Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ

ಸಿಟ್ರಸ್​ ಹಣ್ಣುಗಳಲ್ಲಿ ವಿಟಮಿನ್​ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಆತಂಕ, ತೀವ್ರವಾದ ಉಸಿರಾಟದ ತೊಂದರೆಯಿಂದ ಮಿಟಮಿನ್​ ಸಿ ಅಂಶ ರಕ್ಷಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತವೆ.

Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ
ಸಿಟ್ರಸ್ ಹಣ್ಣುಗಳು
Follow us
TV9 Web
| Updated By: shruti hegde

Updated on: Jul 06, 2021 | 2:39 PM

ಕೊವಿಡ್​19 ಸಾಂಕ್ರಾಮಿಕದಿಂದ ಜನರ ಜೀವನ ಶೈಲಿಯೇ ಬದಲಾಗಿದೆ. ಆರೋಗ್ಯವೂ ಸಹ ಹದಗೆಟ್ಟಿದೆ. ಹೀಗಿರುವಾಗ ಸೋಂಕಿನ ವಿರುದ್ಧ ಹೋರಾಡಲು ನಮ್ಮ ದೇಹದಲ್ಲಿ ರೋಗ ನಿರೋಧ ಶಕ್ತಿ ಸುಧಾರಿಸಬೇಕು. ಜತೆಗೆ ಉತ್ತಮ ವ್ಯಾಯಾಮ ಅಭ್ಯಾಸ ನಮ್ಮ ದಿನನಿತ್ಯದ ಅಭ್ಯಾಸವಾಗಿರಬೇಕು. ವಿಶೇಷವಾಗಿ ತಾಜಾ ಹಣ್ಣುಗಳು ಮತ್ತು ಸಿಟ್ರಸ್​ ಹೊಂದಿರುವ ಹಣ್ಣುಗಳನ್ನು ಸೇವಿಸುವದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ತಜ್ಞರು ಹೇಳಿದ್ದಾರೆ.

ಸಿಟ್ರಸ್​ ಹಣ್ಣುಗಳಲ್ಲಿ ವಿಟಮಿನ್​ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಮಿಟಮಿನ್​ ಸಿ ಬಿಳಿ ರಕ್ತಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಸಿಟ್ರಸ್​ ಹಣ್ಣುಗಳಾದ ಕಿತ್ತಳೆ, ಅನಾನಸ್​, ನಿಂಬು, ಪೇರಲ ಹಣ್ಣು, ಕಿವಿ ಹಣ್ಣುಗಳು ಸಾಕಷ್ಟು ವಿಟಮಿನ್​ ಸಿ ಅಂಶದಿಂದ ಸಮೃದ್ಧವಾಗಿರುತ್ತದೆ. ಇದರ ಹೊರತಾಗಿ ಆಮ್ಲ (ನೆಲ್ಲಿಕಾಯಿ) ಹೆಚ್ಚು ಮಿಟಮಿನ್​ ಸಿ ಅಂಶವನ್ನು ಹೊಂದಿರುತ್ತದೆ. ಕಿತ್ತಳೆ ಹಣ್ಣಿಗಿಂತ ಆಮ್ಲದಲ್ಲಿ ಹೆಚ್ಚು ಮಿಟಮಿನ್​ ಸಿ ಅಂಶವಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಿಟ್ರಸ್​ ಹಣ್ಣುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ದೇಹಕ್ಕೆ ಆವರಿಸಿರುವ ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಿಟಮಿನ್​ ಸಿ ನಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಕೊರೊನಾ ವೈರಸ್​ ಮನುಷ್ಯನ ಆರೋಗ್ಯದ ಮೇಲೆ ಒತ್ತಡವನ್ನು ಉಂಟು ಮಾಡುತ್ತದೆ. ಜತೆಗೆ ಪ್ರತಿರಕ್ಷಣೆಯನ್ನು ಕಡಿಮೆ ಮಾಡುತ್ತದೆ. ಇದರಿಂದ ಸುಧಾರಿಸಿಕೊಳ್ಳಲು ವಿಟಮಿನ್​ ಸಿ ಅಂಶ ದೇಹಕ್ಕೆ ಬೇಕು ಎಂದು ತಜ್ಞರು ಹೇಳಿದ್ದಾರೆ.

ಆತಂಕ, ತೀವ್ರವಾದ ಉಸಿರಾಟದ ತೊಂದರೆಯಿಂದ ಮಿಟಮಿನ್​ ಸಿ ಅಂಶ ರಕ್ಷಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತವೆ. ಹಾಗಿರುವಾಗ ದೇಹಕ್ಕೆ ಬೇಕಾದ ಅಗತ್ಯವಾದ ವಿಟಮಿನ್​ ಸಿ ಅಂಶವನ್ನು ಪಡೆಯಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದಿನಕ್ಕೆ ಕನಿಷ್ಠ 100 ಗ್ರಾಂ ಸಿಟ್ರಸ್​ ಹಣ್ಣುಗಳನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ:

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ