AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Problem: ಮೂತ್ರಪಿಂಡದ ಸಮಸ್ಯೆಯ ಲಕ್ಷಣ ಮತ್ತು ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ತಿಳಿಯಿರಿ

ಮೂತ್ರದ ಬಣ್ಣ ಬದಲಾಗುವುದು, ಮೂತ್ರವು ಅಸಹಜವಾಗಿದ್ದಾಗ ಮತ್ತು ಊತವು ಹೆಚ್ಚಾದಾಗ ಮೂತ್ರಪಿಂಡದ ಸಮಸ್ಯೆಯೆಂದು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ.

Kidney Problem: ಮೂತ್ರಪಿಂಡದ ಸಮಸ್ಯೆಯ ಲಕ್ಷಣ ಮತ್ತು ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 05, 2021 | 8:24 AM

Share

ಪ್ರಸ್ತುತ ಪರಿಸ್ಥಿತಿಯಲ್ಲಿ ಅನಾರೋಗ್ಯಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ. ಬದಲಾದ ಆಹಾರ ಪದ್ಧತಿ, ಅಧಿಕ ಒತ್ತಡ, ಮಾನಸಿಕ ಆತಂಕ ಇತ್ಯಾದಿಗಳಿಂದಾಗಿ ಮನುಷ್ಯರು ರೋಗಗಳಿಂದ ಬಳಲುತ್ತಿದ್ದಾರೆ. ಆದರೆ ಕೆಲವು ರೋಗಗಳನ್ನು ಗುಣಪಡಿಸುವ ಶಕ್ತಿ ನಮ್ಮ ಕೈಯಲ್ಲಿದೆ. ಇದಕ್ಕಾಗಿ ನಾವು ಸದಾ ನಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು ಮತ್ತು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು.ಭಾರತದಲ್ಲಿ ಪ್ರತಿ ವರ್ಷ ಎರಡೂವರೆ ಲಕ್ಷ ಜನರು ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಲ್ಲದೆ, ಪ್ರತಿ ವರ್ಷ ಮೂರುವರೆ ಕೋಟಿ ಜನರು ಡಯಾಲಿಸಿಸ್‌ಗೆ ಒಳಗಾಗುತ್ತಿದ್ದಾರೆ ಎಂದು ಅಧ್ಯಯನಗಳು ತಿಳಿಸಿವೆ.

ಭಾರತದಲ್ಲಿ ಕಿಡ್ನಿ ಸಂಬಂಧಿತ ರೋಗಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮತ್ತಷ್ಟು ಆತಂಕ ಎದುರಾಗಿದೆ. ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್ ಪ್ರಕಾರ, ನಮ್ಮ ಜನಸಂಖ್ಯೆಯ 10 ಪ್ರತಿಶತ ಜನರು ದೀರ್ಘಕಾಲದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದೆಲ್ಲದಕ್ಕೂ ಕಾರಣವೆಂದರೆ ನಾವು ಮೂತ್ರಪಿಂಡಗಳನ್ನು ಆರೋಗ್ಯವಾಗಿಡಲು ವಿಶೇಷ ಕಾಳಜಿ ವಹಿಸದೇ ಇರುವುದೇ ಆಗಿದೆ.

ಕೆಲಸದ ಒತ್ತಡದಿಂದಾಗಿ ಮೂತ್ರಪಿಂಡದ ಕಾಳಜಿಯ ಬಗ್ಗೆ ಜನರು ಮರೆಯುತ್ತಿದ್ದಾರೆ. ಜೀರ್ಣಾಂಗ ವ್ಯವಸ್ಥೆಯಿಂದ ತ್ಯಾಜ್ಯವು ಹೆಚ್ಚುವರಿ ದ್ರವವನ್ನು ಹೊರಹಾಕುತ್ತದೆ. ಹೀಗಾಗಿ ರಕ್ತದೊತ್ತಡ ಮತ್ತು ಎಲೆಕ್ಟ್ರೋಲೈಟ್ ಮಟ್ಟವನ್ನು ನಿಯಂತ್ರಿಸಬೇಕು. ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವ ಮೂಲಕ ಆರೋಗ್ಯಕರ ಮೂಳೆಗಳನ್ನು ನಮ್ಮದಾಗಿಸಿಕೊಳ್ಳಬೇಕು. ಆ ಮೂಲಕ ಮೂತ್ರಪಿಂಡದ ಕಾಳಜಿ ಮಾಡಬೇಕು.

ಕಿಡ್ನಿ ಸಮಸ್ಯೆಯನ್ನು ಪತ್ತೆ ಮಾಡುವುದು ಹೇಗೆ ? ಮೂತ್ರದ ಬಣ್ಣ ಬದಲಾಗುವುದು, ಮೂತ್ರವು ಅಸಹಜವಾಗಿದ್ದಾಗ ಮತ್ತು ಊತವು ಹೆಚ್ಚಾದಾಗ ಮೂತ್ರಪಿಂಡದ ಸಮಸ್ಯೆಯೆಂದು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಮೂತ್ರಪಿಂಡಗಳು ಸಂಪೂರ್ಣವಾಗಿ ಹಾಳಾಗಿದ್ದರೆ, ರುಚಿ ಮತ್ತು ಹಸಿವಿನ ಸಾಮರ್ಥ್ಯವು ಬಹಳ ಕಡಿಮೆಯಾಗುತ್ತದೆ. ಆಗಾಗ್ಗೆ ವಾಕರಿಕೆ ಮತ್ತು ವಾಂತಿ ಬಂದಂತೆ ಭಾಸವಾಗುತ್ತದೆ. ಕೆಂಪು ರಕ್ತ ಕಣಗಳ ಉತ್ಪಾದನೆಯ ಮೇಲೆ ಕೂಡ ಮೂತ್ರಪಿಂಡದ ಕಾಯಿಲೆ ಪರಿಣಾಮ ಬೀರುತ್ತದೆ.

ಆಯಾಸ ಮತ್ತು ಮೆದುಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ಮೂತ್ರಪಿಂಡ ಇರುವ ಪ್ರದೇಶದಲ್ಲಿ ನೋವು ಉಂಟಾಗುತ್ತದೆ ಜತೆಗೆ ಮೂತ್ರಪಿಂಡಗಳಲ್ಲಿ ಸೋಂಕು ಮತ್ತು ಕಲ್ಲುಗಳನ್ನು ಕೂಡ ಉಂಟುಮಾಡಬಹುದು. ಹವಾಮಾನವು ಬಿಸಿಯಾಗಿರುವಾಗಲೂ ತಣ್ಣನೆಯ ಭಾವನೆ ಕೂಡ ಮೂತ್ರಪಿಂಡ ಸಮಸ್ಯೆಯ ಲಕ್ಷಣವಾಗಿರುತ್ತದೆ. ಇದರ ಅರ್ಥ ಮೂತ್ರಪಿಂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದಾಗಿರುತ್ತದೆ. ಇಂತಹ ಸಂದರ್ಭದಲ್ಲಿ ವೈದ್ಯರ ಸಲಹೆ ಪಡೆಯುವುದು ತುಂಬಾ ಮುಖ್ಯ.

ಕಿಡ್ನಿ ಸಮಸ್ಯೆಗೆ ಪರಿಹಾರವೇನು ? 1. ದಿನಕ್ಕೆ 7 ರಿಂದ 8 ಗ್ಲಾಸ್ ನೀರು ಕುಡಿಯಬೇಕು.

2. ಕ್ಯಾಪ್ಸಿಕಂ ಸೇವಿಸಿ. ಇದರಲ್ಲಿರುವ ವಿಟಮಿನ್ ಎ, ಸಿ, ಪೊಟ್ಯಾಶಿಯಂ ಇತ್ಯಾದಿ ಪೋಷಕಾಂಶಗಳು ಮೂತ್ರಪಿಂಡಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

3. ನಿಯಮಿತವಾಗಿ ಬೆಳ್ಳುಳ್ಳಿಯನ್ನು ಸೇವಿಸಿದರೆ ಮೂತ್ರಪಿಂಡಗಳು ಆರೋಗ್ಯಕರವಾಗಿರುತ್ತದೆ.

4. ಬೆರ್ರಿಗಳಲ್ಲಿ ಫೈಬರ್, ವಿಟಮಿನ್ ಮತ್ತು ಇತರ ಪೋಷಕಾಂಶಗಳು ಅಧಿಕವಾಗಿವೆ. ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಇದು ಸಹಾಯಕವಾಗಿದೆ.

5. ಓಟ್ಸ್, ಹೂಕೋಸು, ಈರುಳ್ಳಿ ಮತ್ತು ಅನಾನಸ್ ಕೂಡ ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸುತ್ತದೆ.

6. ಮೂತ್ರ ಬಂದಾಗ ತಕ್ಷಣವೇ ಹೋಗಬೇಕು. ಇಲ್ಲದಿದ್ದರೆ ಇದು ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Health Tips: ಯಕೃತ್ತು ಆರೋಗ್ಯ ಸುಧಾರಿಸಲು ಸೇವಿಸಬೇಕಾದ ಆಹಾರ ಪದಾರ್ಥಗಳು

Health Tips: ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ವಿಧಾನಗಳನ್ನು ಅನುಸರಿಸಿ

(How to diagnose kidney problem check these health tips to take care of kidney)

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್