AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಿನಂಶವಿರುವ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ರೆ ನಮ್ಮ ಕಿಡ್ನಿ ಆರೋಗ್ಯವಾಗಿರುತ್ತಾ?

ಉಪ್ಪಿನಂಶವಿರುವ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ರೆ ನಮ್ಮ ಕಿಡ್ನಿ ಆರೋಗ್ಯವಾಗಿರುತ್ತಾ?

ಪ್ರೀತಿ ಭಟ್​, ಗುಣವಂತೆ
|

Updated on: May 14, 2026 | 9:36 PM

Share

ಇತ್ತೀಚಿನ ದಿನಗಳಲ್ಲಿ ಕಿಡ್ನಿಯ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಗಟ್ಟಲು ಕೆಲವು ಆರೋಗ್ಯಕರ ಸಲಹೆಗಳನ್ನು ಅನುಸರಿಸುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಲಹೆಗಾರರಾದ ಡಾ. ಮೊಹಮ್ಮದ್ ಯೂಸುಫ್ ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡ ಅಂದರೆ ಕಿಡ್ನಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ಕೆಲವು ಆರೋಗ್ಯಕರ ಸಲಹೆಗಳನ್ನು ಅನುಸರಿಸುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಲಹೆಗಾರರಾದ ಡಾ. ಮೊಹಮ್ಮದ್ ಯೂಸುಫ್ (Dr. Mohammad Yousuff) ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು, ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಯಾವ ರೀತಿಯ ದಿನಚರಿಯನ್ನು ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿವರವಾದ ಮಾಹಿತಿ ನೀಡಿದ್ದಾರೆ. ಅವರು ಹೇಳುವ ಪ್ರಕಾರ, ನಾವು ಸೇವನೆ ಮಾಡುವ ಆಹಾರ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಆಹಾರ ಸಮತೋಲಿತವಾಗಿದ್ದಲ್ಲಿ ಅದರಲ್ಲಿಯೂ ಉಪ್ಪಿನಂಶ ಕಡಿಮೆ ಇರುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಇದೆಲ್ಲದರ ಜೊತೆಗೆ ವೈದ್ಯರ ಅನುಮತಿ ಇಲ್ಲದೆಯೇ ಯಾವುದೇ ಮಾತ್ರೆಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ ಇದು ಕಿಡ್ನಿಗೆ ಹಾನಿ ಮಾಡುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದಾರೆ. ಈ ಬಗೆಗಿನ ಮತ್ತಷ್ಟು ಮಾಹಿತಿ ಪಡೆಯಲು ಈ ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More