮತ್ತು ಅರಿಶಿನದಂತಹ ಹೃದಯದ ಆರೋಗ್ಯವನ್ನು ಕಾಪಾಡುವ ಅಂಶವನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಇದಲ್ಲದೆ, ಧೂಮಪಾನ ಮತ್ತು ಮದ್ಯಪಾನವನ್ನು ತಪ್ಪಿಸಿ. ಅಲ್ಲದೆ ಪ್ರತಿದಿನ 30 ರಿಂದ 45 ನಿಮಿಷಗಳ ಕಾಲ ವ್ಯಾಯಾಮ ಮಾಡಿ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ