AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ಸರಿಯಾಗಿ ಕ್ಲೀನ್ ಆಗದಿದ್ದರೆ ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡು ಮಲಬದ್ಧತೆಗೆ ಗುಡ್‌ಬೈ ಹೇಳಿ!

ಮಲಬದ್ಧತೆ ಒಂದು ದಿನದ ಸಮಸ್ಯೆಯಲ್ಲ. ಇದು ನಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯ ಪ್ರತಿಬಿಂಬವಾಗಿದೆ. ಫೈಬರ್‌ಯುಕ್ತ ಆಹಾರ, ಸಾಕಷ್ಟು ನೀರು, ನಿಯಮಿತ ವ್ಯಾಯಾಮ ಮತ್ತು ಉತ್ತಮ ನಿದ್ರೆ ಇವುಗಳ ಸಂಯೋಜನೆಯೇ ಆರೋಗ್ಯಕರ ಜೀರ್ಣಾಂಗಕ್ಕೆ ಮೂಲ. ಮನೆಮದ್ದುಗಳು ಕೆಲವರಿಗೆ ಸಹಾಯ ಮಾಡಬಹುದು, ಆದರೆ ಸಮಸ್ಯೆ ದೀರ್ಘಕಾಲ ಮುಂದುವರಿದರೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ.

ಹೊಟ್ಟೆ ಸರಿಯಾಗಿ ಕ್ಲೀನ್ ಆಗದಿದ್ದರೆ ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡು ಮಲಬದ್ಧತೆಗೆ ಗುಡ್‌ಬೈ ಹೇಳಿ!
Constipation ReliefImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on:Jul 19, 2026 | 8:55 PM

Share

ಮುಖ್ಯಾಂಶಗಳು

  • ಜೀರ್ಣಕ್ರಿಯೆ ಉತ್ತಮವಾಗಲು ಪ್ರತಿದಿನ ಪಾಲಿಸಬೇಕಾದ ಆರೋಗ್ಯಕರ ಅಭ್ಯಾಸಗಳು
  • ಫೈಬರ್, ನೀರು ಮತ್ತು ವ್ಯಾಯಾಮ: ಮಲಬದ್ಧಕ ನಿವಾರಣೆಯ ಮೂರು ಪ್ರಮುಖ ಸೂತ್ರಗಳು
  • ಹೊಟ್ಟೆ ಆರೋಗ್ಯ ಕಾಪಾಡಲು ಈ ಆಹಾರಗಳನ್ನು ತಪ್ಪದೇ ಸೇವಿಸಿ

ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ (Constipation) ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಅನಿಯಮಿತ ಆಹಾರ ಪದ್ಧತಿ, ಕಡಿಮೆ ನೀರು ಕುಡಿಯುವುದು, ಫೈಬರ್ ಕೊರತೆ, ದೈಹಿಕ ಚಟುವಟಿಕೆ ಇಲ್ಲದಿರುವುದು ಹಾಗೂ ಒತ್ತಡದ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಳಗ್ಗೆ ಹೊಟ್ಟೆ ಸಂಪೂರ್ಣ ಖಾಲಿಯಾಗದಿದ್ದರೆ ದಿನವಿಡೀ ಹೊಟ್ಟೆ ಉಬ್ಬರ, ಅಸಹನೆ, ಗ್ಯಾಸ್ಟ್ರಿಕ್‌, ಆಯಾಸ ಮತ್ತು ಹಸಿವು ಕಡಿಮೆಯಾಗುವಂತಹ ಸಮಸ್ಯೆಗಳು ಕಾಣಿಸಬಹುದು. ಇದಕ್ಕೆ ಕೆಲವು ಔಷಧಿಗಳನ್ನು ಸೇವಿಸುವ ಬದಲು, ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದರಿಂದ ಜೀರ್ಣಾಂಗದ ಆರೋಗ್ಯವನ್ನು ಉತ್ತಮವಾಗಿಡಬಹುದು. ತಜ್ಞರ ಪ್ರಕಾರ, ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳೇ ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಕಾರಿ.

ರಾತ್ರಿ ಮಲಗುವ ಮುನ್ನ ಈ ಅಭ್ಯಾಸಗಳನ್ನು ಮಾಡಿ

ಬೆಚ್ಚಗಿನ ನೀರಿನೊಂದಿಗೆ ತ್ರಿಫಲಾ ಸೇವನೆ: ಯುರ್ವೇದದಲ್ಲಿ ತ್ರಿಫಲಾ ಚೂರ್ಣವನ್ನು ಜೀರ್ಣಾಂಗದ ಆರೋಗ್ಯಕ್ಕೆ ಉತ್ತಮ ಔಷಧಿಯೆಂದು ಪರಿಗಣಿಸಲಾಗುತ್ತದೆ. ಇದು ಕರುಳಿನ ಚಲನೆಯನ್ನು ಉತ್ತೇಜಿಸಿ ಬೆಳಗ್ಗೆ ಮಲ ವಿಸರ್ಜನೆ ಸುಲಭವಾಗುವಂತೆ ಮಾಡುತ್ತದೆ. ಆದರೆ ವೈದ್ಯರ ಸಲಹೆಯಂತೆ ರಾತ್ರಿ ಮಲಗುವ ಮುನ್ನ ಒಂದು ಟೀ ಸ್ಪೂನ್ ತ್ರಿಫಲಾ ಚೂರ್ಣವನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಸೇವಿಸಬಹುದು.

ಬೆಚ್ಚಗಿನ ನೀರು ಮತ್ತು ನಿಂಬೆ ರಸ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸ ಸೇರಿಸಿ ಕುಡಿಯುವುದರಿಂದ ಜೀರ್ಣಕ್ರಿಯೆ ಚುರುಕಾಗುತ್ತದೆ. ಇದು ಕರುಳಿನ ಚಲನೆಯನ್ನು ಸುಧಾರಿಸಲು ನೆರವಾಗಬಹುದು.

ಫೈಬರ್‌ಯುಕ್ತ ಆಹಾರ ಹೆಚ್ಚಿಸಿ: ಮಲಬದ್ಧತೆಯ ಪ್ರಮುಖ ಕಾರಣಗಳಲ್ಲಿ ಫೈಬರ್ ಕೊರತೆಯೂ ಒಂದು. ಹಾಗಾಗಿ ಸೇವಿಸುವ ಆಹಾರದಲ್ಲಿ ಪಪ್ಪಾಯಿ, ಸೀಬೆಹಣ್ಣು, ಬಾಳೆಹಣ್ಣು, ಓಟ್ಸ್, ಸಂಪೂರ್ಣ ಧಾನ್ಯಗಳು, ಹಸಿರು ಸೊಪ್ಪು, ಬೀನ್ಸ್ ಹಾಗೂ ಬೇಳೆಕಾಳುಗಳು ಮತ್ತು ರಾತ್ರಿ ನೆನೆಸಿದ ಒಣದ್ರಾಕ್ಷಿ ಹಾಗೂ ಅಂಜೂರದಂತಹ ಆಹಾರಗಳನ್ನು ಸೇವಿಸಿ. ಇವು ಮಲವನ್ನು ಮೃದುವಾಗಿಸಿ ಸುಲಭವಾಗಿ ಹೊರಬರಲು ಸಹಾಯ ಮಾಡುತ್ತವೆ.

ಹರಳೆಣ್ಣೆ (Castor Oil) ವೈದ್ಯರ ಸಲಹೆಯೊಂದಿಗೆ ಮಾತ್ರ: ಹರಳೆಣ್ಣೆಯನ್ನು ಹಿಂದಿನಿಂದಲೂ ನೈಸರ್ಗಿಕ ಲ್ಯಾಕ್ಸೇಟಿವ್ ಆಗಿ ಬಳಸಲಾಗುತ್ತಿತ್ತು. ಆದರೆ ಗರ್ಭಿಣಿಯರು, ಮಕ್ಕಳು ಅಥವಾ ದೀರ್ಘಕಾಲದ ಆರೋಗ್ಯ ಸಮಸ್ಯೆಯಿರುವವರು ವೈದ್ಯರ ಸಲಹೆಯಿಲ್ಲದೆ ಇದನ್ನು ಬಳಸಬಾರದು.

ಇದನ್ನೂ ಓದಿ: ರಾತ್ರಿ ಊಟದ ನಂತರ ಈ ತಪ್ಪುಗಳನ್ನು ಮಾಡಬೇಡಿ; ಜೀರ್ಣಕ್ರಿಯೆ ಹಾಳಾಗಬಹುದು

ಸಾಕಷ್ಟು ನೀರು ಕುಡಿಯಿರಿ: ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರು ಕುಡಿಯುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುವುದಿಲ್ಲ. ಇದರಿಂದ ಮಲ ಗಟ್ಟಿಯಾಗುವುದನ್ನು ತಡೆಯಬಹುದು.

ಪ್ರತಿದಿನ ಸ್ವಲ್ಪ ವ್ಯಾಯಾಮ ಮಾಡಿ: ಪ್ರತಿದಿನ 20– 30 ನಿಮಿಷ ವೇಗದ ನಡಿಗೆ, ಯೋಗ ಅಥವಾ ಸಣ್ಣ ವ್ಯಾಯಾಮ ಮಾಡುವುದರಿಂದ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ.

ಮಲಬದ್ಧತೆಯನ್ನು ಕಡಿಮೆ ಮಾಡಲು ಸಲಹೆಗಳು

  • ಪ್ರತಿದಿನ ಒಂದೇ ಸಮಯಕ್ಕೆ ಊಟ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.
  • ಬೆಳಗಿನ ಉಪಹಾರವನ್ನು ತಪ್ಪಿಸಬೇಡಿ.
  • ಊಟವನ್ನು ನಿಧಾನವಾಗಿ ಚೆನ್ನಾಗಿ ಜಗಿದು ಸೇವಿಸಿ.
  • ಹೆಚ್ಚು ಸಂಸ್ಕರಿತ ಆಹಾರ, ಬೇಕರಿ ಪದಾರ್ಥಗಳು ಮತ್ತು ಫಾಸ್ಟ್‌ಫುಡ್ ಸೇವನೆಯನ್ನು ಕಡಿಮೆ ಮಾಡಿ.
  • ದೀರ್ಘಕಾಲ ಕುಳಿತು ಕೆಲಸ ಮಾಡುವವರು ಪ್ರತಿ ಗಂಟೆಗೆ ಒಮ್ಮೆ ಎದ್ದು 5 ನಿಮಿಷ ನಡೆಯಿರಿ.
  • ಶೌಚಕ್ಕೆ ಹೋಗಬೇಕು ಎಂದು ಅನಿಸುವುದನ್ನು ತಡೆಯಬೇಡಿ.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಒಂದು ವಾರಕ್ಕಿಂತ ಹೆಚ್ಚು ಕಾಲ ಮಲಬದ್ಧತೆ ಮುಂದುವರಿದರೆ, ಮಲದಲ್ಲಿ ರಕ್ತ ಕಾಣಿಸಿದರೆ, ತೀವ್ರ ಹೊಟ್ಟೆನೋವು ಅಥವಾ ವಾಂತಿ ಕಂಡುಬಂದರೆ, ತೂಕ ಅನಿರೀಕ್ಷಿತವಾಗಿ ಕಡಿಮೆಯಾಗುತ್ತಿದ್ದರೆ, ನಿರಂತರವಾಗಿ ಲ್ಯಾಕ್ಸೇಟಿವ್ ಬಳಸಬೇಕಾದ ಪರಿಸ್ಥಿತಿಯಂತಹ ಲಕ್ಷಣಗಳು ಕಂಡುಬಂದರೆ ಗ್ಯಾಸ್ಟ್ರೋಎಂಟರಾಲಜಿಸ್ಟ್‌ರನ್ನು ಸಂಪರ್ಕಿಸುವುದು ಅಗತ್ಯ.

ಸೂಚನೆ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ಯಾವುದೇ ಔಷಧಿ ಅಥವಾ ಆಯುರ್ವೇದ ಉತ್ಪನ್ನಗಳನ್ನು ವೈದ್ಯರ ಸಲಹೆಯಿಲ್ಲದೆ ನಿಯಮಿತವಾಗಿ ಸೇವಿಸಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sun, 19 July 26

Follow Us
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ