AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Health: ನಿಮ್ಮ ಕಣ್ಣಿನ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಿಂಪಲ್ ಟಿಪ್ಸ್

ನಿಮ್ಮ ಕಣ್ಣಿನ ಆರೋಗ್ಯ ಸುಧಾರಿಸಿಕೊಳ್ಳಲು ಉತ್ತಮ ಆಹಾರ ಪದ್ಧತಿ ನಿಮ್ಮದಾಗಿರಲಿ. ತರಕಾರಿಗಳು, ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Eye Health: ನಿಮ್ಮ ಕಣ್ಣಿನ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಿಂಪಲ್ ಟಿಪ್ಸ್
ಸಂಗ್ರಹ ಚಿತ್ರ
TV9 Web
| Edited By: |

Updated on: Oct 16, 2021 | 8:08 AM

Share

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ದೃಷ್ಟಿದೋಷದ ಸಮಸ್ಯೆ ಕಾಡುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ಕನ್ನಡಕ ಹಾಕಿಕೊಳ್ಳುವ ಪರಿಸ್ಥಿತಿ. ಹೀಗಿರುವಾಗ ಕಣ್ಣಿನ ಆರೋಗ್ಯದ ಕುರಿತಾಗಿ ಯೋಚಿಸಲೇಬೇಕು. ನಿಮ್ಮ ಸೂಕ್ಷ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೌಷ್ಟಿಕಯುಕ್ತ ಆಹಾರ ಸೇವಿಸುವುದು ಮುಖ್ಯವಾಗಿದೆ. ಆಹಾರ ಪದ್ಧತಿಯಲ್ಲಿ ಸುಧಾರಣೆಯ ಜತೆಗೆ ನಿಮ್ಮ ದೇಹವನ್ನು ಸದೃಢವಾಗಿಸಿಕೊಳ್ಳಿ. 

ಉತ್ತಮ ಆಹಾರ ಎಂದರೆ ನಿಮ್ಮ ಆಹಾರ ಪದ್ಧತಿಯಲ್ಲಿ ತಾಜಾ ತರಕಾರಿಗಳಿರಲಿ. ಉತ್ತಮ ಪೌಷ್ಟಿಕಯುಕ್ತ ಹಣ್ಣುಗಳನ್ನು ಸೇವಿಸಿ. ಆರೋಗ್ಯಕ್ಕೆ ಅಗತ್ಯವಿರುವ ದ್ವಿದಳ ಧಾನ್ಯಗಳನ್ನು ಸೇವಿಸಿ. ನೆನೆಸಿದ ಹೆಸರು ಕಾಳು, ಗೋಡಂಬಿ, ಕಡಲೆ, ದ್ರಾಕ್ಷಿ ಇವುಗಳಿಂದಲೂ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಜತೆಗೆ ನೀವು ನಿಮ್ಮ ಕಣ್ಣಿನ ಆರೋಗ್ಯದ ಸುರಕ್ಷತೆಗೆ ಏನು ಮಾಡಬೇಕು ಎಂಬುದು ಈ ಕೆಳಗಿನಂತಿದೆ ಪರಿಶೀಲಿಸಿ.

ಕ್ಯಾರೆಟ್​ನಲ್ಲಿ ವಿಟಮಿನ್ ಎ ಸಮೃದ್ಧವಾಗಿರುತ್ತದೆ. ದೃಷ್ಟಿ ಸುಧಾರಣೆಗೆ ಇದು ತುಂಬಾ ಪ್ರಯೋಜನಕಾರಿ. ವಾರಕ್ಕೆ ಎರಡು ಬಾರಿಯಾದರೂ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ದೇಹದ ಸದೃಢತೆಯ ಜತೆಗೆ ಕಣ್ಣಿನ ಆರೋಗ್ಯ ಸುಧಾರಿಸಲು ಸಹಾಯಕವಾಗಿದೆ.

ಆಮ್ಲಾ ರಸದಲ್ಲಿ ವಿಟಮಿನ್ ಸಿ ಇದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಆಮ್ಲಾ ಜ್ಯೂಸ್ ಕುಡಿಯುವ ಮೂಲಕ ಕಣ್ಣಿನ ಸುರಕ್ಷತೆ ಮಾಡಬಹುದು. ಕಣ್ಣಿನ ಆರೋಗ್ಯಕ್ಕೆ ಆಮ್ಲಾ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಕೊಳ್ಳಿ. ಜತೆಗೆ ಜೋಳದಲ್ಲಿಯೂ ಸಹ ಕಣ್ಣಿನ ಆರೋಗ್ಯ ಸುಧಾರಿಸುವ ಪೋಷಕಾಂಶಗಳಿರುತ್ತವೆ. ಜೋಳದಲ್ಲಿರುವ ಲುಟೀನ್​ನಂತಹ ಪದಾರ್ಥಗಳು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತವೆ.

ಹಸಿರು ಸೊಪ್ಪು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿರಲಿ. ಪಾಲಾಕ್ ರಸ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಷಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದೆ. ಹಾಗಿರುವಾಗ ಪಾಲಾಕ್​ನಿಂದ ತಯಾರಿಸುವ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಅರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

Mental Health: ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಸಮಸ್ಯೆಗೆ ಪರಿಹಾರಗಳು ಇಲ್ಲಿವೆ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ