AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಮಾಲಿನ್ಯ ಮತ್ತು ಬೆಳಗಿನ ಮಂಜು ಎರಡೂ ಕೂಡ ಆರೋಗ್ಯಕ್ಕೆ ಅಪಾಯಕಾರಿ ಎಂದು ತಜ್ಞರು ಹೇಳುತ್ತಾರೆ. ಇದು ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬಿರುತ್ತದೆಯಾದರೂ ಹುಟ್ಟಲಿರುವ ಶಿಶುಗಳ ಮೇಲೆ ಹೆಚ್ಚಿನ ಹಾನಿಯನ್ನು ಮಾಡಬಹುದಾಗಿದೆ. ಹೌದು, ಇದು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಗರ್ಭಿಣಿಯರು ಆದಷ್ಟು ಮಾಲಿನ್ಯವನ್ನು ತಪ್ಪಿಸುವುದು ಒಳ್ಳೆಯದು ಎನ್ನುತ್ತಾರೆ. ಹಾಗಾದರೆ ಗರ್ಭಿಣಿಯರು ತಮ್ಮನ್ನು ತಾವು ರಕ್ಸಿಸಿಕೊಳ್ಳಲು ಏನು ಮಾಡಬಹುದು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ
Environmental Toxins Baby Brain
ಪ್ರೀತಿ ಭಟ್​, ಗುಣವಂತೆ
|

Updated on: Dec 19, 2025 | 3:35 PM

Share

ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಏರುತ್ತಿದೆ. ಅದರ ಜೊತೆ ಚಳಿಯೂ ಹೆಚ್ಚಾಗುತ್ತಿದ್ದು ಅನೇಕ ಪ್ರದೇಶಗಳಲ್ಲಿ ಮಂಜು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ನಿಮಗೆ ಗೊತ್ತಾ, ಈ ಮಾಲಿನ್ಯ (Air Pollution) ಮತ್ತು ಮಂಜು (Smog) ಗಂಭೀರ ಆರೋಗ್ಯದ ಅಪಾಯವನ್ನುಂಟುಮಾಡುತ್ತದೆ. ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ, ಅದರಲ್ಲಿಯೂ ಇದು ಹುಟ್ಟಲಿರುವ ಶಿಶುಗಳಿಗೆ ಹಾನಿ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ಹೌದು, ಇಂತಹ ವಿಷಯಗಳ ಬಗ್ಗೆ ಕೆಲವರು ಗಮನ ಹರಿಸದಿರಬಹುದು ಆದರೆ ಇದು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತದೆ. ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಗರ್ಭಿಣಿಯರು ಆದಷ್ಟು ಮಾಲಿನ್ಯ ಹೆಚ್ಚಾಗಿರುವ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸುವುದು ಒಳ್ಳೆಯದು ಎನ್ನುತ್ತಾರೆ. ಹಾಗಾದರೆ ಗರ್ಭಿಣಿಯರು ತಮ್ಮನ್ನು ತಾವು ರಕ್ಸಿಸಿಕೊಳ್ಳಲು ಏನು ಮಾಡಬಹುದು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯವಾಗಿ ಮಾಲಿನ್ಯ ಮತ್ತು ಹೊಗೆ ಎರಡೂ ಕೂಡ ಗರ್ಭದಲ್ಲಿರುವ ಶಿಶುಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಸಂಶೋಧನೆ ತಿಳಿಸಿದೆ. ಮಾಲಿನ್ಯವು PM2.5 ಮತ್ತು PM10 ನಂತಹ ಕಣಗಳನ್ನು ಹೊಂದಿರುತ್ತದೆ, ಇದರಲ್ಲಿ ಸಾರಜನಕ ಡೈಆಕ್ಸೈಡ್ ಮತ್ತು ಕಾರ್ಬನ್ ಮಾನಾಕ್ಸೈಡ್ ಸೇರಿವೆ. ಈ ಕಣಗಳು ಉಸಿರಾಟದ ಮೂಲಕ ಶ್ವಾಸಕೋಶವನ್ನು ಪ್ರವೇಶಿಸುತ್ತವೆ. ಕಲುಷಿತ ಪ್ರದೇಶಗಳಲ್ಲಿ ವಾಸಿಸುವ ಗರ್ಭಿಣಿಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತಾರೆ. ಕಲುಷಿತ ಕಣಗಳು ರಕ್ತದಲ್ಲಿ ಕರಗುವ ಮೂಲಕ ಮಗುವಿನ ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಸಿಟಿ ಜನರೇ ಜೋಪಾನ! ನಿಮ್ಮ ಜೀವಕ್ಕೆ ಕುತ್ತಾಗಬಹುದು ವಾಯುಮಾಲಿನ್ಯ

ಮಾಲಿನ್ಯವು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ದೆಹಲಿಯ ಏಮ್ಸ್‌ನ ಮಕ್ಕಳ ಚಿಕಿತ್ಸಾ ವಿಭಾಗದ ಡಾ. ಹಿಮಾಂಶು ಭದಾನಿ ಅವರು ಹೇಳುವ ಪ್ರಕಾರ, ಮಾಲಿನ್ಯ, ಹೊಗೆ ಅಥವಾ ಮಂಜಿಗೆ ಹೆಚ್ಚು ಒಡ್ಡಿಕೊಳ್ಳುವುದರಿಂದ ಗರ್ಭಿಣಿಯಿಂದ ಶಿಶುಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗುತ್ತದೆ ಇದನ್ನು ಹೈಪೋಕ್ಸಿಯಾ ಎಂದು ಕರೆಯಲಾಗುತ್ತದೆ. ಈ ರೀತಿಯಾದಾಗ ಮೆದುಳಿನ ಕೋಶಗಳ ಬೆಳವಣಿಗೆಗೆ ಅಡ್ಡಿಯಾಗುತ್ತದೆ. ಅಷ್ಟೇಅಲ್ಲ, ಇದು ಮೆದುಳಿನಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡಕ್ಕೆ ಕಾರಣವಾಗಬಹುದು, ಬಳಿಕ ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಮಗು ಬೆಳೆದಂತೆ ಅವರ ಕಲಿಕಾ ಸಾಮರ್ಥ್ಯ ಕಡಿಮೆಯಾಗುವ ಅಪಾಯವನ್ನು ಹೆಚ್ಚಿಸಬಹುದು. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಕೂಡ ದುರ್ಬಲಗೊಳಿಸುತ್ತದೆ, ಅಸ್ತಮಾ ಮತ್ತು ಉಸಿರಾಟದ ಕಾಯಿಲೆಗಳ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಮಾಲಿನ್ಯ ಮತ್ತು ಬೆಳಗಿನ ಮಂಜು ಎರಡೂ ಕೂಡ ಅಪಾಯಕಾರಿ ಏಕೆಂದರೆ ಹೊಗೆಯು ಉಸಿರಾಟದ ಮೂಲಕ ಶ್ವಾಸಕೋಶಕ್ಕೆ ಪ್ರವೇಶಿಸುವ ಅನೇಕ ವಿಷಕಾರಿ ಕಣಗಳನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಗರ್ಭಿಣಿಯರು ಮಾಲಿನ್ಯದಿಂದ ರಕ್ಷಿಸಿಕೊಳ್ಳುವುದು ಹೇಗೆ?

  • ಹೊರಗಡೆ ಹೋಗುವಾಗ ಮಾಸ್ಕ್ ಧರಿಸಿ
  • ಮನೆಯಲ್ಲಿ ಗಾಳಿ ಶುದ್ಧೀಕರಣ ಮಾಡುವ ಯಂತ್ರವನ್ನು ಬಳಸಿ
  • ಬೆಳಿಗ್ಗೆ ಮತ್ತು ಸಂಜೆ ಹೊರಗೆ ಹೋಗುವುದನ್ನು ಆದಷ್ಟು ತಪ್ಪಿಸಿ
  • ವೈದ್ಯರು ಸೂಚಿಸಿದ ಆಹಾರ ಪದ್ದತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ