AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಿನ್ಯ ಸಾವಿಗೆ ಹೇಗೆ ಕಾರಣವಾಗುತ್ತದೆ? ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಹದಗೆಟ್ಟಿರಲು ಕಾರಣವೇನು?

ವಾಯುಮಾಲಿನ್ಯದಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುತ್ತದೆ. ಜೊತೆಗೆ ವಾಯುಮಾಲಿನ್ಯ ಶ್ವಾಸಕೋಶವನ್ನು ಹಾನಿಗೊಳಿಸುವುದಲ್ಲದೆ ನಿಧಾನವಾಗಿ ದೇಹವನ್ನು ಹದಗೆಡಿಸುತ್ತದೆ. ಅದಕ್ಕಾಗಿಯೇ ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯಲಾಗುತ್ತದೆ. ವಾಯುಮಾಲಿನ್ಯದಿಂದಾಗಿ ಪ್ರತಿವರ್ಷ ಜನರು ಸಾಯುತ್ತಿದ್ದಾರೆ. ಅದರಲ್ಲಿಯೂ ಬೆಂಗಳೂರಿನಿಂದ ಆಘಾತಕಾರಿ ಅಂಕಿ ಅಂಶವೊಂದು ಹೊರಬಂದಿದ್ದು ಇಲ್ಲಿ ಮೂರನೇ ಒಂದು ಭಾಗದಷ್ಟು ಸಾವುಗಳು ವಾಯುಮಾಲಿನ್ಯಕ್ಕೆ ಕಾರಣವಾಗಿವೆ ಎಂದು ಅಧ್ಯಯನ ಹೇಳಿದೆ. ಇಲ್ಲಿನ ನಗರಗಳಲ್ಲಿ ವಾಸಿಸುವ ಜನರ ಜೀವಿತಾವಧಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಅದಲ್ಲದೆ ವಿಷಕಾರಿ ಗಾಳಿಯಿಂದಾಗಿ ಜನರು ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಮಾಲಿನ್ಯ ಸಾವಿಗೆ ಹೇಗೆ ಕಾರಣವಾಗುತ್ತದೆ? ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಹದಗೆಟ್ಟಿರಲು ಕಾರಣವೇನು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 08, 2024 | 5:12 PM

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್, ಹೃದಯಾಘಾತದಂತಹ ರೋಗಗಳು ಬಹಳ ಸಾಮಾನ್ಯವಾಗಿದೆ. ಆದರೆ ಇವೆಲ್ಲವುಗಳ ಹೊರತಾಗಿ ನಿಧಾನವಾಗಿ ನಮ್ಮ ಆರೋಗ್ಯ ಹಾಳು ಮಾಡಿ, ಸಾವಿಗೂ ಕಾರಣವಾಗುವ ಸಮಸ್ಯೆಗಳಿವೆ, ಅದರಲ್ಲಿ ವಾಯುಮಾಲಿನ್ಯವು ಒಂದು. ಇವುಗಳಿಂದ ಅನೇಕ ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುತ್ತದೆ. ಜೊತೆಗೆ ವಾಯುಮಾಲಿನ್ಯ ಶ್ವಾಸಕೋಶವನ್ನು ಹಾನಿಗೊಳಿಸುವುದಲ್ಲದೆ ನಿಧಾನವಾಗಿ ದೇಹವನ್ನು ಹದಗೆಡಿಸುತ್ತದೆ. ಅದಕ್ಕಾಗಿಯೇ ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯಲಾಗುತ್ತದೆ. ವಾಯುಮಾಲಿನ್ಯದಿಂದಾಗಿ ಪ್ರತಿವರ್ಷ ಜನರು ಸಾಯುತ್ತಿದ್ದಾರೆ. ಅದರಲ್ಲಿಯೂ ಬೆಂಗಳೂರಿನಿಂದ ಆಘಾತಕಾರಿ ಅಂಕಿ ಅಂಶವೊಂದು ಹೊರಬಂದಿದ್ದು ಇಲ್ಲಿ ಮೂರನೇ ಒಂದು ಭಾಗದಷ್ಟು ಸಾವುಗಳು ವಾಯುಮಾಲಿನ್ಯಕ್ಕೆ ಕಾರಣವಾಗಿವೆ ಎಂದು ಅಧ್ಯಯನ ಹೇಳಿದೆ. ಇಲ್ಲಿನ ನಗರಗಳಲ್ಲಿ ವಾಸಿಸುವ ಜನರ ಜೀವಿತಾವಧಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಅದಲ್ಲದೆ ವಿಷಕಾರಿ ಗಾಳಿಯಿಂದಾಗಿ ಜನರು ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ವಾಯುಮಾಲಿನ್ಯ, ಜನರ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತಿದೆ. ಸಾಮಾನ್ಯವಾಗಿ ಬೆಂಗಳೂರಿನಲ್ಲಿ ವಾಸಿಸುವ ಹೆಚ್ಚಿನ ಜನ ತಮ್ಮ ದಿನವನ್ನು ಬೆಳಿಗ್ಗೆ ವಾಕಿಂಗ್ ಅಥವಾ ಜಿಮ್ ನೊಂದಿಗೆ ಪ್ರಾರಂಭಿಸುತ್ತಾರೆ ಜೊತೆಗೆ ಡಯಟ್ ಆಹಾರವನ್ನು ಸೇವನೆ ಮಾಡುತ್ತಾರೆ. ಆದರೆ ಇದೆಲ್ಲದರ ಹೊರತಾಗಿಯೂ, ಅವರು ದಿನನಿತ್ಯ ಮಾಲಿನ್ಯದಿಂದ ತುಂಬಿದ ಗಾಳಿಯನ್ನು ಉಸಿರಾಡುತ್ತಾರೆ, ಇದು ನಿಧಾನವಾಗಿ ಅವರ ಶ್ವಾಸಕೋಶವನ್ನು ಹಾಳುಮಾಡುತ್ತಿದೆ. ಇಲ್ಲಿನ 35 ಪ್ರತಿಶತಕ್ಕೂ ಹೆಚ್ಚು ಜನರು ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ, ಇದು ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಯಾಗಿದೆ.

ಮಾಲಿನ್ಯ ಸಾವಿಗೆ ಹೇಗೆ ಕಾರಣವಾಗುತ್ತದೆ?

ಹೃದಯಾಘಾತ ಮತ್ತು ಕ್ಯಾನ್ಸರ್ ನಂತರ, ಶ್ವಾಸಕೋಶದ ಕಾಯಿಲೆ ಅಂದರೆ ಸಿಒಪಿಡಿ (COPD) ಸಮಸ್ಯೆಯೂ ದೇಶದಲ್ಲಿ ಹೆಚ್ಚಾಗುತ್ತಿದ್ದು, ಜನರ ಸಾವಿಗೆ ಕಾರಣವಾಗುತ್ತಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ವಾಸಿಸುವ ಪ್ರತಿ ನೂರು ಜನರಲ್ಲಿ 30 ಜನರು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ.

ಸಿಒಪಿಡಿ ಒಂದು ರೀತಿಯ ಶ್ವಾಸಕೋಶದ ಕಾಯಿಲೆಯಾಗಿದ್ದು, ಇದರಿಂದ ಶ್ವಾಸಕೋಶದ ಹಲವಾರು ಭಾಗಗಳು ಹಾನಿಗೊಳಗಾಗುತ್ತವೆ ಎಂದು ದೆಹಲಿಯ ಮೂಲ್ಚಂದ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ಡಾ. ಭಗವಾನ್ ಮಂತ್ರಿ ತಿಳಿಸಿದ್ದು ಇದರಿಂದಾಗುವ ಸಮಸ್ಯೆಗಳನ್ನು ವಿವರಿಸಿದ್ದಾರೆ. ದೀರ್ಘಕಾಲ ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಈ ರೋಗವು ಬರುತ್ತದೆ. ಇದರಿಂದ ವ್ಯಕ್ತಿಗೆ ಉಸಿರಾಡಲು ಕಷ್ಟವಾಗುತ್ತದೆ ಜೊತೆಗೆ ನಿರಂತರ ಕೆಮ್ಮು ಇರುತ್ತದೆ ಅದೂ ಅಲ್ಲದೆ ಶ್ವಾಸನಾಳದಲ್ಲಿ ಲೋಳೆ ಸಂಗ್ರಹವಾಗುತ್ತದೆ. ಈ ಕಾರಣದಿಂದಾಗಿ, ಉಸಿರಾಟದ ತೊಂದರೆ, ಎದೆ ಬಿಗಿತ ಪ್ರಾರಂಭವಾಗುತ್ತದೆ. ಉಸಿರಾಟದ ಸಮಸ್ಯೆಯು ದೀರ್ಘಕಾಲದ ವರೆಗೆ ಮುಂದುವರಿದರೆ, ಅದು ಶ್ವಾಸಕೋಶ ಮತ್ತು ಹೃದಯ ಎರಡರ ಮೇಲೂ ಪರಿಣಾಮ ಬೀರುತ್ತದೆ, ಸಾವಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಈ ಸಮಸ್ಯೆ ಇರುವವರಿಗೆ ಎಳನೀರು ವಿಷಕ್ಕೆ ಸಮಾನ

ಸಿಒಪಿಡಿ ಲಕ್ಷಣಗಳು;

– ನಿರಂತರ ಕೆಮ್ಮು

– ಕೆಮ್ಮಿನೊಂದಿಗೆ ಲೋಳೆ ಬರುವುದು

-ಕಡಿಮೆ ಉಸಿರಾಡುವಿಕೆ

– ಎದೆಯಲ್ಲಿ ಉಬ್ಬಸದ ಅನುಭವ

– ಚರ್ಮದಲ್ಲಿ ಜಜ್ಜಿದ ಗಾಯ

– ವಿಪರೀತ ದಣಿದ ಅನುಭವ

– ಆಗಾಗ ಶ್ವಾಸಕೋಶದ ಸೋಂಕುಗಳು

– ತ್ವರಿತ ತೂಕ ನಷ್ಟ

ಸಿಒಪಿಡಿಗೆ ಕಾರಣಗಳೇನು?

– ವಾಯುಮಾಲಿನ್ಯ

– ಧೂಮಪಾನ

– ತಂಬಾಕು ಸೇವನೆ

– ಹೊಗೆ ಅಥವಾ ರಾಸಾಯನಿಕ ಕಾರ್ಖಾನೆಯಲ್ಲಿ ಕೆಲಸ ಮಾಡುವುದು

ಸಿಒಪಿಡಿಗೆ ಚಿಕಿತ್ಸೆ ಏನು?

ಸಿಒಪಿಡಿಗೆ ಸಂಪೂರ್ಣವಾಗಿ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಆದರೆ ಅದನ್ನು ನಿಯಂತ್ರಿಸಬಹುದು. ನಿಮಗೆ ನಿರಂತರ ಕೆಮ್ಮು ಮತ್ತು ಸಿಒಪಿಡಿಯ ಇತರ ರೋಗಲಕ್ಷಣಗಳು ಕಂಡು ಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಬಳಿಕ ಎಕ್ಸ್-ರೇ ಸೇರಿದಂತೆ ಕೆಲವು ಪ್ರಮುಖ ಪರೀಕ್ಷೆಗಳನ್ನು ಮಾಡಬಹುದು. ಈ ರೋಗಲಕ್ಷಣಗಳನ್ನು ಮೊದಲ ಹಂತಗಳಲ್ಲಿ ನಿರ್ಲಕ್ಷಿಸುವುದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು ಮತ್ತು ನಿಮ್ಮ ಜೀವನಕ್ಕೆ ಕಾರಣವಾಗಬಹುದು. ಆದ್ದರಿಂದ, ವಿಳಂಬ ಮಾಡದೆಯೇ ವೈದ್ಯರನ್ನು ಭೇಟಿ ಮಾಡಿ. ನೀವೇ ಔಷಧಿಗಳನ್ನು ತೆಗೆದುಕೊಳ್ಳಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​