Mental Health: ಮಾನಸಿಕ ಅಸ್ವಸ್ಥತೆಯ ಆರಂಭಿಕ ಹಂತವನ್ನು ಪತ್ತೆ ಹಚ್ಚುವುದು ಹೇಗೆ?

ಸಾಮಾನ್ಯವಾಗಿ ನೀವು ಶೀತ, ಜ್ವರ, ಕಫ ಏನೇ ಇದ್ದರು ವೈದ್ಯರ ಬಳಿ ತೆರಳುತ್ತೀರಿ, ಆದರೆ ಮನಸ್ಸಿಗೆ ಸಂಬಂಧಿಸಿದ ವಿಷಯಗಳಿದ್ದರೆ ಮಾತ್ರ ಏಕೆ ಸುಮ್ಮನಿರುತ್ತೀರಿ. ನಿಮ್ಮ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂಬ ಅರಿವಾದಾಗ ವೈದ್ಯರ ಬಳಿ ತೆರಳುವುದು ಉತ್ತಮ.

Mental Health: ಮಾನಸಿಕ ಅಸ್ವಸ್ಥತೆಯ ಆರಂಭಿಕ ಹಂತವನ್ನು ಪತ್ತೆ ಹಚ್ಚುವುದು ಹೇಗೆ?
Mental Health
Follow us
TV9 Web
| Updated By: ನಯನಾ ರಾಜೀವ್

Updated on: Jun 20, 2022 | 8:00 AM

ಸಾಮಾನ್ಯವಾಗಿ ನೀವು ಶೀತ, ಜ್ವರ, ಕಫ ಏನೇ ಇದ್ದರು ವೈದ್ಯರ ಬಳಿ ತೆರಳುತ್ತೀರಿ, ಆದರೆ ಮನಸ್ಸಿಗೆ ಸಂಬಂಧಿಸಿದ ವಿಷಯಗಳಿದ್ದರೆ ಮಾತ್ರ ಏಕೆ ಸುಮ್ಮನಿರುತ್ತೀರಿ. ನಿಮ್ಮ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂಬ ಅರಿವಾದಾಗ ವೈದ್ಯರ ಬಳಿ ತೆರಳುವುದು ಉತ್ತಮ.

ಇತರೆ ಆರೋಗ್ಯ ಸಮಸ್ಯೆಗಳಂತೆ ಮಾನಸಿಕ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುವುದು ಅಷ್ಟು ಸುಲಭವಲ್ಲ, ಲಕ್ಷಣಗಳು ಯಾವುದೂ ಸ್ಪಷ್ಟವಾಗಿರುವುದಿಲ್ಲ, ಹಾಗೆಯೇ ಹಣ ಖರ್ಚು ಮಾಡಲು ಸಿದ್ಧರಿಲ್ಲದೇ ಇರಬಹುದು. ಆದರೆ ವೈದ್ಯರು ಕೆಲವು ಸಾಮಾನ್ಯ ಚಿಹ್ನೆಗಳ ಬಗ್ಗೆ ಮಾತನಾಡುತ್ತಾರೆ.

ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದರೆ ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ ಅಥವಾ ಆಕೆ ಚೆನ್ನಾಗಿ ಆಲೋಚಿಸಬಲ್ಲರು. ಚಿಂತನ-ಮಂಥನ ಮಾಡಬಲ್ಲರು. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ. ಸಮಸ್ಯೆ ಸನ್ನಿವೇಶವನ್ನು ಸರಿಯಾಗಿ ವಿಶ್ಲೇಷಿಸಬಲ್ಲ. ಸೂಕ್ತ ಪರಿಹಾರ-ನಿರ್ಧಾರಗಳನ್ನು ಕೈಗೊಳ್ಳಬಲ್ಲ. ಏಕಾಗ್ರತೆಯಿಂದ ಚೆನ್ನಾಗಿ ಕೆಲಸ-ಕರ್ತವ್ಯಗಳನ್ನು ನಿರ್ವಹಿಸಬಲ್ಲ. ಸನ್ನಿವೇಶ-ಸಂದರ್ಭಕ್ಕೆ ತಕ್ಕಂತೆ ಭಾವನೆಗಳನ್ನು ಹಿತ-ಮಿತವಾಗಿ ಪ್ರಕಟಿಸಬಲ್ಲ. ತನ್ನ ಮತ್ತು ತನ್ನವರ ಬೇಕು ಬೇಡಗಳನ್ನು ಪೂರೈಸಬಲ್ಲ.

ಕುಟುಂಬದವರೊಂದಿಗೆ-ಇತರರೊಂದಿಗೆ ಒಳ್ಳೆಯ ಸ್ನೇಹ ಸಂಬಂಧವನ್ನು ಇಟ್ಟುಕೊಳ್ಳಬಲ್ಲ. ಅಪಾಯ ಕಷ್ಟ ನಷ್ಟ ಸೋಲು ನಿರಾಶೆಗಳನ್ನು ಧೈರ್ಯವಾಗಿ ಎದುರಿಸಬಲ್ಲ. ಸೂಕ್ತಗುರಿಗಳನ್ನು-ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಪ್ರಗತಿಯತ್ತ ನಡೆಯಬಲ್ಲ. ತನ್ನ ಕ್ಷೇಮಕ್ಕೆ ಅಷ್ಟೇ ಅಲ್ಲದೆ, ಸಮಾಜದ ಕ್ಷೇಮಕ್ಕೂ ಗಮನ ಕೊಡಬಲ್ಲ.

ಯಾವುದೋ ಒಂದು ವಿಚಾರ ನಿಮ್ಮ ಮನಸ್ಸಿನಲ್ಲಿ ಹಲವು ದಿನಗಳವರೆಗೆ ಕಾಡಬಹುದು, ಸಣ್ಣಪುಟ್ಟ ವಿಚಾರಗಳಿಗೂ ಬೇಗ ಕೋಪ ಬರುವುದು, ಏಕಾಗ್ರತೆ ಇಲ್ಲದಿರುವುದು, ಒಬ್ಬರೇ ಇರಬೇಕೆನಿಸುವುದು.

ನಿಮ್ಮ ಮಾನಸಿಕ ಸ್ಥಿತಿಯು ಎರಡು ವಾರಗಳಿಗಿಂತ ಹೆಚ್ಚು ದಿನ ಬೇರೆಯ ರೀತಿಯಲ್ಲಿ ಇದ್ದರೆ ವೈದ್ಯರನ್ನು ಸಂಪರ್ಕಿಸಿ.

ನಾನು ವೈದ್ಯರನ್ನು ಸಂಪರ್ಕಿಸಿರುವ ಬಗ್ಗೆ ಬೇರೆಯವರಿಗೆ ತಿಳಿದರೆ?: ನಾನು ವೈದ್ಯರನ್ನು ಸಂಪರ್ಕಿಸಿದೆ ಎಂದು ವೈದ್ಯರಿಗೆ ತಿಳಿದರೆ ನನ್ನನ್ನು ಹುಚ್ಚನೆಂದುಕೊಂಡಾರು, ಈ ಸಮಾಜ ನನ್ನನ್ನು ನೋಡುವ ರೀತಿಯೇ ಬದಲಾಗಬಹುದು ಎಂದೆಲ್ಲಾ ಆಲೋಚನೆ ಮಾಡಿ ಆರೋಗ್ಯವನ್ನು ಜನರು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಿದರೆ ನಿಮ್ಮ ನೋವು ದೂರವಾದೀತು.

ನನ್ನ ಸಮಸ್ಯೆಗಳನ್ನು ಸರಿಪಡಿಸಲು ಹೊರಗಿನವರು ಯಾರು?: ಸಮಸ್ಯೆ ನನ್ನದು ನಾನೇ ಬಗೆಹರಿಸಿಕೊಳ್ಳಬೇಕು, ನಿನಗೆ ಸಮಸ್ಯೆ ಇದೆ ಎನ್ನಲು ಅವರು ಯಾರು ಎಂದು ಪ್ರಶ್ನೆ ಮಾಡಬೇಡಿ, ಸಮಸ್ಯೆ ಬಗೆಹರಿದರೆ ನೀವು ಆರೋಗ್ಯಯುತ ಜೀವನ ಸಾಗಿಸಬಹುದಲ್ಲವೇ. ಮಾನಸಿಕ ಸಮಸ್ಯೆಗಳೆಲ್ಲವೂ ಹುಚ್ಚಲ್ಲ.

ಕೌನ್ಸೆಲಿಂಗ್, ಥೆರಪಿ ಮಾಡಿಸಲು ಸಮಯವೂ ಇಲ್ಲ ಹಣವೂ ಇಲ್ಲ: ನಿಮ್ಮ ಸಮಸ್ಯೆಗಳನ್ನು ವೈದ್ಯರ ಬಳಿ ಹೇಳಿಕೊಳ್ಳುವುದರಿಂದಲೇ ಅರ್ಧ ನಿಮ್ಮ ಸಮಸ್ಯೆ ಬಗೆಹರಿದಂತೆ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆತರೆ ನೀವು ದೀರ್ಘಕಾಲ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?