AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಕಾಯಿಲೆ ಇರುವವರು ಜೇನುತುಪ್ಪ ತಿಂದರೆ ಏನಾಗಬಹುದು ಎಂದು ಯೋಚಿಸಿದ್ದೀರಾ?

ಜೇನುತುಪ್ಪ ಪೋಷಕಾಂಶಗಳಿಂದ ಸಮೃದ್ಧವಾಗಿರುವಂತಹ ಅಮೃತ. ಇದು ವಿಟಮಿನ್ ಸಿ, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಸತುವುಗಳಂತಹ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಮಾತ್ರವಲ್ಲ ಉರಿಯೂತ ನಿವಾರಕ ಗುಣಗಳನ್ನು ಸಹ ಹೊಂದಿದೆ. ಆದರೆ ಮಧುಮೇಹ ರೋಗಿಗಳು ಇಷ್ಟೊಂದು ಪೌಷ್ಟಿಕಾಂಶದ ಮೌಲ್ಯಗಳನ್ನು ಹೊಂದಿರುವ ಜೇನುತುಪ್ಪವನ್ನು ಸೇವಿಸಿದಾಗ ಏನಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು? ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಕ್ಕರೆ ಕಾಯಿಲೆ ಇರುವವರು ಜೇನುತುಪ್ಪ ತಿಂದರೆ ಏನಾಗಬಹುದು ಎಂದು ಯೋಚಿಸಿದ್ದೀರಾ?
Honey For Diabetes
ಪ್ರೀತಿ ಭಟ್​, ಗುಣವಂತೆ
|

Updated on: Aug 01, 2025 | 8:02 PM

Share

ಜೇನುತುಪ್ಪ (Honey) ನೈಸರ್ಗಿಕವಾಗಿ ಸಿಗುವ ಸಿಹಿ. ಅಷ್ಟೇ ಅಲ್ಲ… ಇದು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಯುರ್ವೇದ ಔಷಧವಾಗಿದೆ. ಏಕೆಂದರೆ ಇದರಲ್ಲಿ ಜೀವಸತ್ವ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಮಾತ್ರವಲ್ಲ ಉತ್ಕರ್ಷಣ ನಿರೋಧಕಗಳೂ ಇವೆ. ಆದರೆ ಮಧುಮೇಹ (Diabetes) ಇರುವವರು ಸಕ್ಕರೆ ಬದಲಿಯಾಗಿ ಇದನ್ನು ಸೇವನೆ ಮಾಡಬಹುದೇ? ಇಷ್ಟೆಲ್ಲಾ ಪ್ರಯೋಜನಗಳಿರುವ ಜೇನುತುಪ್ಪ ಡಯಾಬಿಟಿಸ್ ಇರುವವರಿಗೂ ಒಳ್ಳೆಯದೇ? ಎನ್ನುವ ಪ್ರಶ್ನೆ ಹಲವರಿಗೆ ಮೂಡುವುದು ಸಹಜ. ಜೇನುತುಪ್ಪದಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಸತುವುಗಳಂತಹ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇದು ಉರಿಯೂತ ನಿವಾರಕ ಗುಣಗಳನ್ನು ಸಹ ಹೊಂದಿದೆ. ಮಧುಮೇಹ ರೋಗಿಗಳು ಇಷ್ಟೊಂದು ಪೌಷ್ಟಿಕಾಂಶದ ಮೌಲ್ಯಗಳನ್ನು ಹೊಂದಿರುವ ಜೇನುತುಪ್ಪವನ್ನು ಸೇವಿಸಿದಾಗ ಏನಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಈ ಬಗ್ಗೆ ವೈದ್ಯರು ನೀಡಿರುವ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಸಕ್ಕರೆ (Sugar) ಬದಲಿಯಾಗಿ ಜೇನುತುಪ್ಪ ಸೇವನೆ ಮಾಡುವುದು ಒಳ್ಳೆಯದೋ? ಅಲ್ಲವೋ ಎಂಬುದಕ್ಕೆ ಉತ್ತರ ಇಲ್ಲಿದೆ.

ಸಕ್ಕರೆ ಬದಲಿಯಾಗಿ ಜೇನುತುಪ್ಪ ಬಳಸಬಹುದೇ?

ವೈದ್ಯರು ಹೇಳುವ ಪ್ರಕಾರ, ಮಧುಮೇಹ ಇರುವವರು ಯಾವುದೇ ಕಾರಣಕ್ಕೂ ಸಕ್ಕರೆಯ ಬದಲಿಯಾಗಿ ಜೇನುತುಪ್ಪ ಸೇವನೆ ಮಾಡಬಾರದು. ಏಕೆಂದರೆ ಇದು ಯಾವುದೇ ರೀತಿಯಲ್ಲಿ ಪ್ರಯೋಜನಕಾರಿಯಲ್ಲ . ಜೇನುತುಪ್ಪವು ಸಕ್ಕರೆಗಿಂತ ಹೆಚ್ಚಿನ ಕಾರ್ಬೋಹೈಡ್ರೇಟ್‌ಗಳು, ಕ್ಯಾಲೋರಿಗಳು ಮತ್ತು ಸಿಹಿಯನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಹಾಗಾಗಿ ಇದನ್ನು ಸಕ್ಕರೆಗೆ ಬದಲಿಯಾಗಿ ಬಳಸುವುದು ಉತ್ತಮವಲ್ಲ. ಆದರೆ ಜೇನುತುಪ್ಪ ತಿನ್ನುವ ಮನಸ್ಸಾದರೆ ಅದನ್ನು ಕಡಿಮೆ ಪ್ರಮಾಣದಲ್ಲಿ ಬಳಕೆ ಮಾಡಬಹುದು. ಜೇನುತುಪ್ಪದಲ್ಲಿ ಹೆಚ್ಚಿನ ಕ್ಯಾಲೋರಿ ಇದ್ದು ಇದು ತೂಕ ಹೆಚ್ಚಾಗುವುದಕ್ಕೆ ಮುಖ್ಯ ಕಾರಣವಾಗುತ್ತದೆ. ಹಾಗಾಗಿ ಮಧುಮೇಹ ಇರುವವರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು, ಜೇನುತುಪ್ಪವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕೆಂದು ತಜ್ಞರು ಸಲಹೆ ನೀಡುತ್ತಾರೆ.

ಮಧುಮೇಹಿಗಳಿಗೆ ಜೇನುತುಪ್ಪ ಒಳ್ಳೆಯದಲ್ಲ ಎನ್ನುವುದಕ್ಕೆ ಕಾರಣವೇನು?

ಜೇನುತುಪ್ಪವು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದರೂ ಕೂಡ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಒಂದು ಚಮಚ ಜೇನುತುಪ್ಪದಲ್ಲಿ 17 ಗ್ರಾಂ ಕಾರ್ಬೋಹೈಡ್ರೇಟ್‌ಗಳಿವೆ. ಜೇನುತುಪ್ಪವನ್ನು ಇತರ ಕಾರ್ಬೋಹೈಡ್ರೇಟ್‌ಗಳೊಂದಿಗೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ಕ್ರಮೇಣ ಹೆಚ್ಚಾಗುತ್ತದೆ. ಡಬ್ಲ್ಯೂಎಚ್ ಓ ಪ್ರಕಾರ, ಒಂದು ಟೀ ಚಮಚ ಜೇನುತುಪ್ಪವು ಸುಮಾರು 64 ಕ್ಯಾಲೋರಿ, 17 ಗ್ರಾಂ ಸಕ್ಕರೆ, 17 ಗ್ರಾಂ ಕಾರ್ಬೋಹೈಡ್ರೇಟ್‌, 0.06 ಗ್ರಾಂ ಪ್ರೋಟೀನ್ ಮತ್ತು 0.04 ಗ್ರಾಂ ಫೈಬರ್ ಅನ್ನು ಹೊಂದಿರುತ್ತದೆ. ಜೇನುತುಪ್ಪವು ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಸತು, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ಆದರೆ ಅವುಗಳ ಪ್ರಮಾಣವು ತುಂಬಾ ಕಡಿಮೆ ಇರುತ್ತದೆ. ಆರೋಗ್ಯವಂತ ವ್ಯಕ್ತಿಗಳಿಗೆ, ಜೇನುತುಪ್ಪವನ್ನು ಸೇವಿಸುವುದು ಪ್ರಯೋಜನಕಾರಿಯಾಗಿದೆ. ಆದರೆ ಮಧುಮೇಹ ರೋಗಿಗಳು ಜೇನುತುಪ್ಪವನ್ನು ತಪ್ಪಿಸಬೇಕು. ಇದು ಸಕ್ಕರೆಯಂತೆಯೇ ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ
Image
ಪ್ರತಿದಿನ ಕಾಫಿ ಕುಡಿಯುವುದರಿಂದ ಏನೆಲ್ಲಾ ಆಗುತ್ತೆ ಗೊತ್ತಾ?
Image
ಹೃದಯಾಘಾತಕ್ಕೂ ಮುನ್ನ ಚರ್ಮದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಂತೆ
Image
ಈ ಆಯುರ್ವೇದ ಅಭ್ಯಾಸಗಳನ್ನು ಅನುಸರಿಸಿದರೆ ಲಿವರ್ ಆರೋಗ್ಯವಾಗಿರುತ್ತೆ!
Image
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ

ಇದನ್ನೂ ಓದಿ: Childhood Diabetes Alert: ಮಕ್ಕಳಲ್ಲಿ ಮಧುಮೇಹ ಬರದಂತೆ ತಡೆಯಲು ಈ ಸಲಹೆಗಳನ್ನು ಪಾಲಿಸಿ

ನಿಮ್ಮ ದಿನಚರಿ ಹೀಗಿರಲಿ;

ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುವ ಆಹಾರ ಮತ್ತು ಸಕ್ಕರೆ ಪಾನೀಯಗಳಿಂದ ದೂರವಿರಬೇಕು. ಮಾತ್ರವಲ್ಲ ಪ್ರತಿದಿನ ವ್ಯಾಯಾಮ ಮಾಡಬೇಕು. ಜೊತೆಗೆ ಸಮಯಕ್ಕೆ ಸರಿಯಾಗಿ ಮಲಗಬೇಕು. ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು. ಇದೆಲ್ಲದರ ಜೊತೆಗೆ ಪ್ರತಿದಿನ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡಬೇಕಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ