ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಮನುಷ್ಯನಿಗೆ ರೋಗ ನಿರೋಧಕ ಶಕ್ತಿ ಬೇಕೆ ಬೇಕು. ಯಾವ ವ್ಯಕ್ತಿಯ ದೇಹದಲ್ಲಿ ಇಮ್ಯೂನಿಟಿ ಪವರ್ ಕಡಿಮೆ ಇರುತ್ತದೆಯೋ ಆ ದೇಹದೊಳಗೆ ಕೊರೊನಾ ಸೋಂಕು ಸುಲಭವಾಗಿ ಪ್ರವೇಶಿಸುತ್ತದೆ. ಹೀಗಾಗಿ ಈ ವೇಳೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಒಳಿತು.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು
ಸಾಂಕೇತಿಕ ಚಿತ್ರ
Follow us
sandhya thejappa
| Updated By: ಆಯೇಷಾ ಬಾನು

Updated on: May 23, 2021 | 8:00 AM

ಬೆಂಗಳೂರು: ಕೊರೊನಾ ಆರ್ಭಟ ಕಡಿಮೆಯಾಗಿದೆ ಎಂದು ಯೋಚಿಸುವ ಹೊತ್ತಿಗೆ ಅದರ ಎರಡನೇ ಅಲೆ ದೇಶದಾದ್ಯಂತ ಬಂದು ಅಪ್ಪಳಿಸಿದೆ. ಬಾಳಿ ಬದುಕಬೇಕಾದ ಅದೆಷ್ಟೋ ಜೀವಿಗಳನ್ನು ಕೊರೊನಾ ಬಲಿ ಪಡೆಯುತ್ತಿದೆ. ಮನೆ ಮಂದಿಯನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಈ ಬಾರಿಯಂತು ಯುವ ಸಮೂಹಕ್ಕೆ ಕೊರೊನಾ ಲಗ್ಗೆ ಇಟ್ಟಿದೆ. ಸಾವಿನ ಸಂಖ್ಯೆಯಂತೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಇಂತಹ ಸಂದಿಗ್ಧ ಸಮಯಲ್ಲಿ ಒಳ್ಳೆಯ ಆಹಾರವನ್ನು ಸೇವಿಸುವುದು ತುಂಬಾ ಮುಖ್ಯ. ಇದರ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಕೂಡಾ ಅಷ್ಟೇ ಮುಖ್ಯವಾಗಿರುತ್ತದೆ.

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಮನುಷ್ಯನಿಗೆ ರೋಗ ನಿರೋಧಕ ಶಕ್ತಿ ಬೇಕೆ ಬೇಕು. ಯಾವ ವ್ಯಕ್ತಿಯ ದೇಹದಲ್ಲಿ ಇಮ್ಯೂನಿಟಿ ಪವರ್ ಕಡಿಮೆ ಇರುತ್ತದೆಯೋ ಆ ದೇಹದೊಳಗೆ ಕೊರೊನಾ ಸೋಂಕು ಸುಲಭವಾಗಿ ಪ್ರವೇಶಿಸುತ್ತದೆ. ಹೀಗಾಗಿ ಈ ವೇಳೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಒಳಿತು. ಹಾಗಾದರೆ ಯಾವ ಪದಾರ್ಥವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ? ಜೊತೆಗೆ ಯಾವ ಸಮಯಕ್ಕೆ ಸ್ವೀಕರಿಸಬೇಕು?

ನಾವು ತಿಳಿಸಲು ಹೊಟಿರುವ ಆ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಖಾಲಿ ಹೊಟ್ಟೆಯಲ್ಲಿ ಪದಾರ್ಥಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ಸ್ವೀಕರಿಸಿದಾಗ ಜೀಣಾಂಗ ಕಾರ್ಯ ಚೆನ್ನಾಗಿರುತ್ತದೆ. ಈ ಕಾರಣ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.

*ಬೆಳ್ಳುಳ್ಳಿ ಎಲ್ಲರ ಮನೆಯಲ್ಲಿ ಬೆಳ್ಳುಳ್ಳಿ ಇದ್ದೆ ಇರುತ್ತದೆ. ಅಡುಗೆಗೆ ಇದನ್ನು ಬಳಸುತ್ತಾರೆ. ಸಾರಿನ ಒಗ್ಗರಣೆಗೆ ಬೆಳ್ಳುಳ್ಳಿ ಬೇಕೆ ಬೇಕು. ಮಾಂಸದ ಅಡುಗೆಯ ರುಚಿಯನ್ನು ಈ ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಮೂಲವ್ಯಾಧಿ, ಮಲಬದ್ಧತೆ, ಕಿವಿ ನೋವು, ರಕ್ತದೊತ್ತಡ ಸೇರಿದಂತೆ ಹಲವು ಕಾಯಿಲೆಗಳಿಗೆ ಬೆಳ್ಳುಳ್ಳಿ ರಾಮಬಾಣ. ಇದು ಹಸಿವನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳಿಯನ್ನು ಸೇವಿಸಿದಾಗ ಒಂದೇ ಗಂಟೆಯಲ್ಲಿ ಜೀರ್ಣವಾಗುತ್ತದೆ. ಕೊಲೆಸ್ಟ್ರಾಲ್ ಕಡಿಮೆ ಮಾಡುವ ಜೊತೆಗೆ ದೇಹದಲ್ಲಿರುವ ವಿಷ ಪದಾರ್ಥಗಳನ್ನು ಮಲ ಮತ್ತು ಮೂತ್ರದ ಮೂಲಕ ಹೊರ ಹಾಕಲು ಸಹಾಯಕವಾಗುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಅಲ್ಲದೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಬೆಳ್ಳುಳ್ಳಿ

*ನೆಲ್ಲಿಕಾಯಿ ಸಹಜವಾಗಿ ಎಲ್ಲರಿಗೂ ಇಷ್ಟವಾಗುವ ಕಾಯಿ ಎಂದರೆ ನೆಲ್ಲಿಕಾಯಿ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೆಲ್ಲಿಕಾಯಿಯನ್ನು ತಿಂದ ಕೊನೆಯಲ್ಲಿ ನೀರು ಕುಡಿದಾಗ ಬಾಯಿಯೆಲ್ಲಾ ಸಿಹಿಯಾಗುತ್ತದೆ. ಇದರ ಉಪ್ಪಿನ ಕಾಯಿ ತಿನ್ನಲು ಇನ್ನು ರುಚಿಯಾಗಿರುತ್ತದೆ. ನೆಲ್ಲಿಕಾಯಿ ಚೂರ್ಣ ಮತ್ತು ಕೊತ್ತಂಬರಿಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ನೀರಿನಲ್ಲಿ ನೆನೆಸಿಡಬೇಕು. ಬೆಳಿಗ್ಗೆ ಚೆನ್ನಾಗಿ ಕಿವುಚಿ ಸೋಸಬೇಕು. ಅದಕೆಕ ಕಲ್ಲು ಸಕ್ಕರೆ ಪುಡಿ ಸೇರಿಸಿ ಸೇವಿಸುವುದರಿಂದ ತಲೆ ಸುತ್ತುವಿಕೆ ನಿವಾರಣೆಯಾಗುತ್ತದೆ. ವಿಟಮಿನ್ ಸಿಯನ್ನು ಹೊಂದಿರುವ ನೆಲ್ಲಿಕಾಯಿಯನ್ನು ಬಿಸಿ ನೀರಿನೊಂದಿಗೆ ಖಾಲಿ ಹೊಟ್ಟೆಗೆ ಸೇವಿದಾಗ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ನೆಲ್ಲಿಕಾಯಿ

*ಜೇನುತುಪ್ಪ ಬಹು ಹಿಂದಿನ ಕಾಲದಿಂದಲೂ ಜೇನುತುಪ್ಪವನ್ನು ಔಷಧಿಗೆ ಬಳಕೆ ಮಾಡುತ್ತಾ ಬಂದಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಳ್ಳುವವರಿಗೆ ಈ ಜೇನು ತುಪ್ಪದ ಸಾಮರ್ಥ್ಯದ ಬಗ್ಗೆ ಅರಿವಿರುತ್ತದೆ. ಬಿಸಿ ನೀರಿನೊಂದಿಗೆ ಒಂದು ಚಮಚ ಜೇನುತುಪ್ಪ ಬೆರೆಸಿ ಪತ್ರಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಕುಡಿದರೆ ತೂಕ ಕಡಿಮೆಯಾಗುವ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಜೇನುತುಪ್ಪ

ಇದನ್ನೂ ಓದಿ

ನಿಮ್ಮ ಮನೆಯನ್ನು ಸುಂದರವಾಗಿಸಲು ಇಲ್ಲಿದೆ ಸರಳ ಉಪಾಯ!

Health Tips: ದುಡ್ಡು ಖರ್ಚು ಮಾಡದೇ, ಜಿಮ್​ಗೆ ಹೋಗದೇ ಫಿಟ್ ಆಗಿ ಇರುವುದು ಹೇಗೆ?

(Honey amla and garlic should be consumed on an empty stomach to boost immunity)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ