AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Lose Weight: ನೋಡಲು ತುಂಬಾ ದಪ್ಪಗಿದ್ದೀರಾ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು

ಪ್ರತಿನಿತ್ಯವೂ ಕೂಡಾ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ. ವ್ಯಾಯಾಮದಿಂದ ಅದೆಷ್ಟೋ ಆರೋಗ್ಯ ಸಮಸ್ಯೆಗಳು ವಾಸಿಯಾಗುತ್ತದೆ.

Women Lose Weight: ನೋಡಲು ತುಂಬಾ ದಪ್ಪಗಿದ್ದೀರಾ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು
ತೂಕ ಇಳಿಸಿಕೊಳ್ಳುವುದು ಹೇಗೆ?
TV9 Web
| Edited By: |

Updated on: Jul 03, 2021 | 8:00 AM

Share

ತೂಕ ಹೆಚ್ಚಾಗಿದೆ ಎಂಬುದೇ ಅದೆಷ್ಟೋ ಜನರ ಕೊರಗು. ಅದರಲ್ಲಿಯೂ ಮಹಿಳೆಯರಿಗೆ ಕೊಂಚ ಜಾಸ್ತಿಯೇ ಚಿಂತೆ ಎಂದರೆ ತಪ್ಪಾಗಲಾರದು. ಮಹಿಳೆಯರು ಹೆರಿಗೆ ಆದಮೇಲೆ ಸಹಜವಾಗಿ ದಪ್ಪಗಾಗಿಬಿಡುತ್ತಾರೆ. ಮಕ್ಕಳಾದ ಮೇಲೆ ಮಹಿಳೆಗೆ ಆಕೆಯ ಕುರಿತಾಗಿ ಕಾಳಜಿವಹಿಸಲು ಸಮಯ ಸಿಗುವುದಿಲ್ಲ. ಹೀಗಿದ್ದಾಗ ಕೊಲೆಸ್ಟ್ರಾಲ್​ ಮಟ್ಟ ಹೆಚ್ಚಾಗುತ್ತದೆ. ಇದರಿಂದ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಸುಲಭದಲ್ಲಿ ತೂಕ ಇಳಿಸಿಕೊಳ್ಳಬಹುದಾದ ಕೆಲವು ಟಿಪ್ಸ್​ಗಳು ಹೀಗಿವೆ.

ತೂಕ ಹೆಚ್ಚಾದರೆ ನೋಡಲು ಸುಂದರವಾಗಿ ಕೊಣಿಸುವುದಿಲ್ಲ ಎಂಬುದು ಮಹಿಳೆಯ ಚಿಂತೆ. ಹೀಗಿರುವಾಗ ಅದೆಷ್ಟೋ ಔಷಧಗಳನ್ನು ಮಾಡಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಗಿಡಮೂಲಿಕೆಯಿಂದ ತಯಾರಿಸಿ ಚಹ ಸೇವಿಸಿ. ಇದರಿಂದ ನಿಮ್ಮ ದೇಹದಲ್ಲಿನ​ ಕೊಬ್ಬಿನಾಂಶವನ್ನು ಕರಗಿಸಿಕೊಳ್ಳಲು ಸಹಾಯವಾಗುತ್ತದೆ. ಆದರೆ ಆದಷ್ಟು ಸಕ್ಕರೆ ಸೇರಿಸದ ಚಹವನ್ನು ಸೇವಿಸಿ. ಇದು ನಿಮ್ಮ ಆರೋಗ್ಯಕ್ಕೆ ಉತ್ತಮ ಫಲಿತಾಂಶವನ್ನು ನೀಡುತ್ತದೆ.

ಬಾದಾಮಿ ಮತ್ತು ಒಣದ್ರಾಕ್ಷಿ ಬಾದಾಮಿ, ಒಣದ್ರಾಕ್ಷಿಯನ್ನು ಸೇವಿಸಿ. ಇದು ನಿಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. 10 ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಸೇರಿಸಿ ಪುಡಿ ಮಾಡಿ ತಯಾರಿಸಿಕೊಳ್ಳಿ. ಒಂದು ಗ್ಲಾಸ್​ ಹಾಲಿನೊಂದಿಗೆ ಒಂದು ಚಮಚ ಪುಡಿಯನ್ನು ಮಿಕ್ಸ್​ ಮಾಡಿ ಸೇವಿಸಿ.

ದಾಲ್ಚಿನ್ನಿ ಮತ್ತು ಲವಂಗ ದಾಲ್ಚಿನ್ನಿ ಮತ್ತು ಲವಂಗ ಕೊಬ್ಬಿನಾಂಶವನ್ನು ಕರಗಿಸಲು ಸಹಾಯ ಮಾಡುತ್ತದೆ. ಒಂದು ಲೋಟ ನೀರಿಗೆ 2ರಿಂದ 3 ಲವಂಗ ಸೇರಿಸಿ ಮತ್ತು ದಾಲ್ಚಿನ್ನಿಯನ್ನು ಸೇರಿಸಿ ಕುದಿಸಿ. ನಂತರ ಕುದಿಸಿದ ನೀರನ್ನು ಸೇವಿಸುವುದರ ಮೂಲಕ ಬೊಜ್ಜನ್ನು ಕರಗಿಸಿಕೊಳ್ಳಬಹುದು. ಹಾಗೆಯೇ ಒಂದು ಲೋಟ ಹಾಲಿಗೆ ಒಂದು ಚಮಚ ಜಾಯಿಕಾಯಿ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಪ್ರತಿನಿತ್ಯ ವ್ಯಾಯಾಮ ಪ್ರತಿನಿತ್ಯ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ. ದೈಹಿಕವಾಗಿ ಚಟುವಟಿಕೆಯಿಂದ ಕೂಡಿರಲು ಇದು ಸಹಾಯ ಮಾಡುತ್ತದೆ. ಇದು ಹಾರ್ಮೋನು ಸಮಸ್ಯೆಯಿಂದಲೂ ಪರಿಹಾರ ನೀಡುತ್ತದೆ. ಹಾಗಿರುವಾಗ ಪ್ರತಿನಿತ್ಯವೂ ಕೂಡಾ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ. ವ್ಯಾಯಾಮದಿಂದ ಅದೆಷ್ಟೋ ಆರೋಗ್ಯ ಸಮಸ್ಯೆಗಳು ವಾಸಿಯಾಗುತ್ತದೆ. ಜತೆಗೆ ದೇಹದ ತೂಕವನ್ನು ಇಳಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ವ್ಯಾಯಾಮದ ಜತೆಗೆ ಬೆಳಗ್ಗೆ ಜಾಗಿಂಗ್​ ಮತ್ತು ಸಂಜೆ ವಾಕಿಂಗ್​ ಹೋಗುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ: 

Weight loss Tips: ತೂಕವನ್ನು ಇಳಿಸಲು ದೇಹದಂಡನೆ ಮಾಡುವುದನ್ನು ಬಿಡಿ; ಈ ಸರಳ ಆಹಾರ ಪದ್ಧತಿಯನ್ನು ಅನುಸರಿಸಿ

ಬೊಜ್ಜು ಮತ್ತು ಅಧಿಕ ತೂಕವಿರುವವರು ತೀವ್ರ ಬ್ಯಾಕ್ಟೀರಿಯಾ ಸೋಂಕಿನಿಂದ ಸಾವಿಗೀಡಾಗಿದ್ದು ಕಡಿಮೆ: ವರದಿ

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!