Immunity Booster Juices: ತ್ವರಿತ ಶಕ್ತಿಗಾಗಿ ಈ ಏಳು ಬಗೆಯ ಜ್ಯೂಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ

ರೋಗನಿರೋಧಕ ಶಕ್ತಿ ಬಲವಾಗಿದ್ದರೆ, ಕೊರೊನಾ, ನೆಗಡಿ, ಕೆಮ್ಮು ಮತ್ತು ಇನ್ನಿತರ ಅಪಾಯವನ್ನು ನಿವಾರಿಸಬಹುದು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ಹೀಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ಜ್ಯೂಸ್​ಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.

Immunity Booster Juices: ತ್ವರಿತ ಶಕ್ತಿಗಾಗಿ ಈ ಏಳು ಬಗೆಯ ಜ್ಯೂಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Sep 22, 2021 | 8:53 AM

ಒಂದೆಡೆ ಕೊರೊನಾ, ಇನ್ನೊಂದೆಡೆ ಕಾಲೋಚಿತ ರೋಗಗಳು ಜನರನ್ನು ಕಾಡುತ್ತಿವೆ. ಹೀಗಾಗಿ ನಾವು ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿ ಬಹಳ ಅವಶ್ಯಕ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅನೇಕ ಆಹಾರಗಳು ನಮ್ಮ ಅಡುಗೆ ಮನೆಯಲ್ಲಿಯೇ ಲಭ್ಯವಿದೆ. ಆದರೆ ಅವುಗಳ ಬಗ್ಗೆ ಮಾಹಿತಿಯ ಕೊರತೆ ಇದೆ. ರೋಗನಿರೋಧಕ ಶಕ್ತಿ ಬಲವಾಗಿದ್ದರೆ, ಕೊರೊನಾ, ನೆಗಡಿ, ಕೆಮ್ಮು ಮತ್ತು ಇನ್ನಿತರ ಅಪಾಯವನ್ನು ನಿವಾರಿಸಬಹುದು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ಹೀಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ಜ್ಯೂಸ್​ಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಈ ಜ್ಯೂಸ್​ಗಳಿಂದ ಸುಲಭವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಹಾಗಿದ್ದರೆ ಯಾವೆಲ್ಲ ಜ್ಯೂಸ್​ಗಳು ನಮ್ಮ ದೇಹಕ್ಕೆ ಸೂಕ್ತ ಎಂದು ತಿಳಿದುಕೊಳ್ಳುವುದು ಸೂಕ್ತ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಏಳು ಬಗೆಯ ಜ್ಯೂಸ್​ಗಳು

ಟೊಮೆಟೋ ಜ್ಯೂಸ್​ ಟೊಮೆಟೋದಲ್ಲಿ ವಿಟಮಿನ್ ಸಿ, ಇ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇವು ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.  ಒಂದು ಲೋಟ ಟೊಮೆಟೋ ಜ್ಯೂಸ್ ಅನ್ನು ಪ್ರತಿದಿನ ಕುಡಿಯುವುದರಿಂದ ಚರ್ಮ ಮತ್ತು ರಕ್ತಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗಿ ಕರುಳು ಶುದ್ಧವಾಗುತ್ತದೆ.

ಕಿತ್ತಳೆ ಜ್ಯೂಸ್​ ನಮ್ಮ ದೇಹವು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು ವಿಟಮಿನ್ ಸಿ ಅಗತ್ಯವಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಿತ್ತಳೆ ವೈದ್ಯಕೀಯ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ಸೋಂಕಿನ ವಿರುದ್ಧ ಹೋರಾಡುವಲ್ಲಿ ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ದ್ರಾಕ್ಷಿ ಮತ್ತು ನಿಂಬೆಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿವೆ. ಇವುಗಳು ಸಾಮಾನ್ಯ ಸೋಂಕುಗಳಿಂದ ನಮ್ಮನ್ನು ಸುರಕ್ಷಿತವಾಗಿರಿಸುವುದಲ್ಲದೆ ಹೃದಯ ಮತ್ತು ದೇಹದ ಆರೋಗ್ಯಕ್ಕೆ ಸಹಕಾರ ನೀಡುತ್ತವೆ.

ಕ್ಯಾರೆಟ್ ಜ್ಯೂಸ್  ಕ್ಯಾರೆಟ್‌ಗಳಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಜೊತೆಗೆ ವಿಟಮಿನ್ ಎ, ಸಿ ಮತ್ತು ಇ ಸಮೃದ್ಧವಾಗಿದೆ. ಇದರಿಂದ ತಯಾರಿಸಿದ ಜ್ಯೂಸ್​, ಹೊಟ್ಟೆ ಉಬ್ಬುವಿಕೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಈ ಜ್ಯೂಸ್​ಗೆ ಸ್ವಲ್ಪ ಶುಂಠಿ ಮತ್ತು ಅರಿಶಿಣವನ್ನು ಸೇರಿಸುವುದರಿಂದ ನೆಗಡಿ ಮತ್ತು ಕೆಮ್ಮಿನಂತಹ ಸಮಸ್ಯೆಗಳನ್ನು ನಿವಾರಿಸಬಹುದು.

ಕಲ್ಲಂಗಡಿ ಜ್ಯೂಸ್  ಕಲ್ಲಂಗಡಿಯಲ್ಲಿ ವಿಟಮಿನ್ ಎ, ಸಿ, ಮೆಗ್ನೀಸಿಯಮ್ ಮತ್ತು ಸತುವು ಸಮೃದ್ಧವಾಗಿದೆ. ಇವುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತವೆ. ಕಲ್ಲಂಗಡಿ ಜ್ಯೂಸ್ ಸೋಂಕುಗಳನ್ನು ಕಡಿಮೆ ಮಾಡಲು ಹಾಗೂ ಸ್ನಾಯು ನೋವುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕಿವಿ ಹಣ್ಣು, ಸ್ಟ್ರಾಬೆರಿ ಜ್ಯೂಸ್  ಕಿವಿ ಮತ್ತು ಸ್ಟ್ರಾಬೆರಿ ಹಣ್ಣುಗಳು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಇವು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ.

ಲೆಟಿಸ್ ಲೆಟಿಸ್​ನಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಸಮೃದ್ಧವಾಗಿದೆ. ಇದರಿಂದ ತಯಾರಿಸಿದ ಜ್ಯೂಸ್​ ಕುಡಿಯುವುದರಿಂದ ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಈ ಜ್ಯೂಸ್​ ಪ್ರತಿಕಾಯಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ಸೇಬು, ಕ್ಯಾರೆಟ್, ಕಿತ್ತಳೆ ಮಿಶ್ರಿತ ಜ್ಯೂಸ್ ಸೇಬು, ಕ್ಯಾರೆಟ್ ಮಿಶ್ರಿತ ಜ್ಯೂಸ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇವುಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ -6, ಪೊಟ್ಯಾಸಿಯಮ್ ಮತ್ತು ಫೋಲಿಕ್ ಆಸಿಡ್ ಸಮೃದ್ಧವಾಗಿದೆ. ಇವು ತ್ವರಿತ ಶಕ್ತಿಯನ್ನು ನೀಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಇದನ್ನೂ ಓದಿ: Mosambi Juice Benefits: ಮೂಸಂಬಿ ಜ್ಯೂಸ್​ ಆರೋಗ್ಯಕ್ಕೆ ಉತ್ತಮ; ವಾರಕ್ಕೆ ಎರಡು ಬಾರಿಯಾದರೂ ಮೂಸಂಬಿ ಜ್ಯೂಸ್​ ಸವಿಯಿರಿ

Beetroot Juice: ಬೀಟ್​ರೂಟ್​​ ಜ್ಯೂಸ್​ ಕುಡಿಯುವುದರಿಂದಾಗುವ ಅನೇಕ ಆರೋಗ್ಯಕರ ಬದಲಾವಣೆಗಳ ಬಗ್ಗೆ ಗಮನಹರಿಸಿ

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್