Eggs Side Effect: ದಿನಕ್ಕೆ ಎಷ್ಟು ಮೊಟ್ಟೆ ತಿನ್ನುತ್ತೀರಿ? ಒಂದಕ್ಕಿಂತ ಹೆಚ್ಚು ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ?

ಒಂದಕ್ಕಿಂತ ಹೆಚ್ಚು ಮೊಟ್ಟೆಗಳನ್ನು ಸೇವಿಸುವುದರಿಂದ ನೀವು ಅನಾರೋಗ್ಯಕ್ಕೂ ಒಳಗಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾದರೆ ದಿನದಲ್ಲಿ ಎಷ್ಟು ಮೊಟ್ಟೆಗಳನ್ನು ತಿನ್ನಬೇಕು ಗೊತ್ತಾ?  

Eggs Side Effect: ದಿನಕ್ಕೆ ಎಷ್ಟು ಮೊಟ್ಟೆ ತಿನ್ನುತ್ತೀರಿ? ಒಂದಕ್ಕಿಂತ ಹೆಚ್ಚು ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ?
ಮೊಟ್ಟೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2022 | 7:00 AM

ಮೊಟ್ಟೆಗಳು ನಮ್ಮ ಆಹಾರದ ಪ್ರಮುಖ ಭಾಗಗಳಲ್ಲಿ ಒಂದು. ನಮ್ಮ ದೈನಂದಿನ ಉಪಾಹಾರದಲ್ಲಿ ಅಥವಾ ಊಟದಲ್ಲಿ ನಾವು ಮೊಟ್ಟೆಗಳನ್ನು ಸೇವಿಸುತ್ತೇವೆ. ಬೆಳಗಿನ ಉಪಾಹಾರದಲ್ಲಿ ಮೊಟ್ಟೆ ತಿನ್ನುವುದರಿಂದ ಹೆಚ್ಚು ಕಾಲ ಹಸಿವಾಗುವುದಿಲ್ಲ. ಆರೋಗ್ಯ ತಜ್ಞರ ಪ್ರಕಾರ ಪ್ರತಿದಿನ ಮೊಟ್ಟೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಒಂದಕ್ಕಿಂತ ಹೆಚ್ಚು ಮೊಟ್ಟೆಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ​​ಪ್ರಕಾರ, ದಿನಕ್ಕೆ ಒಂದು ಮೊಟ್ಟೆ ಸಾಕು ಎಂದು ಹೇಳುತ್ತದೆ. ನೀವು ದಿನಕ್ಕೆ ಎಷ್ಟು ಮೊಟ್ಟೆಗಳನ್ನು ತಿನ್ನಬಹುದು ಎಂಬುದು ನಿಮ್ಮ ಆರೋಗ್ಯವನ್ನು ಅವಲಂಬಿಸಿರುತ್ತದೆ. ಒಂದಕ್ಕಿಂತ ಹೆಚ್ಚು ಮೊಟ್ಟೆಗಳನ್ನು ಸೇವಿಸುವುದರಿಂದ ನೀವು ಅನಾರೋಗ್ಯಕ್ಕೂ ಒಳಗಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾದರೆ ನಾವು ದಿನದಲ್ಲಿ ಎಷ್ಟು ಮೊಟ್ಟೆಗಳನ್ನು ತಿನ್ನಬೇಕು ಎನ್ನುವ ನಿಮ್ಮ ಗೊಂದಲ್ಲಕ್ಕೆ ಮುಂದೆ ಓದಿ.

ಇದನ್ನೂ ಓದಿ: ವಾಸನೆ ಹರಡುವ ಈ ಪದಾರ್ಥಗಳನ್ನು ಫ್ರಿಜ್​ನಲ್ಲಿ ಇಡಲೇಬೇಡಿ

ದಿನಕ್ಕೆ ಎಷ್ಟು ಮೊಟ್ಟೆಗಳನ್ನು ತಿನ್ನಬೇಕು:

ದಿನಕ್ಕೆ ಒಂದು ಮೊಟ್ಟೆಯನ್ನು ಸೇವಿಸುವುದು ನಿಮ್ಮ ದೇಹಕ್ಕೆ ಒಳ್ಳೆಯದು ಎಂದು ಅನೇಕ ಅಧ್ಯಯನಗಳು ಬಹಿರಂಗಪಡಿಸಿವೆ. ಮಧುಮೇಹ, ಹೃದಯ, ಅಧಿಕ ರಕ್ತದೊತ್ತಡ ಸಮಸ್ಯೆಗಳು ಇಲ್ಲದಿದ್ದರೆ ಒಂದಕ್ಕಿಂತ ಹೆಚ್ಚು ಮೊಟ್ಟೆಗಳನ್ನು ತಿನ್ನಬಹುದಾಗಿದೆ.

ಮೊಟ್ಟೆಯ ಹಳದಿ ಭಾಗ ಆರೋಗ್ಯಕ್ಕೆ ಒಳ್ಳೆಯದಾ?

ದೇಹದಾರ್ಢ್ಯ ಪಟುಗಳು, ಫಿಟ್ನೆಸ್ ಪ್ರಿಯರು ಪ್ರತಿದಿನ ಮೊಟ್ಟೆಯನ್ನು ಸೇವಿಸುತ್ತಾರೆಂಬ ವಿಚಾರ ನಮಗೆಲ್ಲರಿಗೂ ತಿಳಿದಿರುವುದು. ಇವರು ಮೊಟ್ಟೆಯ ಹಳದಿ ಭಾಗವನ್ನು ತಿನ್ನದಂತೆ ಸಲಹೆ ನೀಡುತ್ತಾರೆ. ಮೊಟ್ಟೆಯ ಹಳದಿ ಭಾಗವು ರುಚಿಯಲ್ಲಿ ಭಿನ್ನವಾಗಿರುತ್ತದೆ. ಮೊಟ್ಟೆಯ ಹಳದಿ ಭಾಗ ತಿನ್ನುವುದು ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಮೊಟ್ಟೆಯ ಹಳದಿ ಭಾಗವನ್ನು ತಿನ್ನಬಾರದು. ಸಿಡಿಸಿ ಪ್ರಕಾರ, ಎಚ್ಐವಿಯೊಂದಿಗೆ ವಾಸಿಸುವ ಜನರು ಮತ್ತು ಅಂಗಾಂಗ ಕಸಿ ಮಾಡಿದವರು ಮೊಟ್ಟೆಯ ಹಳದಿ ಭಾಗವನ್ನು ತಿನ್ನುವುದನ್ನು ತಪ್ಪಿಸಬೇಕು.

ಹೆಚ್ಚು ಮೊಟ್ಟೆ ತಿಂದರೆ ಏನಾಗುತ್ತದೆ?

ಹೆಚ್ಚು ಮೊಟ್ಟೆ ತಿಂದವರು ಚರ್ಮದ ಸಮಸ್ಯೆಗೆ ತುತ್ತಾಗುತ್ತಾರೆ. ದಿನಕ್ಕೆ 2 ಮೊಟ್ಟೆಗಳಿಗಿಂತ ಹೆಚ್ಚು ತಿನ್ನುವುದರಿಂದ ಸ್ನಾಯು ನೋವು ಮತ್ತು ಸೆಳೆತ ಉಂಟಾಗುತ್ತದೆ. ಜೊತೆಗೆ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಬೇಸಿಗೆಯಲ್ಲಿ ವಾಂತಿ, ಭೇದಿ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು. ಮೊಟ್ಟೆಗಳು ದೇಹದ ಭಾಗಗಳಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ.

(ಸೂಚನೆ: ಈ ಮೇಲೆ ನೀಡಿದ ವಿಷಯವು ಮಾಹಿತಿಗಾಗಿ ಮಾತ್ರವಾಗಿದ್ದು, ಟಿವಿ9 ಡಿಜಿಟಲ್​ಗೆ ಸಂಬಂಧಿಸಿರುವುದಿಲ್ಲ. ಸೂಕ್ತ ಮಾರ್ಗದರ್ಶನ ಅಥವಾ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ