AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಯಾ ಸೀಡ್ಸ್ ಸೇವನೆಯಿಂದ ಮೂಲವ್ಯಾಧಿಯನ್ನು ಕಡಿಮೆ ಮಾಡಬಹುದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಚಿಯಾ ಸೀಡ್ಸ್ ಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ನೆನೆಸಿದ ಚಿಯಾ ಬೀಜಗಳನ್ನು ಸೇವಿಸುವುದರಿಂದ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕುಳಿತುಕೊಂಡು ಮಾಡುವ ಕಚೇರಿ ಕೆಲಸಗಳು ಹೆಚ್ಚಾಗುತ್ತಿದ್ದು ಇದು ನಾನಾ ರೀತಿಯ ರೋಗಗಳನ್ನು ಆಹ್ವಾನಿಸುತ್ತದೆ. ಹಾಗಾಗಿ ಇದರಿಂದ ಮುಕ್ತಿ ಪಡೆಯಲು ಮತ್ತು ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಲು ಕೇವಲ ಚಿಯಾ ಬೀಜಗಳನ್ನು ಬಳಕೆ ಮಾಡಬಹದು. ಈ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ.

ಚಿಯಾ ಸೀಡ್ಸ್ ಸೇವನೆಯಿಂದ ಮೂಲವ್ಯಾಧಿಯನ್ನು ಕಡಿಮೆ ಮಾಡಬಹುದೇ... ಇಲ್ಲಿದೆ ತಜ್ಞರ ಅಭಿಪ್ರಾಯ
Chia Seeds
ಪ್ರೀತಿ ಭಟ್​, ಗುಣವಂತೆ
|

Updated on: Dec 10, 2025 | 2:25 PM

Share

ಚಿಯಾ ಬೀಜಗಳ (Chia Seeds) ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಅದರಲ್ಲಿಯೂ ವಿಶೇಷವಾಗಿ, ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಪ್ರತಿನಿತ್ಯ ಬೆಳಿಗ್ಗೆ ನೆನೆಸಿಟ್ಟ ಚಿಯಾ ಬೀಜಗಳನ್ನು ಸೇವನೆ ಮಾಡುವುದರಿಂದ ಆರೋಗ್ಯವಾಗಿರಬಹುದು ಅಷ್ಟೇ ಅಲ್ಲ, ಅನಾರೋಗ್ಯದಿಂದ ದೂರವಿರಬಹುದು. ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿಯಲ್ಲಿ ಗಮನಾರ್ಹ ಬದಲಾವಣೆಗಳಾಗುತ್ತಿದ್ದು ಕುಳಿತುಕೊಂಡು ಮಾಡುವ ಕೆಲಸ ಹೆಚ್ಚಾಗಿದೆ. ಈ ರೀತಿಯ ಅಭ್ಯಾಸ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಈ ರೀತಿಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಏನು ಮಾಡಬೇಕು, ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯವಾಗಿ ಈಗಿನ ದಿನಮಾನದಲ್ಲಿ ಕುಳಿತು ಮಾಡುವ ಕಚೇರಿ ಕೆಲಸಗಳೇ ಹೆಚ್ಚಾಗುತ್ತಿದ್ದು, ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗೆ ದೀರ್ಘಕಾಲ ಕುಳಿತುಕೊಳ್ಳುವುದರಿಂದ ಮೂಲವ್ಯಾಧಿ ಸಮಸ್ಯೆಗಳು ಉಂಟಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಒಮ್ಮೆ ಮೂಲವ್ಯಾಧಿ ಪ್ರಾರಂಭವಾದರೆ, ಅವು ಸುಲಭವಾಗಿ ಕಡಿಮೆಯಾಗುವುದಿಲ್ಲ. ಬಹುತೇಕ ಜನರು ನೇರವಾಗಿ ಶಸ್ತ್ರಚಿಕಿತ್ಸೆಗೆ ಹೋಗುತ್ತಾರೆ. ಈ ರೀತಿ ಸಮಸ್ಯೆ ಬರಬಾರದು ಅಥವಾ ನೀವು ಈಗಾಗಲೇ ಮಲಬದ್ಧತೆಯಂತಹ ಸಮಸ್ಯೆಗಳಿಂದ ಬಳಲುತ್ತಿದ್ದರೆ, ಈಗಲೇ ಅವುಗಳಿಂದ ಪರಿಹಾರ ಕಂಡುಕೊಳ್ಳುವುದು ಬಹಳ ಒಳ್ಳೆಯದು. ಇಲ್ಲವಾದಲ್ಲಿ ಇದು ನಿಮ್ಮ ಕೈ ಮೀರಿ ಹೋಗುತ್ತದೆ. ಇವುಗಳಿಗೆ ವಿವಿಧ ರೀತಿಯ ಔಷಧಿ ಮಾಡುವ ಬದಲು ಚಿಯಾ ಸೀಡ್ಸ್ ಬಳಕೆ ಮಾಡಬಹುದು.

ಇದನ್ನೂ ಓದಿ: ಈ ಪಾನೀಯವನ್ನು ಕುಡಿಯುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆ 5 ನಿಮಿಷಗಳಲ್ಲಿ ಕಡಿಮೆಯಾಗುತ್ತೆ

ಚಿಯಾ ಸೀಡ್ಸ್ ಪ್ರಯೋಜನ:

ಪ್ರತಿನಿತ್ಯ ಚಿಯಾ ಸೀಡ್ಸ್ ಗಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದು ನಿಮ್ಮ ಮಲಬದ್ಧತೆ ಸಮಸ್ಯೆಯನ್ನು ಸುಲಭವಾಗಿ ಕಡಿಮೆ ಮಾಡುತ್ತದೆ. ಅಷ್ಟು ಮಾತ್ರವಲ್ಲ, ನೀವು ನಿಯಮಿತವಾಗಿ ಚಿಯಾ ಸೀಡ್ಸ್ ಗಳನ್ನು ಸೇವಿಸುತ್ತಿದ್ದರೆ, ಎಂದಿಗೂ ಜೀರ್ಣಕಾರಿ ಅಸ್ವಸ್ಥತೆಗಳಿಂದ ಬಳಲುವ ಅಗತ್ಯವಿರುವುದಿಲ್ಲ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಚಿಯಾ ಬೀಜದ ನೀರನ್ನು ಕುಡಿಯುವುದರಿಂದ ಇತರ ಆರೋಗ್ಯ ಸಮಸ್ಯೆಗಳಿಂದಲೂ ಮುಕ್ತಿ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಇದನ್ನು ಅಗತ್ಯಕ್ಕಿಂತ ಹೆಚ್ಚಾಗಿ ಸೇವಿಸಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ