AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಬೆಸ್ಟ್ ಐಡಿಯಾ

ಅನೇಕ ಮಕ್ಕಳು ಪದೇ ಪದೇ ಜಂತುಹುಳುವಿನ ಸಮಸ್ಯೆಯಿಂದ ಬಳಲುತ್ತಾರೆ. ಇದರ ಆರಂಭಿಕ ಲಕ್ಷಣಗಳು ಕೂಡ ಸೌಮ್ಯವಾಗಿರುತ್ತವೆ, ಪೋಷಕರು ಕೂಡ ಇದನ್ನು ಸಾಮಾನ್ಯವೆಂದು ಪರಿಗಣಿಸುತ್ತಾರೆ ಮತ್ತು ನಿರ್ಲಕ್ಷಿಸುತ್ತಾರೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಈ ರೀತಿಯಾದಾಗ ಯಾವ ರೀತಿಯ ಲಕ್ಷಣ ಕಂಡುಬರುತ್ತದೆ, ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಬೆಸ್ಟ್ ಐಡಿಯಾ
Worm Infection In KidsImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 09, 2026 | 7:43 PM

Share

ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು (Worm Infection) ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ (Children’s health) ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ ಸಾಧ್ಯತೆ ಇರುತ್ತದೆ. ಹೊರಗೆ ಆಟವಾಡುವಾಗ ಮಣ್ಣನ್ನು ಮುಟ್ಟುವುದು, ಕಲುಷಿತ ಆಹಾರ ಸೇವಿಸುವುದು ಅಥವಾ ಕೈಗಳನ್ನು ಬಾಯಿಗೆ ಹಾಕುವ ಅಭ್ಯಾಸದಿಂದ ಹುಳುಗಳ ಸೋಂಕು ಉಂಟಾಗಬಹುದು. ಹಾಗಾದರೆ ಈ ರೀತಿಯಾದಾಗ ಯಾವ ರೀತಿಯ ಲಕ್ಷಣ ಕಂಡುಬರುತ್ತದೆ, ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜಂತುಹುಳುವಿನ ಸಮಸ್ಯೆ ಹೆಚ್ಚಾದಾಗ ಕಂಡುಬರುವ ಲಕ್ಷಣಗಳು:

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಹೊಟ್ಟೆಯಲ್ಲಿ ಹುಳುಗಳಿದ್ದರೆ ಮಕ್ಕಳಲ್ಲಿ ಹಲವು ರೀತಿಯ ಲಕ್ಷಣಗಳು ಕಾಣಿಸಬಹುದು. ಪದೇಪದೇ ಹೊಟ್ಟೆನೋವು, ಹಸಿವು ಕಡಿಮೆಯಾಗುವುದು ಅಥವಾ ಅತಿಯಾಗಿ ಹಸಿವು ಕಾಣಿಸುವುದು ಪ್ರಮುಖ ಲಕ್ಷಣಗಳಾಗಿವೆ. ಇದರ ಜೊತೆಗೆ ದೌರ್ಬಲ್ಯ, ಬೇಗ ದಣಿವಾಗುವುದು, ಹೊಟ್ಟೆ ಉಬ್ಬುವುದು, ತೂಕ ಕಡಿಮೆಯಾಗುವುದು, ವಾಂತಿ ಸೇರಿದಂತೆ ನಾನಾ ರೀತಿಯ ಸಮಸ್ಯೆ ಕಾಣಿಸಬಹುದು. ಕೆಲ ಮಕ್ಕಳಲ್ಲಿ ರಾತ್ರಿ ಸಮಯದಲ್ಲಿ ಗುದದ ಸುತ್ತ ತೀವ್ರ ತುರಿಕೆ ಉಂಟಾಗುವುದು ಸಹ ಸಾಮಾನ್ಯ ಲಕ್ಷಣವಾಗಿದೆ. ಇಂತಹ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: ಜಂತು ಹುಳವಿನ ಕಾಟದಿಂದ ಮುಕ್ತಿ ಪಡೆಯಲು ಈ ಸಲಹೆ ಪಾಲಿಸಿ

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ಮಕ್ಕಳಿಗೆ ಊಟಕ್ಕೂ ಮೊದಲು ಮತ್ತು ಹೊರಗಿನಿಂದ ಮನೆಗೆ ಬಂದ ನಂತರ ಕೈ ತೊಳೆಯುವ ಅಭ್ಯಾಸ ಮಾಡಿಸಬೇಕು. ಶುದ್ಧ ಮತ್ತು ತಾಜಾ ಆಹಾರ ನೀಡುವುದು ಅಗತ್ಯ. ಜೊತೆಗೆ ಮಕ್ಕಳು ಮಣ್ಣು ಅಥವಾ ಅಶುದ್ಧ ವಸ್ತುಗಳನ್ನು ಬಾಯಿಗೆ ಹಾಕದಂತೆ ಗಮನಿಸುವುದು ಮುಖ್ಯ. ವೈದ್ಯರ ಸಲಹೆಯಂತೆ ಸಮಯಕ್ಕೊಮ್ಮೆ ಡಿವೋರ್ಮಿಂಗ್ ಔಷಧಿ ನೀಡುವುದರಿಂದ ಈ ಸಮಸ್ಯೆಯನ್ನು ತಡೆಯಬಹುದು. ಮಕ್ಕಳಲ್ಲಿ ತೀವ್ರ ಹೊಟ್ಟೆನೋವು, ತೂಕ ಇಳಿಕೆ ಅಥವಾ ನಿರಂತರ ವಾಂತಿ ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯುವುದು ಅಗತ್ಯವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್