Pre Diabetic: ಪ್ರೀ ಡಯಾಬಿಟಿಕ್ ಹಂತವನ್ನು ನಿಯಂತ್ರಿಸುವುದು ಹೇಗೆ ? ಇಲ್ಲಿದೆ ಸಲಹೆಗಳು

ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳ ಕಂಡಾಗ ಅದು ಪ್ರೀ ಡಯಾಬಿಟಿಕ್ ಹಂತವಾಗಿರುತ್ತದೆ. ಸರಿಯಾಗಿ ಚಿಕಿತ್ಸೆ ನೀಡುವ ಮೂಲಕ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ಪ್ರೀ ಡಯಾಬಿಟಿಕ್ ಕಾಯಿಲೆಯು ಮುಂದಿನ ಹಂತವಾದ ಟೈಪ್ 2 ಮಧುಮೇಹಕ್ಕೆ ತಿರುಗುವುದನ್ನು ತಡೆಯಬಹುದು.

Pre Diabetic: ಪ್ರೀ ಡಯಾಬಿಟಿಕ್ ಹಂತವನ್ನು ನಿಯಂತ್ರಿಸುವುದು ಹೇಗೆ ? ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 25, 2023 | 11:01 AM

ಪ್ರೀ ಡಯಾಬಿಟಿಕ್ (Pre Diabetic) ಎನ್ನುವುದು ವ್ಯಕ್ತಿಯ ರಕ್ತದಲ್ಲಿನ ಸಕ್ಕರೆಯ ಮಟ್ಟವು ಸಾಮಾನ್ಯಕ್ಕಿಂತ ಹೆಚ್ಚಿರುವ ಸ್ಥಿತಿಯಾಗಿದೆ. ಅದನ್ನು ಮಧುಮೇಹ ಎಂದು ಪರಿಗಣಿಸಲಾಗುತ್ತದೆ. ಪ್ರಪಂಚದಾದ್ಯಂತ ಕೋಟಿಗಟ್ಟಲೆ ಜನರು ಪ್ರೀ ಡಯಾಬಿಟಿಕ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದಕ್ಕೆ ಸರಿಯಾದ ಚಿಕಿತ್ಸೆ ನೀಡುವ ಮೂಲಕ ಅದನ್ನು ಹಿಡಿತಕ್ಕೆ ತರಬಹುದು. ಪ್ರೀ ಡಯಾಬಿಟಿಕ್ ಕಾಯಿಲೆಯ ಬಗ್ಗೆ ಸಮಯಕ್ಕೆ ಸರಿಯಾಗಿ ಎಚ್ಚರಿಕೆ ತೆಗೆದುಕೊಂಡರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಾಮಾನ್ಯ ಸ್ಥಿತಿಯಲ್ಲಿಡುವ ಮೂಲಕ ಟೈಪ್ 2 ಮಧುಮೇಹ ಭಾದಿಸುವ ಅಪಾಯವನ್ನು ಶಾಶ್ವತವಾಗಿ ತಪ್ಪಿಸಬಹುದು. ಔಷಧಿಗಳಿಲ್ಲದಿದ್ದರೂ, ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುವ ಮೂಲಕ ಪ್ರೀ ಡಯಾಬಿಕ್​​ನ್ನು ನಿಯಂತ್ರಿಸಬಹುದಾಗಿದೆ.

ಪ್ರೀ ಡಯಾಬಿಟಿಕ್ ಕಾಯಿಲೆಯ ಲಕ್ಷಣಗಳು:

ಮುಧುಮೇಹವು ಯಾರಲ್ಲಿಯೂ ಇದ್ದಕ್ಕಿದ್ದಂತೆ ಬರುವುದಿಲ್ಲ. ಇದರ ಕೆಲವು ಲಕ್ಷಣಗಳು ಈ ಮೊದಲೇ ಗೋಚರಿಸುತ್ತದೆ. ಅತಿಯಾದ ಬಾಯಾರಿಕೆ, ಆಯಾಸ, ಆಗಾಗ್ಗೆ ಮೂತ್ರವಿಸರ್ಜನೆ, ಹಠಾತ್ ತೂಕ ನಷ್ಟ, ಅತಿಯಾದ ಹಸಿವು, ಕಾಲು ಅಥವಾ ಕೈಗಳಲ್ಲಿ ಜುಮ್ಮೆನಿಸುವುದು ಪ್ರೀ ಡಯಾಬಿಟಿಸ್​​ನ ಲಕ್ಷಣವಾಗಿದೆ. ಪ್ರೀ ಡಯಾಬಿಟಿಕ್ ಹಂತದಲ್ಲಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಾಪಾಡಿಕೊಳ್ಳಲು ನಿಮಗೆ ಔಷಧಿಗಳ ಅಗತ್ಯವಿಲ್ಲ. ಜೀವನಶೈಲಿಯಲ್ಲಿ ಕೆಲವು ಬದಲಾವಣೆ ಮಾಡುವ ಮೂಲಕ ಪೂರ್ವ ಹಂತದ ಮಧುಮೇಹವನ್ನು ತಡೆಗಟ್ಟಬಹುದು. ಪ್ರೀ ಡಯಾಬಿಟಿಕ್ ನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ ಅದು ಅನೇಕ ಅಪಾಯಗಳೊಂದಿಗೆ ಟೈಪ್ 2 ಮಧುಮೇಹವಾಗಿ ಪರಿಣಮಿಸಬಹುದು.

ಪ್ರೀ ಡಯಾಬಿಟಿಸ್​​​ನ್ನು ನೈಸರ್ಗಿಕ ಮಾರ್ಗದ ಮೂಲಕ ನಿರ್ವಹಿಸುವುದು ಹೇಗೆ:

ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವುದು ಮಧುಮೇಹವನ್ನು ಗುಣಪಡಿಸಲು ಅತ್ಯುತ್ತಮ ತಂತ್ರವಾಗಿದೆ. ಆರೋಗ್ಯಕರ ಆಹಾರ ಸೇವನೆ ಮತ್ತು ನಿಯಮಿತ ವ್ಯಾಯಾಮವು ಟೈಪ್ 2 ಮಧುಮೇಹ ನಿಮ್ಮನ್ನು ಭಾದಿಸುವುದನ್ನು ತಡೆಯಲು ಸಹಾಯ ಮಾಡುತ್ತದೆ.

ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ:

ನಿಯಮಿತವಾಗಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರೀ ಡಯಾಬಿಟಿಸ್ ಸಮಸ್ಯೆಯನ್ನು ನಿರ್ವಹಣೆ ಮಾಡಬಹುದು. ಪ್ರೀ ಡಯಾಬಿಟಿಕ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಕನಿಷ್ಟ 30 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು. ಇದು ಅವರ ತೂಕವನ್ನು ನಿಯಂತ್ರಿಸಲು ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕರ ದೇಹ ತೂಕವನ್ನು ಕಾಪಾಡಿಕೊಳ್ಳಿ:

ಪ್ರೀ ಡಯಾಬಿಟಿಸ್ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು ಆರೋಗ್ಯಕರ ದೇಹ ತೂಕವನ್ನು ಕಾಪಾಡಿಕೊಳ್ಳುವುದರ ಮೇಲೆ ಹೆಚ್ಚು ಅವಲಂಬಿತವಾಗಿದೆ. ನೀವು ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದರೆ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗಬಹುದು. ಸಮತೋಲಿತ ಆಹಾರ ಸೇವನೆ ಮತ್ತು ಸ್ಥಿರವಾದ ವ್ಯಾಯಾಮವು ಆರೋಗ್ಯಕ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಹಾಗೂ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ:ಮಧುಮೇಹದ ಮೂತ್ರಪಿಂಡ ಕಾಯಿಲೆಯ ಎಚ್ಚರಿಕೆ ಹಂತಗಳು

ಒತ್ತಡಕ್ಕೆ ಒಳಗಾಗುವುದನ್ನು ತಪ್ಪಿಸಿ:

ದೀರ್ಘಕಾಲದ ಒತ್ತಡವು ಇನ್ಸುಲಿನ್ ಪ್ರತಿರೋಧಕವನ್ನು ಉಲ್ಬಣಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಯೋಗ, ಆಳವಾದ ಉಸಿರಾಟದ ವ್ಯಾಯಾಮಗಳು, ಧ್ಯಾನ ಮತ್ತು ಪ್ರಕೃತಿಯಲ್ಲಿ ಸಮಯ ಕಳೆಯುವ ಮೂಲಕ ಒತ್ತಡ ನಿರ್ವಹಣೆಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ. ಇದರಿಂದ ಒತ್ತಡವನ್ನು ನಿವಾರಿಸಬಹುದು ಹಾಗೂ ಇದು ಗ್ಲೈಸೆಮಿಕ್ ನಿಯಂತ್ರಣವನ್ನು ಸುಧಾರಿಸುತ್ತದೆ.

ಸಾಕಷ್ಟು ನಿದ್ರೆ ಪಡೆಯಿರಿ:

ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಆರೊಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ನಿದ್ರೆ ಪಡೆಯುವುದು ತುಂಬಾ ಮುಖ್ಯವಾಗಿದೆ. ಸಾಕಷ್ಟು ನಿದ್ರೆ ಪಡೆಯದಿದ್ದರೆ ಅದರಿಂದ ಪ್ರಿಡಯಾಬಿಟಿಕ್ ಮತ್ತು ಟೈಪ್ 2 ಮಧುಮೇಹ ಕಾಯಿಲೆ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಪ್ರೀ ಡಯಾಬಿಟಿಕ್ ಕಾಯಿಲೆಯನ್ನು ನೈಸರ್ಗಿಕ ವಿಧಾನದ ಮೂಲಕ ಪರಿಹರಿಸಲು ಪ್ರತಿದಿನ 7 ರಿಂದ 8 ಗಂಟೆಗಳ ಕಾಲ ಚೆನ್ನಾಗಿ ನಿದ್ರೆ ಪಡೆಯುವುದು ಅವಶ್ಯಕ.

ವೈದ್ಯರನ್ನು ಭೇಟಿ ಮಾಡಿ:

ನಿಮ್ಮ ಸಾಮಾನ್ಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಮ್ಮ ಪ್ರೀ ಡಯಾಬಿಟಿಸ್ ಕಾಯಿಲೆಯನ್ನು ನಿಯಂತ್ರಿಸಲು ನಿಯಮಿತ ವೈದ್ಯಕೀಯ ತಪಾಸಣೆಯ ಅಗತ್ಯವಿದೆ. ನಿಮ್ಮ ಕೊಲೆಸ್ಟ್ರಾಲ್, ರಕ್ತದೊತ್ತಡ, ರಕ್ತದ ಸಕ್ಕರೆ ಮಟ್ಟಗಳನ್ನು ನಿಯಮಿತವಾಗಿ ಪರೀಕ್ಷಿಸುತ್ತಿರಿ. ಹಾಗೂ ವೈದ್ಯರ ಸಲಹೆಯ ಮೇರೆಗೆ ರೋಗನಿರ್ಣಯವನ್ನು ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ