Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ದೊಡ್ಡಪತ್ರೆ ಎಲೆಗಳನ್ನು ಈ ರೀತಿ ಬಳಸಿದರೆ ಶೀತ, ಜ್ವರ ಹತ್ತಿರವೂ ಸುಳಿಯುವುದಿಲ್ಲ

ಮನೆಯಲ್ಲಿರುವ ಕೆಲವು ಸಸ್ಯಗಳಿಂದ ಸಣ್ಣ ಪುಟ್ಟ ಶೀತ, ಜ್ವರವನ್ನು ಕಡಿಮೆ ಮಾಡಿಕೊಳ್ಳಬಹುದು. ಇಂತಹ ಪರಿಣಾಮಕಾರಿ ಔಷಧಿ ಗಿಡಗಳಲ್ಲಿ ದೊಡ್ಡ ಪತ್ರೆ ಗಿಡವೂ ಒಂದಾಗಿದೆ. ಇದು ಶೀತ, ಜ್ವರಕ್ಕೆ ಮನೆ ಮದ್ದಾಗಿದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಮಕ್ಕಳಿಗೂ ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ.

Home Remedies: ದೊಡ್ಡಪತ್ರೆ ಎಲೆಗಳನ್ನು ಈ ರೀತಿ ಬಳಸಿದರೆ ಶೀತ, ಜ್ವರ ಹತ್ತಿರವೂ ಸುಳಿಯುವುದಿಲ್ಲ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Jun 25, 2024 | 7:42 PM

ಮನೆಯ ಹಿತ್ತಲಿನಲ್ಲಿರುವ ಸಸ್ಯಗಳು ಅನೇಕ ರೀತಿಯ ಸಣ್ಣ ಪುಟ್ಟ ಕಾಯಿಲೆಗಳಿಗೆ ರಾಮಬಾಣವಾಗಿರುತ್ತದೆ. ಹಿಂದಿನ ಕಾಲದಲ್ಲಿ ಜ್ವರ, ಶೀತಕ್ಕೆ ಮೊದಲು ಮನೆಮದ್ದುಗಳನ್ನು ಮಾಡುತ್ತಿದ್ದರು. ಆದರೆ ಇಂದು ನಾವು ಮಾತ್ರೆಗಳ ಮೊರೆ ಹೋಗಿದ್ದೇವೆ. ಮಕ್ಕಳಿಗೂ ನಾವು ಈ ಅಭ್ಯಾಸವನ್ನೇ ರೂಢಿಸಿಕೊಂಡು ಬರುತ್ತಿದ್ದೇವೆ. ಇದಕ್ಕಿಂತ ಮನೆಯಲ್ಲಿರುವ ಕೆಲವು ಸಸ್ಯಗಳಿಂದ ಸಣ್ಣ ಪುಟ್ಟ ಶೀತ, ಜ್ವರವನ್ನು ಕಡಿಮೆ ಮಾಡಿಕೊಳ್ಳಬಹುದು. ಇಂತಹ ಪರಿಣಾಮಕಾರಿ ಔಷಧಿ ಗಿಡಗಳಲ್ಲಿ ದೊಡ್ಡ ಪತ್ರೆ ಗಿಡವೂ ಒಂದಾಗಿದೆ. ಇದು ಶೀತ, ಜ್ವರಕ್ಕೆ ಮನೆ ಮದ್ದಾಗಿದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಮಕ್ಕಳಿಗೂ ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಆದಂತಹ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ಇನ್ನು ಚಿಕ್ಕ ಮಕ್ಕಳಿಗೂ ಕೂಡ ಈ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ. ಇದರ ರಸವನ್ನು ಸ್ವಲ್ಪ ಕುಡಿಯಲು ಕೊಡುವುದರಿಂದ ನೆಗಡಿಯನ್ನು ಕಡಿಮೆ ಮಾಡಬಹುದಾಗಿದೆ.

ಇದನ್ನೂ ಓದಿ: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆ? ಡಾಕ್ಟರ್ ಮಾತು ಕೇಳಿ

ಹೇಗೆ ತಯಾರಿಸುವುದು?

  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೇ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.
  • ಇನ್ನು ಸಣ್ಣ ಮಕ್ಕಳಿಗೆ ಕೊಡುವಾಗ ದೊಡ್ಡ ಪತ್ರೆಯನ್ನು ಚೆನ್ನಾಗಿ ಸುಡಬೇಕು. ಬಳಿಕ ಅದನ್ನು ಒಂದು ಪಾತ್ರೆಗೆ ಹಾಕಿ ಜಜ್ಜಬೇಕು. ನಂತರ ಅದರ ರಸವನ್ನು ತೆಗೆದು ಮಕ್ಕಳಿಗೆ ಕುಡಿಯಲು ಕೊಡಬೇಕು. ಕೇವಲ 5 ರಿಂದ 6 ಸಣ್ಣ ಸಣ್ಣ ಎಲೆಗಳು ಮಕ್ಕಳಿಗೆ ಸಾಕಾಗುತ್ತದೆ. ದೊಡ್ಡವರಿಗಾದರೆ ಸ್ವಲ್ಪ ಜಾಸ್ತಿ ಬಳಸಬಹುದು. ಆದರೆ ಇದನ್ನು 6 ತಿಂಗಳು ಮೇಲ್ಪಟ್ಟ ಮಕ್ಕಳಿಗೆ ಮಾತ್ರ ನೀಡಬೇಕು.
  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಯ ಮೇಲೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು