Health Tips: ಮಾನ್ಸೂನ್​ನಲ್ಲಿ ನಿಮ್ಮ ಆರೋಗ್ಯವನ್ನು ಹೇಗೆ ರಕ್ಷಿಸಿಕೊಳ್ಳಬಹುದು? ಇಲ್ಲಿದೆ ಮಾಹಿತಿ

ಮಾನ್ಸೂನ್​ ಸಮಯದಲ್ಲಿ ಬಿಸಿ ಆಹಾರವನ್ನು ಸೇವಿಸುವುದು ಉತ್ತಮ. ಇದು ನಿಮ್ಮ ದೇಹವನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ. ಆದಷ್ಟು ಶುದ್ಧೀಕರಿಸಿದ ನೀರನ್ನು ಸೇವಿಸಿ.

Health Tips: ಮಾನ್ಸೂನ್​ನಲ್ಲಿ ನಿಮ್ಮ ಆರೋಗ್ಯವನ್ನು ಹೇಗೆ ರಕ್ಷಿಸಿಕೊಳ್ಳಬಹುದು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Skanda

Updated on: Jul 03, 2021 | 8:36 AM

ಮಳೆಗಾಲದ ಸಮಯದಲ್ಲಂತೂ ನಿಮ್ಮ ಆರೋಗ್ಯವನ್ನು ಎಷ್ಟು ಕಾಪಾಡಿಕೊಂಡರೂ ಸಾಲದು. ಬ್ಯಾಕ್ಟೀರಿಯಾಗಳು ಮಳೆಗಾಲದ ಸಮಯದಲ್ಲಿ ಹರಡುವುದು ಹೆಚ್ಚು. ಅದರಲ್ಲಿಯೂ ಶೀತ, ನೆಗಡಿ ಜ್ವರದಂತಹ ಖಾಯಿಲೆಗಳು ಅತಿ ವೇಗವಾಗಿ ಹರಡುತ್ತದೆ. ಹಾಗಿದ್ದಾಗ ನಿಮ್ಮ ಆರೋಗ್ಯವನ್ನು ಸುರಕ್ಷಿತವಾಗಿ ರಕ್ಷಿಸಿಕೊಳ್ಳಲು ಕೆಲವು ಸಲಹೆಗಳಿವೆ. ಅವುಗಳ ಕುರಿತಾಗಿ ತಿಳಿಯೋಣ.

ಬಿಸಿ ಆಹಾರವನ್ನು ಮಳೆಗಾಲದಲ್ಲಿ ಸೇವಿಸುವುದು ಉತ್ತಮ. ಇದು ನಿಮ್ಮ ದೇಹವನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ. ಆದಷ್ಟು ಶುದ್ಧೀಕರಿಸಿದ ನೀರನ್ನು ಸೇವಿಸಿ. ಅದಕ್ಕೂ ಮೊದಲು ಮುಖ್ಯವಾಗಿ ತಿಳಿಯಬೇಕಾದ ಸಂಗತಿಯೆಂದರೆ ಆಹಾರವನ್ನು ಸೇವಿಸುವ ಮೊದಲು ಕೈಕಾಲುಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ.

ಆಹಾರ ಮತ್ತು ನೀರಿನಿಂದ ಹರಡುವ ರೋಗಗಳು ಸರಿಯಾದ ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ ಟೈಫಾಯಿಡ್​, ಕಾಲರಾ ಮತ್ತು ಅತಿಸಾರದಂತಹ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಶುದ್ಧ ನೀರು ಅಥವಾ ಕಲುಷಿತ ನೀರು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗಿರುವಾಗ ಮಾನ್ಸೂನ್​ ಸಮಯದಲ್ಲಿ ನಿಮ್ಮ ಆರೋಗ್ಯದ ಕುರಿತಾಗಿ ಹೆಚ್ಚು ಗಮನ ಕೊಡಲೇಬೇಕು.

ಮಲೇರಿಯಾ, ಡೆಂಗ್ಯೂ ಮಳೆಗಾಲದ ಸಮಯದಲ್ಲಿ ನಮ್ಮ ಮನೆಯ ಸುತ್ತಮುತ್ತಲು ನಿಂತ ನೀರಿನಲ್ಲಿ ಸೊಳ್ಳೆಗಳು ಹುಟ್ಟಿಕೊಳ್ಳುತ್ತವೆ. ಇವುಗಳಿಂದ ಮಲೇರಿಯಾ, ಚಿಕನ್​ಗುನಿಯಾ ಹಾಗೂ ಡೆಂಗ್ಯೂನಂತಹ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತವೆ. ಹಾಗಿರುವಾಗ ನಿಮ್ಮ ಮನೆಯ ಸುತ್ತ-ಮುತ್ತಲು ನೀರು ನಿಲ್ಲದಂತೆ ಆದಷ್ಟು ಎಚ್ಚರವಹಿಸಿ. ಮನೆಯ ಹೊರಗಿರುವ ಮಡಿಕೆಗಳಲ್ಲಿ ನೀರು ನಿಂತಿದ್ದರೆ ಅದನ್ನು ತಕ್ಷಣವೇ ಸ್ವಚ್ಛಗೊಳಿಸಿ. ಸಂಜೆಯಾಗುತ್ತಿದ್ದಂತೆಯೇ ಮನೆಯ ಕಿಟಕಿಗಳನ್ನು ಮುಚ್ಚಿ. ಸೊಳ್ಳೆ ಪರದೆಯಂತಹ ಸುರಕ್ಷಿತ ವಸ್ತುಗಳನ್ನು ಬಳಸಿ.

ಆರೋಗ್ಯಕರ ಆಹಾರ ರೋಗಗಳಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಆರೋಗ್ಯಕರ ಆಹಾರವನ್ನು ಸೇವಿಸುವುದು ಮುಖ್ಯ. ಸೇಬು, ಪಪ್ಪಾಯಿ, ಪೇರಲೆ, ದಾಳಿಂಬೆಯಂತಹ ಹಣ್ಣುಗಳನ್ನು ಸೇವಿಸಿ. ಶುಂಠಿ, ಏಲಕ್ಕಿ, ದಾಲ್ಚಿನ್ನಿ, ತುಳಸಿಯಿಂದ ತಯಾರಿಸಿದ ಗಿಡಮೂಲಿಕೆ ಚಹವನ್ನು ಸೇವಿಸಿ. ಕೊವಿಡ್​19 ಸಮಯದಲ್ಲಿ ಆದಷ್ಟು ಹೊರಗಡೆ ತಿರುಗಾಡುವುದನ್ನು ತಪ್ಪಿಸಿ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಹೆಚ್ಚು ವ್ಯಾಯಾಮ ಮತ್ತು ಧ್ಯಾನದಲ್ಲಿ ತೊಡಗಿಕೊಳ್ಳಿ. ಇವುಗಳಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

Health Tips: ಉರಿಯೂತ ಸಮಸ್ಯೆಯನ್ನು ಆಹಾರದಿಂದ ಸೋಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Health Tips: ಅಧಿಕ ಕೊಲೆಸ್ಟ್ರಾಲ್​ ಆರೋಗ್ಯಕ್ಕೆ ಅಪಾಯಕಾರಿ; ಕೊಲೆಸ್ಟ್ರಾಲ್​ ಹೆಚ್ಚಿಸುವ ಕೆಲವು ಆಹಾರ ಪದಾರ್ಥಗಳು ಯಾವುವು? ಇಲ್ಲಿದೆ ವಿವರ 

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ