ಬೆವರು ಹೆಚ್ಚಾಗಿ ಬರುವವರಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸೋಂಕಿನ ಅಪಾಯ ಹೆಚ್ಚುತ್ತದೆಯೇ?

ಬೇಸಿಗೆಯಲ್ಲಿ, ಅನೇಕರಿಗೆ ಅತಿಯಾದ ಬೆವರು ಬರುವುದರಿಂದ ನಾನಾ ರೀತಿಯ ಸಮಸ್ಯೆ ಉಂಟಾಗುತ್ತದೆ. ಅದರಲ್ಲಿಯೂ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ವೈದ್ಯರು ಹೇಳುವ ಪ್ರಕಾರ, ಬೆವರು ಹೆಚ್ಚು ಸಮಯ ಚರ್ಮದ ಮೇಲೆ ಇದ್ದಲ್ಲಿ ತೇವಾಂಶ ಹೆಚ್ಚಾಗಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಚರ್ಮದಲ್ಲಿ ಉರಿ, ಕೆರೆತ, ಕೆಂಪು ಚುಕ್ಕೆಗಳು ಮತ್ತು ಫಂಗಲ್ ಇನ್‌ಫೆಕ್ಷನ್‌ಗಳಂತಹ ಸಮಸ್ಯೆಗಳು ಕಾಣಿಸಬಹುದು. ಹಾಗಾದರೆ ಈ ರೀತಿ ಸಮಸ್ಯೆಯನ್ನು ತಡೆಯುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೆವರು ಹೆಚ್ಚಾಗಿ ಬರುವವರಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸೋಂಕಿನ ಅಪಾಯ ಹೆಚ್ಚುತ್ತದೆಯೇ?
Excessive Sweating And Skin Infections
Image Credit source: Getty images

Updated on: May 07, 2026 | 7:59 PM

ಬೇಸಿಗೆ ಆರಂಭವಾದಾಗಿನಿಂದ ತಾಪಮಾನ ಮತ್ತು ಉಷ್ಣಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಹೆಚ್ಚಿನವರಲ್ಲಿ ಅತಿಯಾಗಿ ಬೆವರು ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಬೆವರು ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯಕವಾದರೂ, ಅತಿಯಾಗಿ ಬೆವರು (Sweat) ಬಂದಾಗ ಚರ್ಮದ ಸಮಸ್ಯೆಗಳು (Skin Problems) ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಬೆವರು ಹೆಚ್ಚು ಸಮಯ ಚರ್ಮದ ಮೇಲೆ ಇದ್ದಲ್ಲಿ ತೇವಾಂಶ ಹೆಚ್ಚಾಗಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಚರ್ಮದಲ್ಲಿ ಉರಿ, ಕೆರೆತ, ಕೆಂಪು ಚುಕ್ಕೆಗಳು ಮತ್ತು ಫಂಗಲ್ ಇನ್‌ಫೆಕ್ಷನ್‌ಗಳಂತಹ ಸಮಸ್ಯೆಗಳು ಕಾಣಿಸಬಹುದು. ವಿಶೇಷವಾಗಿ ಕುತ್ತಿಗೆ, ಕೈಕುಳಿಗಳು, ಬೆನ್ನು ಮತ್ತು ತೊಡೆ ಭಾಗಗಳಲ್ಲಿ ಹೆಚ್ಚು ಬೆವರು ಬಂದರೆ ಸೋಂಕಿನ ಅಪಾಯ ಹೆಚ್ಚಾಗುತ್ತದೆ. ಹಾಗಾದರೆ ಈ ರೀತಿ ಸಮಸ್ಯೆಯನ್ನು ತಡೆಯುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯವಾಗಿ ಧೂಳು ಮತ್ತು ಮಲಿನತೆ ಬೆವರಿನೊಂದಿಗೆ ಸೇರಿ ಚರ್ಮದ ಮೇಲೆ ಉಳಿದರೆ ಸಮಸ್ಯೆ ಮತ್ತಷ್ಟು ಗಂಭೀರವಾಗಬಹುದು. ಹೆಚ್ಚು ಸಮಯ ಒದ್ದೆಯಾದ ಬಟ್ಟೆ ಧರಿಸುವುದು ಅಥವಾ ದೇಹವನ್ನು ಸ್ವಚ್ಛವಾಗಿಟ್ಟುಕೊಳ್ಳದಿರುವುದು ಸೋಂಕಿನ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಸಂವೇದನಾಶೀಲ ಚರ್ಮ ಹೊಂದಿರುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಹಾಗಾಗಿ ಈ ಸಮಸ್ಯೆ ತಡೆಯಲು ಕೆಲವು ಸಿಂಪಲ್ ಸಲಹೆಗಳನ್ನು ಅನುಸರಿಸುವುದು ಬಹಳ ಉತ್ತಮ.

ಇದನ್ನೂ ಓದಿ: ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅವು ಮಧುಮೇಹ ಬರುವ ಮುನ್ಸೂಚನೆಯಾಗಿರಬಹುದು

ಚರ್ಮದ ಸೋಂಕು ತಡೆಯಲು ಏನು ಮಾಡಬೇಕು?

  • ತಜ್ಞರ ಸಲಹೆಯಂತೆ, ಬೇಸಿಗೆಯಲ್ಲಿ ದೇಹವನ್ನು ಸದಾ ಸ್ವಚ್ಛ ಮತ್ತು ಒಣಗಿರುವಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯ. ಹೆಚ್ಚು ಬೆವರು ಬಂದಾಗ ಮುಖ ಮತ್ತು ದೇಹವನ್ನು ತೊಳೆಯಬೇಕು. ಗಾಳಿ ಸರಿಯಾಗಿ ಹರಿಯಲು ಸಡಿಲ ಮತ್ತು ಕಾಟನ್ ಬಟ್ಟೆ ಧರಿಸುವುದು ಉತ್ತಮ. ಇದರಿಂದ ಬೆವರು ಬೇಗ ಒಣಗಲು ಸಹಾಯವಾಗುತ್ತದೆ.
  • ಸಾಕಷ್ಟು ನೀರು ಕುಡಿಯುವುದು ಹಾಗೂ ಹೆಚ್ಚು ಸಮಯ ಒದ್ದೆಯಾದ ಬಟ್ಟೆಗಳಲ್ಲಿ ಉಳಿಯದಿರುವುದು ಕೂಡ ಮುಖ್ಯ. ಇತರರ ಟವೆಲ್, ಬಟ್ಟೆ ಅಥವಾ ವೈಯಕ್ತಿಕ ವಸ್ತುಗಳನ್ನು ಬಳಸುವುದನ್ನು ತಪ್ಪಿಸಬೇಕು, ಏಕೆಂದರೆ ಇದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ.
  • ಚರ್ಮದಲ್ಲಿ ನಿರಂತರ ಉರಿ, ಕೆಂಪು ಚುಕ್ಕೆಗಳು ಅಥವಾ ಕೆರೆತ ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಸರಿಯಾದ ಸ್ವಚ್ಛತೆ ಮತ್ತು ಕಾಳಜಿಯಿಂದ ಬೇಸಿಗೆಯಲ್ಲಿ ಚರ್ಮದ ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us