ಯೂರಿಕ್ ಆಮ್ಲ ಬಗ್ಗೆ ನೀವು ತಿಳಿದಿರಬಹುದು. ರಕ್ತದಲ್ಲಿ ಒಂದು ವೇಳೆ ಈ ಅಂಶ ಹೆಚ್ಚಾದರೆ, ಅದರಿಂದ ಬಗೆ ಬಗೆಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಯೂರಿಕ್ ಆಮ್ಲದ ನಿಯಂತ್ರಣ ಮಾಡಿಕೊಳ್ಳುವುದು ಆದಷ್ಟು ಒಳ್ಳೆಯದು. ಇದನ್ನು ನಿಯಂತ್ರಿಸಲು ಹಲವಾರು ವಿಧಗಳಿವೆ. ಅವುಗಳಲ್ಲಿ ಆರೋಗ್ಯಕರ ಪಾನೀಯಗಳನ್ನು ಸೇವಿಸುವುದು ಕೂಡ ಒಂದು. ಈ ಪಾನೀಯಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ. ಹಾಗಾದರೆ ಯಾವ ಪಾನೀಯಗಳನ್ನು ಸೇವನೆ ಮಾಡಬೇಕು? ಯಾವುದು ಒಳ್ಳೆಯದು? ಇಲ್ಲಿದೆ ಮಾಹಿತಿ.
ಬೆಳಿಗ್ಗೆ ಎದ್ದ ತಕ್ಷಣ ಒಂದು ಲೋಟ ಬೆಚ್ಚಗಿರುವ ನಿಂಬೆ ನೀರನ್ನು ಕುಡಿಯುವುದು ದೇಹಕ್ಕೆ ಬಹಳ ಒಳ್ಳೆಯದು. ಇದು ದೇಹದಲ್ಲಿರುವ ಯೂರಿಕ್ ಆಮ್ಲವನ್ನು ಕಡಿಮೆ ಮಾಡಿ ಆಮ್ಲ ಹೆಚ್ಚಾಗದಂತೆ ನೋಡಿ ಕೊಳ್ಳುತ್ತದೆ.
ಇದರ ನೀರು ಯೂರಿಕ್ ಆಮ್ಲದಿಂದ ಮುಕ್ತಿ ಸಿಗುವಂತೆ ಮಾಡುತ್ತದೆ. ಜೊತೆಗೆ ಉರಿಯೂತದ ಗುಣಲಕ್ಷಣಗಳನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ.
ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿ ಹೆಚ್ಚಾದ ಯೂರಿಕ್ ಆಮ್ಲವನ್ನು ಕೂಡ ನಿಯಂತ್ರಣ ಮಾಡುತ್ತದೆ.
ಈ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಚಹಾದ ರೀತಿಯಲ್ಲಿ ಕುಡಿಯಬಹುದು. ತುಳಸಿ ಎಲೆಗಳು, ದೇಹದಿಂದ ಹೆಚ್ಚುವರಿ ಯೂರಿಕ್ ಆಮ್ಲವನ್ನು ನಿವಾರಣೆ ಮಾಡುವಲ್ಲಿ ಸಹಕಾರಿಯಾಗುತ್ತದೆ.
ಹಸಿ ಶುಂಠಿ ಚೂರುಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ, ಬಳಿಕ ಅದನ್ನು ಸೋಸಿ ಕುಡಿಯುವುದರಿಂದ ದೇಹದಲ್ಲಿ ಉರಿಯೂತ ನಿಯಂತ್ರಣವಾಗುತ್ತದೆ ಜೊತೆಗೆ ನೈಸರ್ಗಿಕವಾಗಿ ಯೂರಿಕ್ ಆಮ್ಲ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಇದನ್ನೂ ಓದಿ: ಏಲಕ್ಕಿ ಸೇವನೆ ಮಾಡಿದರೆ ಈ ಆರೋಗ್ಯ ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲ
ಇದರಲ್ಲಿ ಹೆಚ್ಚಿನ ನೀರಿನ ಅಂಶವಿದ್ದು, ಹೆಚ್ಚುವರಿ ಯೂರಿಕ್ ಆಮ್ಲವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜೊತೆಗೆ ದೇಹದಲ್ಲಿ ನೀರಿನ ಅಂಶ ಕಡಿಮೆ ಆದಾಗಲೂ ಕೂಡ ಈ ರಸದ ಸೇವನೆ ಮಾಡುವುದು ಬಹಳ ಒಳ್ಳೆಯದು.
ರಾತ್ರಿ ಮಲಗುವಾಗ ಒಂದು ಲೋಟ ನೀರಿಗೆ ಸ್ವಲ್ಪ ಮೆಂತ್ಯ ಕಾಳುಗಳನ್ನು ಹಾಕಿ ಇಡೀ ರಾತ್ರಿ ನೆನೆಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದರಿಂದ ಕೇವಲ ಬ್ಲಡ್ ಶುಗರ್ ಲೆವೆಲ್ ಮಾತ್ರವಲ್ಲ, ರಕ್ತದಲ್ಲಿರುವ ಯೂರಿಕ್ ಆಮ್ಲ ಕೂಡ ಕಡಿಮೆ ಯಾಗುತ್ತದೆ.
ಒಂದು ಕಪ್ ನೀರಿಗೆ ಬಾರ್ಲಿ ಹಾಕಿ ಐದು ನಿಮಿಷಗಳ ಕಾಲ ಕುದಿಸಿ. ಬಳಿಕ ಅದನ್ನು ಸೋಸಿಕೊಂಡು ಕುಡಿಯಿರಿ. ಇದು ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ. ಈ ನೀರನ್ನು ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಕುಡಿಯುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ